ಮುಂದಿನ ಶೈಕ್ಷಣಿಕ ವರ್ಷದಿಂದ ಶಾಲೆಯಲ್ಲಿ ಬೇರೆ ಧರ್ಮದ ಮಕ್ಕಳಿಗೆ ಪ್ರವೇಶ ಇಲ್ಲ
ಬೆಂಗಳೂರು: ಮುಂದಿನ ಶೈಕ್ಷಣಿಕ ವರ್ಷದಿಂದ ರಿಚರ್ಡ್ ಕ್ಲಾರೆನ್ಸ್ ಶಾಲೆ ಬೇರೆ ಧರ್ಮದ ಮಕ್ಕಳಿಗೆ ಪ್ರವೇಶ ನೀಡುವುದಿಲ್ಲ ಎಂದು ಆಡಳಿತ ಮಂಡಳಿ ತಿಳಿಸಿದೆ.
ರಿಚರ್ಡ್ ಕ್ಲಾರೆನ್ಸ್ ಶಾಲೆಯಲ್ಲಿ ಬೈಬಲ್ ಕಲಿಯುವುದನ್ನು ಕಡ್ಡಾಯಗೊಳಿಸಿತ್ತು. ಈ ಹಿನ್ನೆಲೆಯಲ್ಲಿ ತೀವ್ರ ವಿರೋಧ ವ್ಯಕ್ತವಾಗಿತ್ತು. ಅಷ್ಟೇ ಅಲ್ಲದೇ ಸರ್ಕಾರದಿಂದ ಕ್ಲಾರೆನ್ಸ್ ಶಾಲೆಗೆ ನೋಟಿಸ್ ಕೂಡ ನೀಡಲಾಗಿತ್ತು. ಈ ಹಿನ್ನಲೆಯಲ್ಲಿ ಮುಂದಿನ ವರ್ಷದಿಂದ ಕ್ರಿಶ್ಚಿಯನ್ ಮಕ್ಕಳಿಗೆ ಮಾತ್ರ ಪ್ರವೇಶ ನೀಡಿ, ಹಿಂದೂ ಮಕ್ಕಳಿಗೆ ಪ್ರವೇಶ ಮಾಡಿಕೊಳ್ಳದಂತೆ ಶಾಲಾ ಆಡಳಿತ ಮಂಡಳಿ ನಿರ್ಧಾರ ಮಾಡಿದೆ.
ಈ ಕುರಿತು ಸ್ಪಷ್ಟನೆ ನೀಡಿರುವ ಆಡಳಿತ ಮಂಡಳಿ ಬೈಬಲ್ ಬಗ್ಗೆ ಕ್ರಿಶ್ಚಿಯನ್ ಮಕ್ಕಳಿಗಷ್ಟೆ ನೈತಿಕ ಬೋಧನೆ ಮಾಡಲಾಗ್ತಿತ್ತು. ನಮ್ಮ ಶಾಲೆಯಲ್ಲಿ ಬೈಬಲ್ ನೈತಿಕ ಬೋಧನೆ ಮಾಡುತ್ತಿದ್ದೆವು. ಧರ್ಮ ಬೋಧನೆ ಮಾಡುತ್ತಿರಲಿಲ್ಲ ಎಂದು ಹೇಳಿದೆ.
ಅಲ್ಲದೇ ಸರ್ಕಾರ ಭಗವದ್ಗೀತೆ ಕಡ್ಡಾಯಗೊಳಿಸಿದರೆ ಸ್ವಾಗತಿಸುತ್ತೇವೆ. ಬೈಬಲ್ನಲ್ಲಿ ಪಾಸಿಂಗ್ ಮಾರ್ಕ್ಸ್ ತಗೆದುಕೊಳ್ಳಬೇಕು ಎಂದು ಕಡ್ಡಾಯವಿರಲಿಲ್ಲ, ಮಕ್ಕಳು ಪ್ರಶಸ್ತಿ ಪಡೆಯಲಷ್ಟೇ ಮಾಡಿದ್ದಾಗಿತ್ತು ಎಂದು ತಿಳಿಸಿದೆ.









