ಬೆಂಗಳೂರು : ಸಿಲಿಕಾನ್ ಸಿಟಿ ಬೆಂಗಳೂರಿನ ಯಲಹಂಕ ಮೇಲ್ಸೇತುವೆಗೆ ಸಾವರ್ಕರ್ ಹೆಸರು ಇಡುವ ವಿಚಾರ ರಾಜ್ಯ ರಾಜಕೀಯದಲ್ಲಿ ಪರ ವಿರೋಧ ಚರ್ಚೆ ಹುಟ್ಟು ಹಾಕಿದೆ. ಅಲ್ಲದೆ ಆಡಳಿತ ಮತ್ತು ವಿರೋಧ ಪಕ್ಷಗಳ ವಾಗ್ವಾದಕ್ಕೆ ಕಾರಣವಾಗಿದೆ. ಈ ನಡುವೆ ಯಲಹಂಕ ಮೇಲ್ಸೇತುವೆಗೆ ಸಾವರ್ಕರ್ ಹೆಸರು ಇಡುವುದನ್ನು ಮುಂದೂಡಲಾಗಿದೆ ಎಂದು ಸಚಿವ ಸಿಟಿ ರವಿ ಹೇಳಿದ್ದಾರೆ.
ಯಲಹಂಕ ಮೇಲ್ಸೇತುವೆಗೆ ಸಾವರ್ಕರ್ ಹೆಸರು ಇಡುವುದರ ಬಗ್ಗೆ ಟ್ವೀಟ್ ಮಾಡಿರುವ ಸಚಿವ ಸಿಟಿ ರವಿ, ಕೆಲವು ನಿಯಮಗಳನ್ನು ಪಾಲಿಸಬೇಕಾಗಿರುವುದರಿಂದ ಯಲಹಂಕ ಮೇಲ್ಸೇತುವೆ ವೀರ್ ಸಾವರ್ಕರ್ ಹೆಸರಿಡುವುದನ್ನು ಮುಂದೂಡಲಾಗಿದೆ. ಇದು ನೂರಕ್ಕೆ ನೂರರಷ್ಟು ಸತ್ಯ ಯಾರಿಗೂ ಅನುಮಾನ ಬೇಡ. ನಮ್ಮದು ಬರಿ ರಾಜಕಾರಣವಲ್ಲ. ಸಿದ್ಧಾಂತ ಬದ್ಧ ರಾಜಕೀಯ ಎಂದು ವಿಪಕ್ಷಗಳಿಗೆ ಸಚಿವ ಸಿಟಿ ರವಿ ಟಾಂಗ್ ಕೊಟ್ಟಿದ್ದಾರೆ. ಯಲಹಂಕ ಮೇಲ್ಸೇತುವೆಗೆ ಸಾವರ್ಕರ್ ಹೆಸರು ಇಡುವ ವಿಚಾರ ಸದ್ಯಕ್ಕೆ ಈ ವಿವಾದ ತಣ್ಣಗಾಗಿದೆ. ಆದರೆ ಸದಾ ಬೂದಿ ಮುಚ್ಚಿದ ಕೆಂಡದಂತೆ ಇದ್ದೆ ಇರುತ್ತದೆ ಎಂದು ರಾಜಕೀಯ ವಲಯದಲ್ಲಿ ಚರ್ಚೆ ನಡೆಯುತ್ತಿದೆ.








