ಕಾರು-ಲಾರಿ ನಡುವೆ ಅಪಘಾತ | ಮಹಿಳೆ ಸಾವು
ಬೆಂಗಳೂರು: ಕಾರು-ಲಾರಿ ನಡುವೆ ಅಪಘಾತ ಸಂಭವಿಸಿ, ಕಾರಿನಲ್ಲಿದ್ದ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬ್ಯಾಡರಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಸುಲೋಚನ (24) ಮೃತ ದುರ್ದೈವಿ ಧರ್ಮಸ್ಥಳದಿಂದ ಬರುವಾಗ ನೈಸ್ ರಸ್ತೆಯಲ್ಲಿ ಮಧ್ಯರಾತ್ರಿ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಮಗು ಸೇರಿ ನಾಲ್ವರು ಗಾಯಗೊಂಡಿದ್ದಾರೆ.
ಅನೇಕಲ್ ಮೂಲದ ಮುರಳಿ ಎಂಬುವವರ ಕುಟುಂಬ ಧರ್ಮಸ್ಥಳಕ್ಕೆ ಹೋಗಿ ಕಾರಿನಲ್ಲಿ ವಾಪಸ್ ಆಗುತ್ತಿದ್ದರು. ಈ ವೇಳೆ ವೇಗವಾಗಿ ಹೋಗುತ್ತಿದ್ದ ಲಾರಿಯು ಕಾರಿಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಕಾರು ನಜ್ಜುಗುಜ್ಜಾಗಿದೆ.
ಅಪಘಾತದಲ್ಲಿ ಸುಲೋಚನ ಸಾವನ್ನಪ್ಪಿದ್ದು, ಮುರಳಿ ಸೇರಿ ನಾಲ್ವರು ಗಾಯಗೊಂಡಿದ್ದಾರೆ. ಸ್ಥಳಕ್ಕೆ ಬ್ಯಾಡರಹಳ್ಳಿ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.








