ಕೊರೊನಾ ನಿಯಂತ್ರಿಸಲು 500 ಆರೋಗ್ಯ ಸಿಬ್ಬಂದಿ ನೇಮಕ
ಬೆಂಗಳೂರು: ನಗರದಲ್ಲಿ ಕೊರೊನಾ ಪ್ರಕರಣಗಳು ಏರಿಕೆಯಾಗುತ್ತಿದ್ದು, ಸೋಂಕನ್ನು ನಿಯಂತ್ರಿಸಲು ಬಿಬಿಎಂಪಿ ಆರೋಗ್ಯ ಸಿಬ್ಬಂದಿ ನೇಮಿಸಿಕೊಳ್ಳಲು ಮುಂದಾಗಿದೆ.
ಸಿಲಿಕಾನ್ ಸಿಟಿಯಲ್ಲಿ ಕೊರೊನಾ ಪರೀಕ್ಷೆಗಳನ್ನು ಹೆಚ್ಚಿಸಲು ಪಾಲಿಕೆಯಿಂದ 500 ಸಿಬ್ಬಂದಿಯನ್ನು ಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಂಡಿದೆ. ನಗರದಲ್ಲಿ 100ಕ್ಕೂ ಹೆಚ್ಚು ಪ್ರಕರಣಗಳು ವರದಿಯಾಗುತ್ತಿದ್ದು, ಕರ್ತವ್ಯ ನಿರ್ವಹಣೆಗೆ ಸಿಬ್ಬಂದಿ ಕೊರತೆ ಎದುರಾಗಿದೆ. ಹಾಗಾಗಿ ಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲು ಮುಂದಾಗಿದೆ ಎಂದು ಹೇಳಿದೆ.
ನಗರದಲ್ಲಿ ಸರ್ಕಾರ 10 ಸಾವಿರ ಟೆಸ್ಟಿಂಗ್ ಗುರಿ ತಲುಪಲು ಟಾರ್ಗೆಟ್ ನೀಡಿದೆ. ಈಗಾಗಲೇ 200 ಸ್ವಾಬ್ ಕಲೆಕ್ಟರ್, 200 ಡೇಟಾ ಆಪರೇಟರ್ ಹಾಗೂ 100 ವೈದ್ಯರನ್ನು ನೇಮಕ ಮಾಡಿಕೊಳ್ಳಲಾಗುತ್ತಿದೆ ಎಂದು ತಿಳಿಸಿದೆ.
ಇನ್ನೂ ಕೊರೊನಾ ಸೋಂಕಿತರ ಸಂಖ್ಯೆ ಏರಿಳಿತವಾಗಿ ಸಾಗುತ್ತಿದ್ದು, ಕಳೆದ 24 ಗಂಟೆಯಲ್ಲಿ 108 ಹೊಸ ಕೋವಿಡ್ ಪ್ರಕರಣಗಳು ಪತ್ತೆಯಾಗಿವೆ. ನಿನ್ನೆ 10,566 ಟೆಸ್ಟಿಂಗ್ ನಡೆಸಲಾಗಿದ್ದು, 1,780 ಸಕ್ರೀಯ ಪ್ರಕರಣಗಳಿವೆ.








