ಕನ್ನಡ ಪ್ರದೇಶಗಳು ಮಹಾರಾಷ್ಟ್ರದಲ್ಲಿವೆ | ಹೇಗೆ ತೆಗೆದುಕೊಳ್ಳಬೇಕು ಅಂತ ಗೊತ್ತಿದೆ : ಸಿಎಂ ಬೊಮ್ಮಾಯಿ
ಬೆಂಗಳೂರು: ನಮ್ಮ ಒಂದಿಂಚೂ ಜಾಗವನ್ನೂ ಬಿಟ್ಟು ಕೊಡುವ ಪ್ರಶ್ನೆಯೇ ಇಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಮಹಾರಾಷ್ಟ್ರ ಡಿಸಿಎಂ ಅಜಿತ್ ಪವಾರ್ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು ಈ ಕುರಿತಾಗಿ ಈಗಾಗಲೇ ಎಲ್ಲ ನಿರ್ಣಯವಾಗಿದೆ. ಮಹಾರಾಷ್ಟ್ರದಲ್ಲಿ ರಾಜಕಾರಣ ಯಾವಾಗ ಇಕ್ಕಟ್ಟಿಗೆ ಸಿಲುಕುತ್ತದೋ ಆಗ ಕರ್ನಾಟಕದ ಗಡಿ ವಿಚಾರದ ಬಗ್ಗೆ ಅವರು ಮಾತನಾಡುತ್ತಾರೆ ಎಂದರು.
ಅಲ್ಲದೇ ಕನ್ನಡ ಮಾತನಾಡುವ ಪ್ರದೇಶಗಳು ಮಹಾರಾಷ್ಟ್ರದಲ್ಲೂ ಇವೆ, ಅದನ್ನು ಹೇಗೆ ತೆಗೆದುಕೊಳ್ಳಬೇಕು ಅಂತ ನಾವು ಯೋಚಿಸುತ್ತಿದ್ದೇವೆ. ರಾಜಕೀಯ ಉಳಿವಿಗಾಗಿ ಭಾಷೆ ವಿಚಾರ, ಗಡಿ ವಿಚಾರದ ಬಗ್ಗೆ ಕ್ಯಾತೆ ತೆಗೆಯುವುದು ಅವರ ಸಣ್ಣತನ. ಅದನ್ನು ಕೈಬಿಡಬೇಕೆಂದು ನಾನು ಕೇಳಿಕೊಳ್ಳುತ್ತೇನೆ. ಈ ರೀತಿಯ ಪದ ಬಳಕೆ ಸರಿಯಲ್ಲ ಎಂದರು.








