ಗರ್ಬಿಣಿ ಮೇಲೆ ಅತ್ಯಾಚಾರವೆಸಗಿದ ದುರುಳರು
ಅಮರಾವತಿ: ಆಂಧ್ರಪ್ರದೇಶದ ರೆಪಲ್ಲೆ ರೈಲು ನಿಲ್ದಾಣದ ಪ್ಲಾಟ್‌ಫಾರ್ಮ್ನಲ್ಲಿ ಮಲಗಿದ್ದ ಗರ್ಭಿಣಿಯ ಮೇಲೆ ಕ್ರೂರಿಗಳು ಅತ್ಯಾಚಾರವೆಸಗಿದ್ದಾರೆ.
ಮಹಿಳೆಯು ತನ್ನ ಪತಿ ಮತ್ತು ಮಕ್ಕಳೊಂದಿಗೆ ರೈಲ್ವೆ ನಿಲ್ದಾಣದ ಪ್ಲಾಟ್‌ಫಾರ್ಮ್ನಲ್ಲಿ ಮಲಗಿದ್ದರು. ಈ ವೇಳೆ ಓರ್ವ ಅಪ್ರಾಪ್ತ ಸೇರಿ ಮೂವರು ಆರೋಪಿಗಳು ಅವರ ಬಳಿಗೆ ಬಂದು ಪತಿಯನ್ನು ಹಿಡಿದು ಥಳಿಸಿದ್ದಾರೆ.
ನಂತರ ಗರ್ಭಿಣಿಯನ್ನು ಸಮೀಪದ ಪೊದೆಗೆ ಕರೆದೊಯ್ದು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ. ಮೂವರು ಆರೋಪಿಗಳು ಕುಡಿದ ಅಮಲಿನಲ್ಲಿ ಪತಿ ಮೇಲೆ ಹಲ್ಲೆ ನಡೆಸಿ ಮಹಿಳೆಯ ಮೇಲೆ ಅತ್ಯಾಚಾರ ಎಸಗಿದ್ದಾರೆ ಎಂದು ಬಪಟ್ಲಾ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಪಿ) ಮಾಹಿತಿ ನೀಡಿದ್ದಾರೆ.
ಘಟನೆಗೆ ಸಂಬಂಧಿಸಿದಂತೆ ರೆಪಲ್ಲೆ ಪೊಲೀಸರು ಇಬ್ಬರು ಅಪ್ರಾಪ್ತರು ಸೇರಿ ಮೂವರನ್ನು ಬಂಧಿಸಿದ್ದಾರೆ.








