ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಉಹಾಪೋಹ : ಅರುಣ್ ಸಿಂಗ್
ಬೆಂಗಳೂರು: ಉನ್ನತ ಶಿಕ್ಷಣ ಸಚಿವ ಅಶ್ವತ್ ನಾರಾಯಾಣ ಅವರ ವಿರುದ್ಧ ಮಾಡಿರುವ ಬಷ್ಟಾಚಾರ ಆರೋಪ ಷಡ್ಯಂತರವಾಗಿದ್ದು, ಷಡ್ಯಂತರಕ್ಕೆ ಉತ್ತರ ಕೊಡುವ ಅಗತ್ಯವಿಲ್ಲವೆಂದು ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಪರೋಕ್ಷವಾಗಿ ಮಾಜಿ ವಿದಾನ್ ಪರಿಷತ್ ಸದಸ್ಯ ವಿ. ಎಸ್. ಉಗ್ರಪ್ಪ ವಿರುದ್ಧ ಕಿಡಿಕಾರಿದರು.
ಸಚಿವ ಅಶ್ವತ್ಥ ನಾರಾಯಣ ವಿರುದ್ಧ ಭ್ರಷ್ಟಾಚಾರದ ಆರೋಪವೂ ಷಡ್ಯಂತ್ರ. ಅವರ ಷಡ್ಯಂತ್ರಕ್ಕೆ ಉತ್ತರ ಕೊಡುವ ಅಗತ್ಯವಿಲ್ಲ ಎಂದು ಸಚಿವ ಅಶ್ವತ್ಥನಾರಾಯಣ್ ಅವರನ್ನು
ಬಿಜೆಪಿ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಕಾಂಗ್ರೆಸ್ ಪಕ್ಷದ ಹೆಸರೇ ಕಾನ್ಸ್ಪಿರೆಸ್ಸಿ (ಷಡ್ಯಂತ್ರ) ಪಾರ್ಟಿಯಾಗಿದೆ. ಬಿಜೆಪಿ ಸಕಾರಾತ್ಮಕವಾಗಿ ಕಾರ್ಯ ಸಕಾರಾತ್ಮಕ ಬೆಳವಣಿಗೆಯಲ್ಲಿ ಕೆಲಸ ಮಾಡುತ್ತಿದ್ದು, ಹೀಗಾಗಿ ದೇಶಾದ್ಯಂತ ಕಾಂಗ್ರೆಸ್ ನಾಶವಾಗುತ್ತಿದೆ. ಈ ಸಂದರ್ಭದಲ್ಲಿ ಬರೀ ಷಡ್ಯಂತ್ರ ಮಾಡುವುದರಲ್ಲಿ ಕಾಂಗ್ರೆಸ್ ನಾಯಕರು ನಿರತರಾಗಿದ್ದಾರೆ ಎಂದು ಟಾಂಗ್ ಕೊಟ್ಟರು.
ಹಾಗೇ ದೇಶದ ಗೃಹ ಮಂತ್ರಿ ಅಮಿತ್ ಶಾ ಬೆಂಗಳೂರಿಗೆ ಬಂದಿದ್ದಾರೆ. ಖೇಲೋ ಇಂಡಿಯಾ ಸಮಾರೋಪ ಸಮಾರಂಭ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದು, ಇದೀಗ ಸಿಎಂ ಮನೆಯಲ್ಲಿ ಎಲ್ಲಾ ಶಾಸಕರು, ಸಚಿವರು, ಪ್ರಮುಖರು ಒಟ್ಟಿಗೆ ಸೇರಿ ಊಟ ಮಾಡುತ್ತಿದ್ದೇವೆ. ಅಲ್ಲಿಯೇ ಅಮಿತ್ ಶಾ ಜೊತೆ ಮುಕ್ತವಾಗಿ ಚರ್ಚೆ ಮಾಡುತ್ತೇವೆ ಎಂದು ಅರುಣ್ ಸಿಂಗ್ ಮಾಹಿತಿ ನೀಡಿದರು.
ಅಲ್ಲದೇ ರಾಜ್ಯದಲ್ಲಿ ಮತ್ತೆ ನಾಯಕತ್ವ ಬದಲಾವಣೆ ಎಂಬುದು ಉಹಾಪೋಹ. ಬೊಮ್ಮಾಯಿ ಅವರೇ ಮುಖ್ಯಮಂತ್ರಿ ಆಗಿ ಮುಂದುವರೆಯಲಿದ್ದಾರೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕಾಮನ್ ಮ್ಯಾನ್ ಮುಖ್ಯಮಂತ್ರಿ. ಒಳ್ಳೆಯ ಆಡಳಿತ ಕೊಡುತ್ತಿದ್ದಾರೆ. ಹೀಗಾಗಿ ಕಾಲ್ಪನಿಕ ಪ್ರಶ್ನೆಗಳಿಗೆ ಉತ್ತರವಿಲ್ಲ ಎಂದು ಹೇಳಿದರು.
ಹಾಗೇ ಕಾಮನ್ ಮ್ಯಾನ್, ಜನ ಮತ್ತೆ ಬೊಮ್ಮಾಯಿ ಮುಖ್ಯಮಂತ್ರಿ ಆಗಲಿ ಎಂದು ಬಯಸುತ್ತಿದ್ದಾರೆ. ಸಚಿವ ಸಂಪುಟ ವಿಸ್ತರಣೆ ಅಥವಾ ಪುನಾರಚನೆ ಮುಖ್ಯಮಂತ್ರಿಗಳ ವಿವೇಚನೆಗೆ ಬಿಟ್ಟ ವಿಚಾರ. ಇಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಜೊತೆ ಬೊಮ್ಮಾಯಿ ಚರ್ಚಿಸಬಹುದು ಎಂದು ಹೇಳಿದರು.