ಭಾರತ – ಬಾಂಗ್ಲಾ ಗಡಿ ಪ್ರದೇಶಕ್ಕೆ ಬೇಟಿ ನೀಡಿ ಪರಿಶೀಲನೆ ನಡೆಸಿದ ಅಮಿತ್ ಶಾ…
ಇಂದು ಕೋಲ್ಕತ್ತಾದಲ್ಲಿ ಬಿಜೆಪಿ ಕಾರ್ಯಕರ್ತ ನಿಗೂಢ ಸಾವಿನಪ್ಪಿರುವ ಕಾರಣದಿಂದಾಗಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಇಂದು ನಗರದಲ್ಲಿ ಆಯೋಜಿಸಿದ್ದ ಕಾರ್ಯಕ್ರಮಗಳನ್ನು ರದ್ದುಗೊಳಿಸಿದ್ದಾರೆ. ಅಮಿತ್ ಶಾ ಎರಡು ದಿನಗಳ ಕಾಲ ಬಂಗಾಳ ಪ್ರವಾಸದಲ್ಲಿದ್ದಾರೆ. ಅಮಿತ್ ಶಾ ಅವರು ವಿಮಾನ ನಿಲ್ದಾಣದಿಂದ ನೇರವಾಗಿ ಚಿತ್ಪುರದಲ್ಲಿರುವ ಮೃತ ಕಾರ್ಮಿಕರ ನಿವಾಸಕ್ಕೆ ಭೇಟಿ ನೀಡುವ ಸಾಧ್ಯತೆಯಿದೆ.
ಇಂದು ಬೆಳಗ್ಗೆ ಬಿಜೆಪಿ ಯುವ ಮೋರ್ಚಾ ನಾಯಕ ಅರ್ಜುನ್ ಚೌರಾಸಿಯಾ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಈ ಸಾವಿನ ಹಿಂದೆ ಟಿಎಂಸಿ ಕೈವಾಡವಿದೆ ಎಂದು ಬಿಜೆಪಿ ನಾಯಕರು ಆರೋಪಿಸುತ್ತಿದ್ದಾರೆ. ಈ ಸುದ್ದಿಯು ಕ್ಷೇತ್ರದಲ್ಲಿ ಭಾರೀ ರಾಜಕೀಯ ಸಂಚಲನಕ್ಕೆ ಕಾರಣವಾಗಿದೆ.
ಕೂಚ್ ಬೆಹಾರ್ ಜಿಲ್ಲೆಯ ಮೆಖ್ಲಿಗಂಜ್‌ನಲ್ಲಿರುವ ಭಾರತ-ಬಾಂಗ್ಲಾದೇಶ ಗಡಿಯ ತೀನ್ ಬಿಘಾ ಕಾರಿಡಾರ್‌ಗೆ ಭೇಟಿ ನೀಡಿದ ಕೇಂದ್ರ ಸಚಿವರು ಗಡಿ ಭದ್ರತಾ ಪಡೆ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು. ಅವರೊಂದಿಗೆ ರಾಜ್ಯ ವಿರೋಧ ಪಕ್ಷದ ನಾಯಕ ಸುವೇಂದು ಅಧಿಕಾರಿ, ರಾಜ್ಯ ಬಿಜೆಪಿ ಅಧ್ಯಕ್ಷ ಶ್ರೀ ಸುಕಾಂತ ಮಜುಂದಾರ್ ಮತ್ತು ಸಂಸದ ನಿಶಿತ್ ಪ್ರಮಾಣಿಕ್ ಸಾಥ್ ನೀಡಿದರು.
ಅಮಿತ್ ಶಾ ಅವರು ಬಿಎಸ್‌ಎಫ್ ಜವಾನರೊಂದಿಗೆ ಸ್ವಲ್ಪ ಸಮಯ ಮಾತನಾಡಿದರು. ನಂತರ, ಅವರು ಕುಚಲಿಬಾರಿಯ ಜಿಗಬರಿಯಲ್ಲಿರುವ ಸ್ಥಳೀಯ ಬಾರ್ಡರ್ ಔಟ್ ಪೋಸ್ಟ್‌ಗೆ ಭೇಟಿ ನೀಡಿದರು ಮತ್ತು ಗಡಿ ಪರಿಸ್ಥಿತಿಯನ್ನು ಸಹ ಪರಿಶೀಲಿಸಿದರು.