ಪದ್ಮಶ್ರೀ ಪುರಸ್ಕೃತರಾದ ಸುಕ್ರಿ ಬೊಮ್ಮಗೌಡ ಆಸ್ಪತ್ರೆಗೆ ದಾಖಲು…..
ಪದ್ಮಶ್ರೀ ಪುರಸ್ಕೃತರಾದ ಸುಕ್ರಿ ಬೊಮ್ಮಗೌಡ ಅವರು ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದು, ಮಂಗಳೂರಿನ ಕೆಎಂಸಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತದೆ.
ಕಳೆದ ಕೆಲವು ಸಮಯಗಳಿಂದ ಸುಕ್ರಿ ಬೊಮ್ಮಗೌಡ ಅವರಿಗೆ ಉಸಿರಾಟದ ಸಮಸ್ಯೆ ಇದ್ದು, ಇದಕ್ಕೆ ಕಾರವಾರ ವೈದ್ಯರ ಸಲಹೆಯಂತೆ ಮನೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಇದರ ಜೊತೆಗೆ ಕಳೆದ ನಾಲ್ಕೈದು ದಿನದಿಂದ ತಲೆಸುತ್ತುವಿಕೆ ಕಾಣಿಸಿಕೊಂಡಿತ್ತು. ವೈದ್ಯರ ಸಲಹೆಯ ಮೇರೆಗೆ ಮಂಗಳೂರಿನ ಜ್ಯೋತಿ ಕೆಎಂಸಿ ಆಸ್ಪತ್ರೆಗೆ ಅವರನ್ನು ದಾಖಲಿಸಲಾಗಿದೆ.
ಉತ್ತರಕನ್ನಡ ಜಿಲ್ಲೆಯ ಅಂಕೋಲಾದ ಹಾಲಕ್ಕಿ ಒಕ್ಕಲಿಗ ಜನಾಂಗಕ್ಕೆ ಸೇರಿದ ಸುಕ್ರಿ ಬೊಮ್ಮಗೌಡ ಅವರು ಸುಪ್ರಸಿದ್ಧ ಜಾನಪದ ಗಾಯಕಿಯಾಗಿದ್ದಾರೆ. ಸುಮಾರು ೫೦೦೦ ಹಾಲಕ್ಕಿ ಹಾಡುಗಳು ಕಂಠಪಾಟವಾಗಿವೆ ಅವರು ಜಾನಪದ ಕಲೆಗೆ ನೀಡಿದ ಕೊಡುಗೆಗಳಿಗಾಗಿ ಮತ್ತು ಸಾಂಪ್ರದಾಯಿಕ ಬುಡಕಟ್ಟು ಸಂಗೀತವನ್ನು ಸಂರಕ್ಷಿಸುವ ಕಾರ್ಯಕ್ಕಾಗಿ ಹಲವು ಪ್ರಶಸ್ತಿಗಳನ್ನು ಸಂಪಾದಿಸಿದ್ದಾರೆ. ಸುಕ್ರಿ ಬೊಮ್ಮಗೌಡ ಅವರಿಗೆ ಸುಕ್ರಜ್ಜಿ ಎಂದು ಹಾಲಕ್ಕಿ ಕೋಗಿಲೆ ಜಾನಪದ ಕೋಗಿಲೆ ಎಂದು ಕೆರಯುತ್ತಾರೆ..
ಸಾಕ್ಷರತಾ ಆಂದೋಲನ, ಸಾರಾಯಿ ನಿಷೇಧ ಆಂದೋಲನ, ಉಳುವವನೇ ಹೊಲದೊಡೆಯ, ಪರಿಶಿಷ್ಟ ಜಾತಿ ಗುರುತಿಸುವಿಕೆಯಂತಹ ಚಳವಳಿಗಳಿಗಾಗಿ ಖುದ್ದು ಭಾಗವಹಿಸಿ ಹೊರಾಡಿದ್ದಾರೆ…