ಇಬ್ಬರು ಭಯೋತ್ಪಾದಕರನ್ನು ಸಂಹಾರ ಮಾಡಿದ ಸಿಆರ್ಪಿಎಫ್ ಯೋಧರು
ಶ್ರೀನಗರ: ಕಣಿವೆ ನಾಡು ಜಮ್ಮು ಮತ್ತು ಕಾಶ್ಮೀರದಲ್ಲಿ ಯೋಧರು ಇಬ್ಬರು ಭಯೋತ್ಪಾದಕರನ್ನು ಹೊಡೆದುರುಳಿಸಿದ್ದಾರೆ.
ಜಮ್ಮು ಕಾಶ್ಮೀರದ ಕುಲ್ಗಾಮ್ ಜಿಲ್ಲೆಯ ದೇವ್ಸರ್ ಚೆಯಾನ್ ಪ್ರದೇಶದಲ್ಲಿ ಲಷ್ಕರ್ -ಇ- ತೊಯ್ಬಾ(ಎಲ್ಇಟಿ) ಸಂಘಟನೆಯ ಇಬ್ಬರು ಉಗ್ರರು ಅಡಿಗರುವ ವಿಷಯ ಯೋಧರಿಗೆ ತಿಳಿದಿದೆ. ನಂತರ ಸಿಆರ್ಪಿಎಫ್ ಯೋಧರು ಕ್ಷಿಪ್ರ ಕಾರ್ಯಾಚರಣೆಗೆ ಇಳಿದಿದ್ದಾರೆ.
ಈ ವೇಳೆ ಭದ್ರತಾ ಪಡೆಗಳ ಮೇಲೆ ಭಯೋತ್ಪಾದಕರು ಗುಂಡಿನ ದಾಳಿ ನಡೆಸಿದ್ದಾರೆ. ಯೋಧರೂ ಸಹ ಪ್ರತಿದಾಳಿ ನಡೆಸಿದರು. ಗುಂಡಿನ ಚಕಮಕಿಯಲ್ಲಿ ಇಬ್ಬರು ಉಗ್ರರು ಹತರಾಗಿದ್ದಾರೆ. ಇದರಲ್ಲಿ ಒಬ್ಬ ವಿದೇಶಿಗನೂ ಇದ್ದಾನೆ.
ಹತನಾದ ಎಲ್ಇಟಿ ಉಗ್ರನನ್ನು ಹೈದರ್ ಎಂದು ಗುರುತಿಸಲಾಗಿದೆ. ಎನ್ಕೌಂಟರ್ ಬಳಿಕ ಸ್ಥಳದಲ್ಲಿ ಭಾರಿ ಪ್ರಮಾಣದ ಶಸ್ತ್ರಾಸ್ತ್ರಗಳು ಮತ್ತು ಮದ್ದುಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಕಾಶ್ಮೀರ ಪೊಲೀಸರು ತಿಳಿಸಿದ್ದಾರೆ.