ಮೆಟ್ರೋ ಪಿಲ್ಲರ್ ಗೆ ಗುದ್ದಿದ KSRTC ಬಸ್ – 25 ಕ್ಕೂ ಹೆಚ್ಚು ಜನರಿಗೆ ಗಾಯ
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ರಸ್ತೆ ಗುಂಡಿ ತಪ್ಪಿಸಲು ಹೋಗಿ KSRTC ಬಸ್ ಮೆಟ್ರೋ ಪಿಲ್ಲರ್ ಗೆ ಡಿಕ್ಕಿ ಹೊಡೆದಿದೆ, ಕೆಂಗೇರಿ ಬಳಿಯ ಭಾರತ್ ಪೆಟ್ರೋಲ್ ಬಂಕ್ ಬಳಿ ಘಟನೆ ನಡೆದಿದೆ, ಬಸ್ನಲ್ಲಿ ಪ್ರಯಾಣಿಸುತ್ತಿದ್ದ 45 ಜನರ ಪೈಕಿ 29 ಜನರಿಗೆ ಗಾಯಗಳಾಗಿವೆ.

ಮಡಿಕೇರಿಯಿಂದ ಬೆಂಗಳೂರಿಗೆ ಬರುತ್ತಿದ್ದ ಬಸ್ ರಾತ್ರಿ 1.30ರ ಸುಮಾರಿಗೆ ಚಾಲಕನ ನಿಯಂತ್ರಣ ತಪ್ಪಿ ಪೂರ್ಣಿಮಾ ಪ್ಯಾಲೇಸ್ ಬಳಿ ಇರುವ 545ನೇ ಮೆಟ್ರೋ ಪಿಲ್ಲರ್ಗೆ ಡಿಕ್ಕಿ ಹೊಡೆದಿದೆ. 4 ಅಡಿ ತಡೆಗೋಡೆಗೆ ಗುದ್ದಿ ನಂತರ ಮೆಟ್ರೋ ಪಿಲ್ಲರ್ಗೆ ಡಿಕ್ಕಿ ಹೊಡೆದಿದೆ. ಬಸ್ನಲ್ಲಿ 45 ಪ್ರಯಾಣಿಕರಿದ್ದು, 25 ಜನರಿಗೆ ಗಾಯಗಳಾಗಿವೆ. ನಾಲ್ವರ ಸ್ಥಿತಿ ಗಂಭೀರವಾಗಿದ್ದು, ಚಾಲಕ ಮತ್ತು ನಿರ್ವಾಹಕರನ್ನ ಬಿಜಿಎಸ್ ಗ್ಲೋಬಲ್ ಆಸ್ಪತ್ರೆಗೆ ಸೇರಿಸಲಾಗಿದೆ.
ಪೆಟ್ರೋಲ್ ಬಂಕ್ ಬಳಿಯ ಸಿಸಿಟಿವಿಯಲ್ಲಿ ಅಪಘಾತದ ದೃಶ್ಯ ಸೆರೆಯಾಗಿದೆ. ಕೆಂಗೇರಿ ಠಾಣೆಯಲ್ಲಿ ಈ ಬಗ್ಗೆ ಕೇಸ್ ದಾಖಲಾಗಿದೆ.








