ವಿಶ್ವಕಪ್ ಗೂ ಮುನ್ನಾ ಆಸ್ಟ್ರೇಲಿಯಾ ಭಾರತ T20 ಸರಣಿ ಘೋಷಣೆ….
ಈ ವರ್ಷ ನಡೆಯಲಿರುವ ಟಿ20 ವಿಶ್ವಕಪ್ಗೆ ತಯಾರಿಯ ಭಾಗವಾಗಿ ಟೀಂ ಇಂಡಿಯಾ ಸೆಪ್ಟೆಂಬರ್ನಲ್ಲಿ ಆಸ್ಟ್ರೇಲಿಯಾ ವಿರುದ್ಧ 3 ಟಿ20 ಪಂದ್ಯಗಳ ಸರಣಿಯನ್ನು ಆಡಲಿದೆ. ಈ ವರ್ಷ ಟಿ20 ವಿಶ್ವಕಪ್ ಆಸ್ಟ್ರೇಲಿಯಾದಲ್ಲಿ ಅಕ್ಟೋಬರ್ 16 ರಿಂದ ನವೆಂಬರ್ 13 ರವರೆಗೆ ನಡೆಯಲಿದೆ.
ಆರನ್ ಫಿಂಚ್ ನೇತೃತ್ವದ ಆಸ್ಟ್ರೇಲಿಯಾ ತಂಡವು ಆಗಸ್ಟ್-ಸೆಪ್ಟೆಂಬರ್ನಲ್ಲಿ ಜಿಂಬಾಬ್ವೆ ಮತ್ತು ನ್ಯೂಜಿಲೆಂಡ್ ತಂಡದೊಂದಿಗೆ ವೈಟ್ ಬಾಲ್ನ ಸರಣಿಯನ್ನು ಆಡಲಿದೆ. ಅದರ ನಂತರ ಸೆಪ್ಟೆಂಬರ್ನಲ್ಲಿ ಆಸ್ಟ್ರೇಲಿಯಾ ತಂಡ 3 ಟಿ20 ಪಂದ್ಯಗಳ ಸರಣಿಗಾಗಿ ಭಾರತಕ್ಕೆ ಪ್ರವಾಸ ಕೈಗೊಳ್ಳಲಿದೆ.
2018-19ರಲ್ಲಿ ಆಸ್ಟ್ರೇಲಿಯಾ ಕೊನೆಯ ಬಾರಿಗೆ ಭಾರತ ಪ್ರವಾಸ ಕೈಗೊಂಡಿತ್ತು. 2 ಪಂದ್ಯಗಳ ಟಿ20 ಸರಣಿಯನ್ನು 2-0ಯಿಂದ ವಶಪಡಿಸಿಕೊಂಡಿತ್ತು. ಮುಂದಿನ ವರ್ಷ ಫೆಬ್ರವರಿ-ಮಾರ್ಚ್ನಲ್ಲಿ ಆಸ್ಟ್ರೇಲಿಯಾ ಟೆಸ್ಟ್ ಸರಣಿಗಾಗಿ ಭಾರತ ಪ್ರವಾಸ ಕೈಗೊಳ್ಳಲಿದೆ
T20 ವಿಶ್ವಕಪ್ಗೆ ಮೊದಲು ಸೆಪ್ಟೆಂಬರ್ನಲ್ಲಿ ಭಾರತ ಪ್ರವಾಸ ಮಾಡಿದ ನಂತರ, ಆಸ್ಟ್ರೇಲಿಯಾ ತಂಡವು ಮುಂದಿನ ವರ್ಷ ಫೆಬ್ರವರಿ-ಮಾರ್ಚ್ನಲ್ಲಿ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಅಡಿಯಲ್ಲಿ 4 ಪಂದ್ಯಗಳ ಟೆಸ್ಟ್ ಸರಣಿಯನ್ನು ಸಹ ಆಡಲಿದೆ. 2017ರಲ್ಲಿ ಕೊನೆಯ ಬಾರಿಗೆ ಆಸ್ಟ್ರೇಲಿಯ ತಂಡ ಟೆಸ್ಟ್ ಸರಣಿಗಾಗಿ ಭಾರತ ಪ್ರವಾಸ ಕೈಗೊಂಡಿತ್ತು. ಆಗ ಕಾಂಗರೂ ತಂಡ 4-0 ಅಂತರದಲ್ಲಿ ಸೋಲನುಭವಿಸಬೇಕಾಯಿತು. 2004-05ರಲ್ಲಿ ಆಸ್ಟ್ರೇಲಿಯಾ ಕೊನೆಯ ಬಾರಿಗೆ ಭಾರತದಲ್ಲಿ ಟೆಸ್ಟ್ ಸರಣಿ ಗೆದ್ದಿತ್ತು.
ಟಿ 20 ವಿಶ್ವಕಪ್ – ಗ್ರೂಪ್ 2 ರಲ್ಲಿ ಭಾರತ
T20 ವಿಶ್ವಕಪ್ 2022 ರ ಸೂಪರ್ 12 ಗಾಗಿ ತಂಡಗಳನ್ನು ಎರಡು ಗುಂಪುಗಳಾಗಿ ವಿಂಗಡಿಸಲಾಗಿದೆ. ಭಾರತ ಮತ್ತು ಪಾಕಿಸ್ತಾನ 2ನೇ ಗುಂಪಿನಲ್ಲಿವೆ. ಇದೇ ಗುಂಪಿನಲ್ಲಿ ದಕ್ಷಿಣ ಆಫ್ರಿಕಾ ಮತ್ತು ಬಾಂಗ್ಲಾದೇಶದ ತಂಡಗಳೂ ಇದ್ದು, 2 ತಂಡಗಳು ಅರ್ಹತೆ ಪಡೆಯಲಿವೆ. ಇಂಗ್ಲೆಂಡ್, ನ್ಯೂಜಿಲೆಂಡ್, ಆಸ್ಟ್ರೇಲಿಯಾ ಮತ್ತು ಅಫ್ಘಾನಿಸ್ತಾನ 1 ನೇ ಗುಂಪಿನಲ್ಲಿರಲಿವೆ.








