Rahane | ಐಪಿಎಲ್ ಎಫೆಕ್ಟ್ | ಇಂಗ್ಲೆಂಡ್ ಪ್ರವಾಸದಿಂದ ರಹಾನೆ ದೂರ
ಕೋಲ್ಕತ್ತಾ ನೈಟ್ ರೈಡರ್ಸ್ ತಂಡದ ಸದಸ್ಯರಾಗಿರುವ ಭಾರತೀಯ ಕ್ರಿಕೆಟಿಗ ಅಜಿಂಕ್ಯ ರಹಾನೆ ಅವರು ಸ್ನಾಯು ಗಾಯದ ಕಾರಣ ಮುಂದಿನ ತಿಂಗಳು ನಡೆಯಲಿರುವ ಇಂಗ್ಲೆಂಡ್ ಪ್ರವಾಸವನ್ನು ಕಳೆದುಕೊಳ್ಳಲಿದ್ದಾರೆ.
ಸನ್ ರೈಸರ್ಸ್ ಹೈದರಾಬಾದ್ ವಿರುದ್ಧದ ಪಂದ್ಯದ ವೇಳೆ ರಹಾನೆ ಗಾಯಗೊಂಡಿದ್ದಾರೆ.

ಹೀಗಾಗಿ ರಹಾನೆ ಎರಡನೇ ಇನ್ನಿಂಗ್ಸ್ ನಲ್ಲಿ ಫೀಲ್ಡಿಂಗ್ ಮಾಡಲಿಲ್ಲ. ರಹಾನೆ ಚೇತರಿಸಿಕೊಳ್ಳಲು ಕನಿಷ್ಠ ನಾಲ್ಕು ವಾರಗಳು ಬೇಕು ಎಂದು ವೈದ್ಯರು ಮಾಹಿತಿ ನೀಡಿದ್ದಾರೆ.
ರಹಾನೆ ಈ ಬಾರಿಯ ಐಪಿಎಲ್ ಋತುವಿನಲ್ಲಿ ಏಳು ಪಂದ್ಯಗಳನ್ನು ಆಡಿದ್ದು ಕೇವಲ 133 ರನ್ ಗಳಿಸಿದ್ದಾರೆ.








