ವಿಧಾನ ಪರಿಷತ್ ಹಂಗಾಮಿ ಸಭಾಪತಿಯಾಗಿ ರಘುನಾಥ್ ರಾವ್ ಮಲ್ಕಾಪುರೆ ನೇಮಕ
ವಿಧಾನ ಪರಿಷತ್ ಸದಸ್ಯ ರಘುನಾಥ್ ರಾವ್ ಮಲ್ಕಾಪುರೆ ಅವರನ್ನು ವಿಧಾನ ಪರಿಷತ್ ಹಂಗಾಮಿ ಸಭಾಪತಿಯಾಗಿ ನೇಮಕ ಮಾಡಿ ರಾಜ್ಯಪಾಲ ತಾವರ್ಚೆಂದ್ ಗೆಹ್ಲೋಟ್ ಅವರು ಮಂಗಳವಾರ ಆದೇಶ ಹೊರಡಿಸಿದ್ದಾರೆ.
ವಿಧಾನ ಪರಿಷತ್ ಸಭಾಪತಿಯಾಗಿದ್ದ ಬಸವರಾಜ ಹೊರಟ್ಟಿ ಅವರು ನಿನ್ನೆ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ನಿಯಮಾವಳಿಗಳ ಪ್ರಕಾರ ಸಭಾಪತಿ ತಮ್ಮ ರಾಜೀನಾಮೆಯನ್ನು ಉಪಸಭಾಪತಿಗೆ ನೀಡಬೇಕಾಗುತ್ತದೆ. ಸದ್ಯ ಉಪಸಭಾಪತಿ ಸ್ಥಾನವೂ ಖಾಲಿ ಇದೆ. ಈ ಕಾರಣದಿಂದ ಹೊರಟ್ಟಿ ಅವರು ವಿಧಾನ ಪರಿಷತ್ ಕಾರ್ಯದರ್ಶಿ ಆವರಿಗೆ ತಮ್ಮ ರಾಜೀನಾಮೆ ಪತ್ರ ಸಲ್ಲಿಸಿದ್ದರು.
ಹಂಗಾಮಿ ಸಭಾಪತಿಗಳನ್ನು ಭೇಟಿಯಾಗಿ ಹೊರಟ್ಟಿ ಮಂಗಳವಾರ ರಾಜೀನಾಮೆ ಸಲ್ಲಿಸಲಿದ್ದಾರೆ. ಈ ಬಗ್ಗೆ ತಮ್ಮ ನಿವಾಸದಲ್ಲಿ ಮಾತನಾಡಿದ ಹೊರಟ್ಟಿ, ಸಭಾಪತಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ರಾಜ್ಯಪಾಲರು ಅಂಗೀಕಾರ ಮಾಡಿದ್ದಾರೆ. ಆದರೆ, ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡುವ ವಿಚಾರವಾಗಿ ಕೆಲವು ನೈತಿಕ ಸಮಸ್ಯೆಗಳು ಸೃಷ್ಟಿಯಾಗಿತ್ತು. ಉಪಾಧ್ಯಕ್ಷ ಇದ್ದಿದ್ದರೆ ಸಮಸ್ಯೆ ಬರುತ್ತಿರಲಿಲ್ಲ ಎಂದರು.
ರಘುನಾಥ್ ರಾವ್ ಮಲ್ಕಾಪುರೆ ಅವರು ಅಧಿಕಾರ ವಹಿಸಿಕೊಂಡ ಬಳಿಕ ಬಸವರಾಜ ಹೊರಟ್ಟಿ ಅವರು ಸಭಾಪತಿ ಸ್ಥಾನಕ್ಕೆ ನೀಡಿದ್ದ ರಾಜೀನಾಮೆಯನ್ನು ಅಂಗೀಕರಿಸಿದರು. ಬಸವರಾಜ ಹೊರಟ್ಟಿ ಅವರು ಬಿಜೆಪಿ ಗೆ ಸೇರಿದ್ದರಿಂದ ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡಿದ್ದಾರೆ.








