ಬೆಂಗಳೂರು : ನಾಯಕತ್ವ ಬದಲಾವಣೆಯ ಪ್ರಶ್ನೆಯೇ ಇಲ್ಲ. ಸರ್ಕಾರ ಸುಭದ್ರವಾಗಿದೆ. ಯಡಿಯೂರಪ್ಪ ಸಮರ್ಥ ಮುಖ್ಯಮಂತ್ರಿಯಾಗಿ ನೆರೆ ಕೊರೊನಾದಂತಹ ಎಲ್ಲಾ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಿದ್ದಾರೆ. ಇನ್ನೂ ಮೂರು ವರ್ಷ ಬಿಜೆಪಿ ಸರ್ಕಾರ ಸುಭದ್ರವಾಗಿರಲಿದೆ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ಹೇಳಿದ್ದಾರೆ.
ರಾಜ್ಯ ಸರ್ಕಾರದ ವಿರುದ್ದ ಉತ್ತರ ಕರ್ನಾಟಕ ಮತ್ತು ಕಲ್ಯಾಣ ಕರ್ನಾಟಕ ಭಾಗದ ಶಾಸಕರು ಬಂಡಾಯ ಭಾವುಡ ಬೀಸಿರುವುದಕ್ಕೆ ರಾಜ್ಯ ರಾಜಕೀಯದಲ್ಲಿ ಕೋಲಾಹಲ ಸೃಷ್ಟಿ ಮಾಡಿದೆ, ಈ ವಿಚಾರಕ್ಕೆ ವಿಕಾಸಸೌಧದಲ್ಲಿ ಪ್ರತಿಕ್ರಿಯಿಸಿದ ಕೃಷಿ ಸಚಿವ ಬಿ.ಸಿ ಪಾಟೀಲ್, ಇಷ್ಟು ದಿನ ಲಾಕ್ಡೌನ್ ಇದ್ದ ಕಾರಣ ಹೊಟೇಲ್ಗಳೆಲ್ಲ ಮುಚ್ಚಿವೆ. ಹೀಗಾಗಿ ಆತ್ಮೀಯರ ಮನೆಯಲ್ಲಿ ಔತಣಕ್ಕೆ ಸೇರುವುದು ಸಭೆ ಆಗಲು ಹೇಗೆ ಸಾಧ್ಯ. ಪ್ರಜಾಪ್ರಭುತ್ವದಲ್ಲಿ ಎಲ್ಲರಿಗೂ ಚರ್ಚಿಸಲು ಅವಕಾಶವಿದೆ. ರಾಜ್ಯಸಭೆ ವಿಧಾನ ಪರಿಷತ್ ಚುನಾವಣೆಗಳು ಬರುತ್ತಿರುವುದರಿಂದ ಈ ಬಗ್ಗೆ ಸಹಜವಾಗಿ ಚರ್ಚಿಸಿರಬಹುದಷ್ಟೆ.
ಇನ್ನೂ ಯತ್ನಾಳ್ ಹೇಳಿಕೆ ಅವರ ವೈಯಕ್ತಿಕ .ಆ ಬಗ್ಗೆ ನಾನು ಪ್ರತಿಕ್ರಿಯಿಸುವುದು ಸರಿಯಲ್ಲ ಎಂದರು. ಕುಟುಂಬದ ಸದಸ್ಯರು ಸಲಹೆ ಸೂಚನೆ ಕೊಡಬಹುದು. ಕ್ಷೇತ್ರದ ಅಭಿವೃದ್ಧಿ ಬಗ್ಗೆ ಜನರ ಕಷ್ಟನಷ್ಟದ ಬಗ್ಗೆ ಜನಪ್ರತಿನಿಧಿಗಳಾದವರಿಗೆ ಅವರ ಕುಟುಂಬಸ್ಥರು ಗಮನಕ್ಕೆ ತರಬಹುದು ಎಂದು ಹೇಳಿದ್ದಾರೆ.
ಕಾನೂನು ಪ್ರಕಾರ ದಾಖಲೆ ಸರಿ ಇದ್ದವರಿಗೆ ಭೂ ಗ್ಯಾರಂಟಿ – CM ಡಿ.ಕೆ. ಶಿವಕುಮಾರ್
ಕಾನೂನು ಪ್ರಕಾರ ದಾಖಲೆ ಸರಿ ಇದ್ದವರಿಗೆ ಭೂ ಗ್ಯಾರಂಟಿ - CM ಡಿ.ಕೆ. ಶಿವಕುಮಾರ್ ಸರ್ಕಾರ ಆರನೇ ಗ್ಯಾರಂಟಿಯಾಗಿ ಭೂ ಗ್ಯಾರಂಟಿ ನೀಡುತ್ತಿರುವುದರ ಬಗ್ಗೆ ಕೇಳಿದಾಗ, "ಈ...








