ADVERTISEMENT
Sunday, August 2, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

IPL 2022 | ಟಿಮ್ ಡೆವಿಡ್ ಗೆ ಗಿಫ್ಟ್ ಕೊಟ್ಟ RCB ಕ್ಯಾಪ್ಟನ್..!!

Mahesh M Dhandu by Mahesh M Dhandu
May 22, 2022
in Newsbeat, Sports, ಕ್ರಿಕೆಟ್
rcb tim-david-received-picture-faf-du-plessis saaksha tv

rcb tim-david-received-picture-faf-du-plessis saaksha tv

Share on FacebookShare on TwitterShare on WhatsappShare on Telegram

ಟಿಮ್ ಡೆವಿಡ್ ಗೆ ಗಿಫ್ಟ್ ಕೊಟ್ಟ RCB ಕ್ಯಾಪ್ಟನ್..!!

ಮುಂಬೈ ಇಂಡಿಯನ್ಸ್ ತಂಡದ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್ ತಂಡ ಸೋಲು ಕಂಡಿದ್ದು, ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಪ್ಲೇ ಆಫ್ಸ್ ಗೆ ಎಂಟ್ರಿ ಪಡೆದುಕೊಂಡಿದೆ. ಮುಂಬೈನ ವಾಂಖೇಡೆ ಮೈದಾನದಲ್ಲಿ ಡೆಲ್ಲಿ ಸೋಲುತ್ತಿದ್ದಂತೆ ಇತ್ತ ರಾಯಲ್ ಚಾಲೆಂಜರ್ಸ್ ಮತ್ತು ಅದರ ಅಭಿಮಾನಿಗಳು ಕುಣಿದುಕುಪ್ಪಳಿಸಿದರು. ಅದರಲ್ಲೂ ಮುಂಬೈಗೆ ನಿರ್ಣಾಯಕ ಹಂತದಲ್ಲಿ ಗೆಲುವು ತಂದುಕೊಟ್ಟು, ಆರ್ ಸಿಬಿ ತಂಡದ ಅಭಿಮಾನಿಗಳ ಆಸೆ ಜೀವಂತವಾಗಿರಿಸಿದ ಟಿಮ್ ಡೆವಿಡ್ ಬಗ್ಗೆ ಎಲ್ಲರೂ ಮೆಚ್ಚುಗೆಯ ಮಾತುಗಳನ್ನಾಡುತ್ತಿದ್ದಾರೆ.

Related posts

ecchara-5-rashigalige-shani-kata-mooru-dina-astrology-kannada

Astro-ಎಚ್ಚರ.. ಎಚ್ಚರ.. ನಾಳೆಯಿಂದ ಮೂರು ದಿನ ಈ 5 ರಾಶಿಯವರಿಗೆ ಶನಿಕಾಟ..!

August 2, 2026
84 ರೂಪಾಯಿಗೆ ಪೆಟ್ರೋಲ್ ಸಿಗಲೇಬೇಕು- ಆಗಸ್ಟ್ 4ಕ್ಕೆ ಪ್ರಧಾನಿ ನಿವಾಸ ಮುತ್ತಿಗೆ ಹಾಕಲಿರುವ ಕೇಜ್ರಿವಾಲ್:ರಾಹುಲ್ ಗಾಂಧಿ ಹಾದಿಯಲ್ಲಿ ಕೇಜ್ರಿವಾಲ್!

84 ರೂಪಾಯಿಗೆ ಪೆಟ್ರೋಲ್ ಸಿಗಲೇಬೇಕು- ಆಗಸ್ಟ್ 4ಕ್ಕೆ ಪ್ರಧಾನಿ ನಿವಾಸ ಮುತ್ತಿಗೆ ಹಾಕಲಿರುವ ಕೇಜ್ರಿವಾಲ್:ರಾಹುಲ್ ಗಾಂಧಿ ಹಾದಿಯಲ್ಲಿ ಕೇಜ್ರಿವಾಲ್!

August 2, 2026

ಆರ್ ಸಿಬಿ ಅಭಿಮಾನಿಗಳು ರೆಡ್ ಅಂಡ್ ಗೋಲ್ಡ್ ಜರ್ಸಿಯಲ್ಲಿರುವ ಡೆವಿಡ್ ಅವರ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಮಾಡುತ್ತಿದ್ದಾರೆ. ಸ್ವತಃ ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿಯೇ ತನ್ನ ಟ್ವಿಟ್ಟರ್ ನಲ್ಲಿ ಟಿಮ್ ಡೆವಿಡ್ ಗೆ ಧನ್ಯವಾದವನ್ನ ಹೇಳಿದೆ.

ವಾಸ್ತವಾಗಿ ಬೆಂಗಳೂರು ತಂಡಕ್ಕೆ ಡೆಲ್ಲಿ ಮತ್ತು ಮುಂಬೈ ನಡುವಿನ ಪಂದ್ಯ ಮಹತ್ವದ್ದಾಗಿತ್ತು. ಡೆಲ್ಲಿ ಸೋಲಿಗೆ ಬೆಂಗಳೂರು ತಂಡ ಪ್ರಾರ್ಥನೆ ಮಾಡಿತ್ತು. ಆ ಪ್ರಾರ್ಥನೆಯನ್ನು ಫಲಿಸುವಂತೆ ಮಾಡಿದ್ದು ಮಾತ್ರ ಆರ್ ಸಿಬಿ ತಂಡದ ಮಾಜಿ ಆಟಗಾರ ಟಿಮ್ ಡೆವಿಡ್..!!

ಹೌದು..  ವಾಂಖೇಡೆ ಮೈದಾನದಲ್ಲಿ ಡೆವಿಡ್ ಬ್ಯಾಟಿಂಗ್ ಗೆ ಬರೋದಕ್ಕೂ ಮೊದಲು ಮುಂಬೈ ಸಂಕಷ್ಟದಲ್ಲಿತ್ತು. ಕೊನೆಯ ದೆತ್ ಓವರ್ ಗಳಲ್ಲಿ ಮುಂಬೈಗೆ 60 ಕ್ಕೂ ಹೆಚ್ಚು ರನ್ ಗಳ ಅವಶ್ಯಕತೆ ಇತ್ತು. ಆಗ ಕ್ರೀಸ್ ಗೆ ಬಂದ ಟಿಮ್ ಡೆವಿಡ್ ಬೌಂಡರಿ ಸಿಕ್ಸರ್ ಗಳ ಸುರಿಮಳೆಗೈದರು. ಕೇವಲ 11 ಎಸೆತಗಳಲ್ಲಿ ಎರಡು ಬೌಂಡರಿ, ನಾಲ್ಕು ಸಿಕ್ಸರ್ ಗಳ ನೆರವಿನಿಂದ 34 ರನ್ ಚಚ್ಚಿ, ಪಂದ್ಯದ ಗತಿಯನ್ನೇ ಬದಲಿಸಿಬಿಟ್ಟರು. ಡೆಲ್ಲಿ ತಂಡದ ಕೈ ಸೇರುತಿದ್ದ ಪಂದ್ಯವನ್ನು ಡೆವಿಡ್ ಕಿತ್ತುಕೊಂಡು ಮುಂಬೈ ಇಂಡಿಯನ್ಸ್ ತಂಡದ ಗೆಲುವಿನ ಹಾದಿಯನ್ನ ಸುಗಮಗೊಳಿಸಿದರು.

rcb tim-david-received-picture-faf-du-plessis saaksha tv
rcb tim-david-received-picture-faf-du-plessis saaksha tv

ಹೀಗಾಗಿ ಹಾರ್ಡ್ ಹಿಟ್ಟರ್ ಟಿಮ್ ಡೆವಿಡ್ ಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ನಾಯಕ ಫಾಫ್ ಡುಪ್ಲಸಿಸ್ ಅಪರೂದ ಉಡುಗೊರೆ ಕಳುಹಿಸಿಕೊಟ್ಟಿದ್ದಾರೆ. ತಮ್ಮ ಜೊತೆಗೆ ವಿರಾಟ್ ಕೊಹ್ಲಿ, ಗ್ಲೆನ್ ಮ್ಯಾಕ್ಸ್ ವೆಲ್ ಮುಂಬೈ ಇಂಡಿಯನ್ಸ್ ಕಿಟ್ ನಲ್ಲಿರುವ ಫೋಟೋವನ್ನು ಡುಪ್ಲಸಿಸ್ ಟಿಮ್ ಡೆವಿಡ್ ಗೆ ಕಳುಹಿಸಿಕೊಟ್ಟಿದ್ದಾರೆ. ಈ ವಿಷಯವನ್ನು ಸ್ವತಃ ಡೆವಿಡ್ ತಿಳಿಸಿದ್ದು, ಶೀಘ್ರದಲ್ಲಿಯೇ ಆ ಫೋಟೋವನ್ನು ತನ್ನ ಇನ್ ಸ್ಟಾ ಗ್ರಾಮ್ ನಲ್ಲಿ ಹಂಚಿಕೊಳ್ಳುವುದಾಗಿ ತಿಳಿಸಿದ್ದಾರೆ.

 ಇನ್ನು ಪಂದ್ಯದ ವಿಚಾರಕ್ಕೆ ಬಂದರೇ ಮೊದಲು ಬ್ಯಾಟಿಂಗ್ ಮಾಡಿದ ಡೆಲ್ಲಿ ಕ್ಯಾಪಿಟಲ್ಸ್ ತಂಡ ನಿಗದಿತ 20 ಓವರ್ ಗಳಲ್ಲಿ 159 ರನ್ ಗಳಿಸಿತು. ಈ ಟಾರ್ಗೆಟ್ ಬೆನ್ನಟ್ಟಿದ ಮುಂಬೈ ಇಂಡಿಯನ್ಸ್ ತಂಡ 19.1 ಓವರ್ ಗಳಲ್ಲಿ ಐದು ವಿಕೆಟ್ ಕಳೆದುಕೊಂಡು ಗುರಿ ಮುಟ್ಟಿತು. ಇದರೊಂದಿಗೆ ಮುಂಬೈ ಇಂಡಿಯನ್ಸ್ ತಂಡ ಗೆಲುವಿನೊಂದಿಗೆ ಟೂರ್ನಿಯನ್ನ ಮುಗಿಸಿದ್ರೆ, ಡೆಲ್ಲಿ ಪ್ಲೇ ಆಫ್ಸ್ ಚಾನ್ಸ್ ಮಿಸ್ ಮಾಡಿಕೊಂಡು ನಿರಾಸೆ ಅನುಭವಿಸಿದೆ. rcb tim-david-received-picture-faf-du-plessis

Tags: #Faf du Plessis#Saaksha TVRCBtim david
ShareTweetSendShare
Join us on:

Related Posts

ecchara-5-rashigalige-shani-kata-mooru-dina-astrology-kannada

Astro-ಎಚ್ಚರ.. ಎಚ್ಚರ.. ನಾಳೆಯಿಂದ ಮೂರು ದಿನ ಈ 5 ರಾಶಿಯವರಿಗೆ ಶನಿಕಾಟ..!

by admin
August 2, 2026
0

ನಾಳೆಯಿಂದ ಮೂರು ದಿನ ಕೆಲ ರಾಶಿಯವರು ಹಣಕಾಸಿನ ವಿಚಾರದಲ್ಲಿ ಜಾಗರೂಕರಾಗಿರಬೇಕು. ಈ ದಿನ ಶನಿ ಹಾಗೂ ಚಂದ್ರನ ಸಂಯೋಗದಿಂದಾಗಿ ಅತ್ಯಂತ ಅಶುಭ ಯೋಗ ಸೃಷ್ಟಿಯಾಗಲಿದೆ. ಇದು ಕೆಲ...

84 ರೂಪಾಯಿಗೆ ಪೆಟ್ರೋಲ್ ಸಿಗಲೇಬೇಕು- ಆಗಸ್ಟ್ 4ಕ್ಕೆ ಪ್ರಧಾನಿ ನಿವಾಸ ಮುತ್ತಿಗೆ ಹಾಕಲಿರುವ ಕೇಜ್ರಿವಾಲ್:ರಾಹುಲ್ ಗಾಂಧಿ ಹಾದಿಯಲ್ಲಿ ಕೇಜ್ರಿವಾಲ್!

84 ರೂಪಾಯಿಗೆ ಪೆಟ್ರೋಲ್ ಸಿಗಲೇಬೇಕು- ಆಗಸ್ಟ್ 4ಕ್ಕೆ ಪ್ರಧಾನಿ ನಿವಾಸ ಮುತ್ತಿಗೆ ಹಾಕಲಿರುವ ಕೇಜ್ರಿವಾಲ್:ರಾಹುಲ್ ಗಾಂಧಿ ಹಾದಿಯಲ್ಲಿ ಕೇಜ್ರಿವಾಲ್!

by Shwetha
August 2, 2026
0

ನವದೆಹಲಿ: ಕೇಂದ್ರ ಸರ್ಕಾರದ ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ವಿರೋಧಿಸಿ ಆಮ್ ಆದ್ಮಿ ಪಾರ್ಟಿ ಭಾರಿ ಹೋರಾಟಕ್ಕೆ ಕರೆ ನೀಡಿದೆ. ಆಗಸ್ಟ್ 4 ರಂದು ದೆಹಲಿಯ ಮಾಜಿ...

ಮಳೆಯ ಅಬ್ಬರದಿಂದ ಕಾವೇರಿ ಜಲಾಶಯಗಳಿಗೆ ಒಳಹರಿವು ಹೆಚ್ಚಳ

ಮಳೆಯ ಅಬ್ಬರದಿಂದ ಕಾವೇರಿ ಜಲಾಶಯಗಳಿಗೆ ಒಳಹರಿವು ಹೆಚ್ಚಳ

by Shwetha
August 2, 2026
0

ರಾಜ್ಯದ ವಿವಿಧ ಭಾಗಗಳಲ್ಲಿ ಉತ್ತಮ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಕಾವೇರಿ ನದಿ ಜಲಾನಯನ ಪ್ರದೇಶದ ಪ್ರಮುಖ ಜಲಾಶಯಗಳಿಗೆ ಒಳಹರಿವು ಹೆಚ್ಚಳವಾಗಿದೆ. ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಮಳೆಯಿಂದ ಕೆಆರ್‌ಎಸ್‌,...

‘ಟಾಕ್ಸಿಕ್’ ಟ್ರೇಲರ್‌ಗೆ ದಿನಾಂಕ ಫಿಕ್ಸ್; ಯಶ್ ಅಧಿಕೃತ ಘೋಷಣೆ

‘ಟಾಕ್ಸಿಕ್’ ಟ್ರೇಲರ್‌ಗೆ ದಿನಾಂಕ ಫಿಕ್ಸ್; ಯಶ್ ಅಧಿಕೃತ ಘೋಷಣೆ

by Shwetha
August 2, 2026
0

ನಟ ಯಶ್ ಅಭಿನಯದ ಬಹುನಿರೀಕ್ಷಿತ 'ಟಾಕ್ಸಿಕ್' ಚಿತ್ರದ ಟ್ರೇಲರ್ ಬಿಡುಗಡೆ ದಿನಾಂಕವನ್ನು ಚಿತ್ರತಂಡ ಅಧಿಕೃತವಾಗಿ ಘೋಷಿಸಿದೆ. ಆಗಸ್ಟ್ 8ರಂದು ಬೆಂಗಳೂರಿನಲ್ಲಿ ಅದ್ಧೂರಿಯಾಗಿ 'ಟಾಕ್ಸಿಕ್' ಟ್ರೇಲರ್ ಲಾಂಚ್ ಕಾರ್ಯಕ್ರಮ...

ಸ್ವಾತಂತ್ರ್ಯ ಎಂದರೆ ಇಷ್ಟಬಂದಿದ್ದನ್ನು ಮಾಡುವುದಲ್ಲ, ಯುವ ಭಾರತಕ್ಕೆ ರಾಷ್ಟ್ರ ನಿರ್ಮಾಣದ ಪಾಠ ಮಾಡಿದ ಅಜಿತ್ ದೋವಲ್: ಸ್ವಾತಂತ್ರ್ಯದ ನಿಜವಾದ ಅರ್ಥ ವಿವರಿಸಿದ ಭದ್ರತಾ ಸಲಹೆಗಾರ.

ಸ್ವಾತಂತ್ರ್ಯ ಎಂದರೆ ಇಷ್ಟಬಂದಿದ್ದನ್ನು ಮಾಡುವುದಲ್ಲ, ಯುವ ಭಾರತಕ್ಕೆ ರಾಷ್ಟ್ರ ನಿರ್ಮಾಣದ ಪಾಠ ಮಾಡಿದ ಅಜಿತ್ ದೋವಲ್: ಸ್ವಾತಂತ್ರ್ಯದ ನಿಜವಾದ ಅರ್ಥ ವಿವರಿಸಿದ ಭದ್ರತಾ ಸಲಹೆಗಾರ.

by Shwetha
August 2, 2026
0

ಪುಣೆ: ದೇಶದ ಯುವಜನತೆಗೆ ಸ್ವಾತಂತ್ರ್ಯದ ನಿಜವಾದ ಅರ್ಥ ಮತ್ತು ಅದರೊಂದಿಗೆ ಬರುವ ಜವಾಬ್ದಾರಿಯ ಬಗ್ಗೆ ರಾಷ್ಟ್ರೀಯ ಭದ್ರತಾ ಸಲಹೆಗಾರ (ಎನ್‌ಎಸ್‌ಎ) ಅಜಿತ್ ದೋವಲ್ ಗಂಭೀರ ಎಚ್ಚರಿಕೆ ನೀಡಿದ್ದಾರೆ....

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram