ಬೆಂಗಳೂರು : ಕಲಬುರಗಿ ಜಿಲ್ಲೆಯ ಬಿಸಿಎಂ ಇಲಾಖೆಯ ಜಿಲ್ಲಾಧಿಕಾರಿ ರಮೇಶ್ ಸಂಗಾ ಅವರಿಗೆ ಜೀವ ಬೆದರಿಕೆ ಕರೆಗಳು ಬಂದಿವೆ. ಶಾಸಕ ದತ್ತಾತ್ರೇಯ ಪಾಟೀಲ್ ರೇವೂರ್ ಅವರ ಬೆಂಬಲಿಗರಾದ ಪಾಲಿಕೆಯ ಸದಸ್ಯ ಪ್ರಭು ಹಾದಿಮನಿ, ಚಂದ್ರಕಾಂತ ಅವರಿಂದ ಜೀವ ಬೆದರಿಕೆ ಕರೆಗಳು ಬಂದಿವೆ. ಅಧಿಕಾರಿಗಳಿಗೆ ಜೀವ ಬೆದರಿಕೆ ಹಾಕಿದವರ ವಿರುದ್ಧ ದೂರು ಮಾಡಿಕೊಳ್ಳಬೇಕು ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.
ಈ ಬಗ್ಗೆ ಮಾತನಾಡಿದ ಸಿದ್ದರಾಮಯ್ಯ, ದತ್ತಾತ್ರೇಯ ಪಾಟೀಲ್ ರೇವೂರ್ ಎಂಬ ಶಾಸಕ ಜಿಲ್ಲಾಧಿಕಾರಿ ರಮೇಶ್ ಸಂಗಾ ಅವರ ಜೊತೆಗೆ ಅನೂಚಿತವಾಗಿ ವರ್ತಿಸಿದ್ದಾರೆ. ಅಲ್ಲದೆ ವರ್ಗಾವಣೆ ಮಾಡಬೇಕಾದರೆ ಹಣ ಕೊಡಬೇಕು ಎಂದು ಬೆದರಿಕೆ ಹಾಕಿದ್ದಾರೆ. ಅದನ್ನು ರಮೇಶ್ ಸಂಗಾ ಪೋನ್ ಸಂಭಾಷಣೆಯನ್ನು ರೆಕಾರ್ಡ್ ಮಾಡಿಕೊಂಡಿದ್ದಾರೆ.
ಅಲ್ಲದೆ ಕೋವಿಡ್ 19 ಗೆ ಸಂಬಂಧಿಸಿದಂತೆ ನಾನು ದಿನಸಿ ಕಿಟ್ ಹಂಚಬೇಕು. ಅದಕ್ಕೆ ಹಣ ಕೊಡಬೇಕು ಎಂದು ದತ್ತಾತ್ರೇಯ ಪಾಟೀಲ್ ರೇವೂರ್ ಹೇಳಿದ್ದಾರೆ.. ರಮೇಶ್ ಸಂಗಾ ಅವರು ದೂರು ನೀಡಲು ಹೋದರೆ ಅಲ್ಲಿಯ ಪೊಲೀಸರು ದೂರು ದಾಖಲು ಮಾಡಿಕೊಂಡಿಲ್ಲ. ಪಾಲಿಕೆಯ ಸದಸ್ಯ ಪ್ರಭು ಹಾದಿಮನಿ ಎಂಬುವರು ಅಧಿಕಾರಿಗೆ ಮನೆಗೆ ಹೋಗಿ ಬೆದರಿಕೆ ಹಾಕಿದ್ದಾರೆ. ಹಾಗಾಗಿ ಅವರ ವಿರುದ್ದ ಕ್ರಮ ತೆಗೆದುಕೊಳ್ಳಬೇಕು. ಅಧಿಕಾರಿಗಳಿಗೆ ಈ ರೀತಿಯ ಭಯದ ವಾತವರಣ ಸೃಷ್ಠಿ ಮಾಡಿದರೇ, ಹೇಗೆ ಕೆಲಸ ಮಾಡುತ್ತಾರೆ. ಕೆಲಸ ಮಾಡುವುದಕ್ಕೆ ಕಷ್ಟವಾಗುತ್ತದೆ. ನಾನು ಅಲ್ಲಿಯ ಪೊಲೀಸ ಅಧಿಕಾರಿಗಳ ಜೊತೆ ಮಾತನಾಡಿದ್ದೇನೆ ಎಂದು ಹೇಳಿದರು.








