ADVERTISEMENT
Tuesday, August 4, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

IPL 2022 : ಎಲಿಮಿನೇಟರ್ ನಲ್ಲಿ ಗೆದ್ದ ಆರ್ಸಿಬಿ   

Mahesh M Dhandu by Mahesh M Dhandu
May 26, 2022
in Newsbeat, Sports, ಕ್ರಿಕೆಟ್
IPL 2023

IPL 2023

Share on FacebookShare on TwitterShare on WhatsappShare on Telegram

IPL 2022 : ಎಲಿಮಿನೇಟರ್ ನಲ್ಲಿ ಗೆದ್ದ ಬೀಗಿದ ಆರ್ಸಿಬಿ   

ಕೊಲ್ಕತ್ತಾದ ಈಡನ್ ಗಾರ್ಡನ್ ಅಂಗಳದಲ್ಲಿ ನಡೆದ ಎಲಿಮಿನೇಟರ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಗೆದ್ದು ಬೀಗಿದೆ.

Related posts

auqib-nabi-life-story-kannada

Teamindia- ಹಿಮದ ನಾಡಿನ ಐಸ್‍ಮೆನ್..ಟೀಮ್ ಇಂಡಿಯಾದ  ಹೊಸ ಸ್ಪೀಡ್ ಗನ್. ಅವನ ಹೆಸರು..!

August 4, 2026
ಎಲ್ಲಾ ಹೋಟೆಲ್‌ಗಳಲ್ಲಿ ಬಿಸಿ ನೀರು ಕಡ್ಡಾಯಕ್ಕೆ ಆರೋಗ್ಯ ಇಲಾಖೆ ಸಜ್ಜು

ಎಲ್ಲಾ ಹೋಟೆಲ್‌ಗಳಲ್ಲಿ ಬಿಸಿ ನೀರು ಕಡ್ಡಾಯಕ್ಕೆ ಆರೋಗ್ಯ ಇಲಾಖೆ ಸಜ್ಜು

August 4, 2026

15 ನೇ ಆವೃತ್ತಿ ಮೊದಲ ಎಲಿಮಿನೇಟರ್ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ಆರ್ ಸಿಬಿ 14 ರನ್ ಗಳಿಂದ ಜಯ ಸಾಧಿಸಿದೆ.  

ಲಕ್ನೋ ವಿರುದ್ಧ 14 ರನ್ಗಳ ಬೊಂಬಾಟ್ ಗೆಲುವು ಸಾಧಿಸಿರುವ ಆರ್ಸಿಬಿ ಇದೀಗ ಪ್ರಶಸ್ತಿ ಗೆಲುವಿಗೆ ಎರಡೇ ಹೆಜ್ಜೆ ದೂರವಿದೆ.   

ಟಾಸ್ ಸೋತು ಮೊದಲು ಬ್ಯಾಟ್ ಮಾಡಿದ ಬೆಂಗಳೂರು, ನಿಗದಿತ 20 ಓವರ್ಗಳಲ್ಲಿ 4 ವಿಕೆಟ್‌ ನಷ್ಟಕ್ಕೆ 206 ರನ್ಗಳ ಬೃಹತ್ ಮೊತ್ತ ಕಲೆಹಾಕಿತು.

ಈ ಟಾರ್ಗೆಟ್ ಬೆನ್ನತ್ತಿದ ಲಕ್ನೋ 20 ಓವರ್ಗಳಲ್ಲಿ 6 ವಿಕೆಟ್ ಕಳೆದುಕೊಂಡು 193 ರನ್ಗಳಿಸಿತು. ಆ ಮೂಲಕ 14 ರನ್ಗಳ ಜಯಭೇರಿ ಬಾರಿಸಿರುವ ಆರ್ಸಿಬಿ, ಇದೀಗ ಎರಡನೇ ಎಲಿಮಿನೇಟರ್ ಪಂದ್ಯಕ್ಕೆ ಲಗ್ಗೆಯಿಟ್ಟಿದೆ.

ipl-2022-rcb beat lucknow by 14 runs saaksha tv
ipl-2022-rcb beat lucknow by 14 runs saaksha tv

ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಆರ್ ಸಿಬಿಗೆ ಉತ್ತಮ ಆರಂಭ ಸಿಗಲಿಲ್ಲ. ನಾಯಕ ಫಾಫ್ ಡುಪ್ಲಸಿಸ್ ಶೂನ್ಯಕ್ಕೆ ವಿಕೆಟ್ ಒಪ್ಪಿಸಿದರು. ಈ ವೇಳೆ ವಿರಾಟ್ ಕೊಹ್ಲಿ ಜೊತೆಯಾದ ರಜತ್ ಪಟಿದಾರ್ ಎರಡನೇ ವಿಕೆಟ್ ಗೆ 64 ರನ್ ಗಳ ಜೊತೆಯಾಟದ ಕಾಣಿಕೆ ನೀಡಿದರು. ಆದ್ರೆ ವಿರಾಟ್ ಕೊಹ್ಲಿ ಹೋರಾಟ 25 ರನ್ ಗಳಿಗೆ ಅಂತ್ಯವಾಯ್ತು.

ಮ್ಯಾಕ್ಸ್ ವೆಲ್ 9 ರನ್, ಮಹಿಪಾಲ್ ಲೋಮ್ರೊರ್ 14 ರನ್ ಗಳಿಸಿ ಪೆವಿಲಿಯನ್ ಸೇರಿಕೊಂಡರು.   ಆದರೆ 5ನೇ ವಿಕೆಟ್ಗೆ ಜೊತೆಯಾದ ಪಟಿದಾರ್ ಹಾಗೂ ದಿನೇಶ್ ಕಾರ್ತಿಕ್ 37*(23) ಪಂದ್ಯದ ದಿಕ್ಕನ್ನೇ ಬದಲಿಸಿದರು ಆರಂಭದಿಂದಲೂ ಸ್ಪೋಟಕ ಬ್ಯಾಟಿಂಗ್ ಪ್ರದರ್ಶಿಸಿದ ಪಟಿದಾರ್, ಕೇವಲ 54 ಬಾಲ್ಗಳಲ್ಲಿ 12 ಬೌಂಡರಿ, 7 ಸಿಕ್ಸ್ ಮೂಲಕ ಐಪಿಎಲ್‌ ಟೂರ್ನಿಯ ಚೊಚ್ಚಲ ಶತಕ(112* ರನ್) ಸಿಡಿಸಿ ಅಬ್ಬರಿಸಿದರು.‌ ಇವರಿಬ್ಬರು 5ನೇ ವಿಕೆಟ್ ಜೊತೆಯಾಟದಲ್ಲಿ 91 ರನ್ ಕಲೆಹಾಕಿದ ಪರಿಣಾಮ, ಆರ್ಸಿಬಿ 20 ಓವರ್ಗಳಲ್ಲಿ 206 ರನ್ಗಳಿಸಿತು.

207 ರನ್ಗಳ ಕಠಿಣ ಟಾರ್ಗೆಟ್ ಬೆನ್ನತ್ತಿದ ಲಕ್ನೋ ಆರಂಭದಲ್ಲೇ ಕ್ವಿಂಟನ್ ಡಿಕಾಕ್(6) ವಿಕೆಟ್ ಕಳೆದುಕೊಂಡಿತು. ನಂತರ ಬಂದ ಮನನ್ ವೋಹ್ರ(19) ಬಿರುಸಿನ ಆಟವಾಡಿ ಹೊರನಡೆದರು. ಈ ವೇಳೆ ಜೊತೆಯಾದ ಕೆ.ಎಲ್.ರಾಹುಲ್(79) ಹಾಗೂ ದೀಪಕ್ ಹೂಡ(45) ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದರು.

ಈ ಜೋಡಿ 3ನೇ ವಿಕೆಟ್ಗೆ 96 ರನ್ ಕಲೆಹಾಕಿತು.  ತಂಡದ ಗೆಲುವಿಗಾಗಿ ಏಕಾಂಗಿ ಹೋರಾಟ ನಡೆಸಿದ ರಾಹುಲ್, 19ನೇ ಓವರ್ನಲ್ಲಿ ವಿಕೆಟ್ ಒಪ್ಪಿಸುವ ಮೂಲಕ ತಂಡದ ಹೋರಾಟ ಕೂಡ ಅಂತ್ಯಗೊಂಡಿತು.

ಪರಿಣಾಮ ಲಕ್ನೋ 20 ಓವರ್ಗಳಲ್ಲಿ 193 ರನ್ಗಳಿಸಲಷ್ಟೇ ಶಕ್ತವಾಯಿತು. ಆರ್ಸಿಬಿ ಪರ ಹೇಜ಼ಲ್ವುಡ್ 3 ವಿಕೆಟ್ ಪಡೆದು ಮಿಂಚಿದರೆ. ಹಸರಂಗ, ಸಿರಾಜ್ ಹಾಗೂ ಹರ್ಷಲ್‌ ಪಟೇಲ್ ತಲಾ 1 ವಿಕೆಟ್ ಪಡೆದರು.

ಮೇ 27ರಂದು ನಡೆಯುವ ಎಲಿಮಿನೇಟರ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ರಾಜಸ್ಥಾನ್ ರಾಯಲ್ಸ್ ತಂಡಗಳು ಮುಖಾಮುಖಿ ನಡೆಸಲಿವೆ.ipl-2022-rcb beat lucknow by 14 runs

Tags: #Saaksha TVipl 2022lucknowRCB
ShareTweetSendShare
Join us on:

Related Posts

auqib-nabi-life-story-kannada

Teamindia- ಹಿಮದ ನಾಡಿನ ಐಸ್‍ಮೆನ್..ಟೀಮ್ ಇಂಡಿಯಾದ  ಹೊಸ ಸ್ಪೀಡ್ ಗನ್. ಅವನ ಹೆಸರು..!

by admin
August 4, 2026
0

ಅವನು ಗುರಿ ಹೊಡೆಯುವ ಸ್ನೈಪರ್. ಬುಲೆಟ್ ವೇಗದಲ್ಲಿ ಬೌಲಿಂಗ್ ಮಾಡುವ ಸ್ಟ್ರೈಕರ್. ನಿರಂತರವಾಗಿ ಬೌಲ್ ಮಾಡುವ ಬೌಲಿಂಗ್ ಮೆಷಿನ್. ದಣಿವರಿಯದ ಐರಾನ್ ಮ್ಯಾನ್. ವಿಕೆಟ್ ಪಡೆಯುವ ಹಂಟರ್,...

ಎಲ್ಲಾ ಹೋಟೆಲ್‌ಗಳಲ್ಲಿ ಬಿಸಿ ನೀರು ಕಡ್ಡಾಯಕ್ಕೆ ಆರೋಗ್ಯ ಇಲಾಖೆ ಸಜ್ಜು

ಎಲ್ಲಾ ಹೋಟೆಲ್‌ಗಳಲ್ಲಿ ಬಿಸಿ ನೀರು ಕಡ್ಡಾಯಕ್ಕೆ ಆರೋಗ್ಯ ಇಲಾಖೆ ಸಜ್ಜು

by Shwetha
August 4, 2026
0

ರಾಜ್ಯದ ಸಾರ್ವಜನಿಕರ ಆರೋಗ್ಯ ರಕ್ಷಣೆಗೆ ಆರೋಗ್ಯ ಇಲಾಖೆ ಮತ್ತೊಂದು ಮಹತ್ವದ ಕ್ರಮಕ್ಕೆ ಮುಂದಾಗಿದೆ. ಶಾಲೆಗಳ ಸುತ್ತಮುತ್ತ ಜಂಕ್ ಫುಡ್ ಮಾರಾಟಕ್ಕೆ ನಿರ್ಬಂಧ ಹೇರಿದ ಬಳಿಕ, ಇದೀಗ ರಾಜ್ಯದ...

ಸಂಪುಟ ವಿಸ್ತರಣೆ ಬೆನ್ನಲ್ಲೇ ಕಾಂಗ್ರೆಸ್‌ನಲ್ಲಿ ಭುಗಿಲೆದ್ದ ಅಸಮಾಧಾನದ ಕಿಚ್ಚು: ತನ್ವೀರ್ ಸೇಠ್ ಮತ್ತು ಲಕ್ಷ್ಮಿ ಹೆಬ್ಬಾಳ್ಕರ್ ಬೆಂಬಲಿಗರಿಂದ ಬೀದಿಗಿಳಿದು ಪ್ರತಿಭಟನೆ

ಸಂಪುಟ ವಿಸ್ತರಣೆ ಬೆನ್ನಲ್ಲೇ ಕಾಂಗ್ರೆಸ್‌ನಲ್ಲಿ ಭುಗಿಲೆದ್ದ ಅಸಮಾಧಾನದ ಕಿಚ್ಚು: ತನ್ವೀರ್ ಸೇಠ್ ಮತ್ತು ಲಕ್ಷ್ಮಿ ಹೆಬ್ಬಾಳ್ಕರ್ ಬೆಂಬಲಿಗರಿಂದ ಬೀದಿಗಿಳಿದು ಪ್ರತಿಭಟನೆ

by Shwetha
August 4, 2026
0

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಬೆನ್ನಲ್ಲೇ ಆಡಳಿತಾರೂಢ ಕಾಂಗ್ರೆಸ್ ಪಕ್ಷದಲ್ಲಿ ಭಿನ್ನಮತ ಸ್ಫೋಟಗೊಂಡಿದೆ. ಸಚಿವ ಸ್ಥಾನದ ಆಕಾಂಕ್ಷಿಗಳಾಗಿದ್ದ ಹಿರಿಯ ಶಾಸಕರಿಗೆ ಮಂತ್ರಿಗಿರಿ ಕೈತಪ್ಪಿದ್ದರಿಂದ ರಾಜ್ಯದ ವಿವಿಧೆಡೆ...

ಕಾವೇರಿ ವಿವಾದ: ನೀರು ಬಿಡುಗಡೆಗೆ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ತಮಿಳುನಾಡು

ಕಾವೇರಿ ವಿವಾದ: ನೀರು ಬಿಡುಗಡೆಗೆ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ತಮಿಳುನಾಡು

by Shwetha
August 4, 2026
0

ಕಾವೇರಿ ನದಿ ನೀರು ಹಂಚಿಕೆ ವಿವಾದ ಮತ್ತೊಮ್ಮೆ ತೀವ್ರಗೊಂಡಿದ್ದು, ತಮಿಳುನಾಡು ಸರ್ಕಾರ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದೆ. ಜುಲೈ 30ರಂದು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ (CWMA)...

ರಾಮನ ಪಾತ್ರದಲ್ಲಿ ರಣಬೀರ್ ಕಪೂರ್ ವೀಕ್: ಆದಿಪುರುಷ್ ತಪ್ಪು ಮರುಕಳಿಸಿದರೆ ಸುಮ್ಮನಿರಲ್ಲ- ಯಶ್ ನಟನೆಯ ರಾಮಾಯಣ ಸಿನಿಮಾಗೆ ಎದುರಾಯ್ತು ಅಗ್ನಿಪರೀಕ್ಷೆ

ರಾಮನ ಪಾತ್ರದಲ್ಲಿ ರಣಬೀರ್ ಕಪೂರ್ ವೀಕ್: ಆದಿಪುರುಷ್ ತಪ್ಪು ಮರುಕಳಿಸಿದರೆ ಸುಮ್ಮನಿರಲ್ಲ- ಯಶ್ ನಟನೆಯ ರಾಮಾಯಣ ಸಿನಿಮಾಗೆ ಎದುರಾಯ್ತು ಅಗ್ನಿಪರೀಕ್ಷೆ

by Shwetha
August 4, 2026
0

ಮುಂಬೈ: ಬಾಲಿವುಡ್ ನಲ್ಲಿ ಭಾರಿ ಸದ್ದು ಮಾಡುತ್ತಿರುವ ನಿರ್ದೇಶಕ ನಿತೇಶ್ ತಿವಾರಿ ಅವರ ಕನಸಿನ ಯೋಜನೆ ರಾಮಾಯಣ ಸಿನಿಮಾ ಬಿಡುಗಡೆಗೂ ಮುನ್ನವೇ ವಿವಾದದ ಸುಳಿಗೆ ಸಿಲುಕಿದೆ. ಬರೋಬ್ಬರಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram