RSS ದೃಷ್ಟಿಯಲ್ಲಿ ಹಿಂದೂ ಆಗಲೂ 40% ಕಮಿಷನ್ ಹೊಡೆಯಬೇಕಾ?
ಬೆಂಗಳೂರು : RSS ದೃಷ್ಟಿಯಲ್ಲಿ ಹಿಂದೂ ಆಗಲೂ 40% ಕಮಿಷನ್ ಹೊಡೆಯಬೇಕಾ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.
ಆರ್ ಎಸ್ ಎಸ್ ನ ಮೂಲ ಪ್ರಶ್ನಿಸಿದ್ದ ವಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧ ಬಿಜೆಪಿ ನಾಯಕರು ಮುಗಿಬಿದ್ದಿದ್ದರು. ಇದಕ್ಕೆ ಪ್ರತಿಯಾಗಿ ಸಿದ್ದರಾಮಯ್ಯ ಸರಣಿ ಟ್ವೀಟ್ ಗಳ ಮೂಲಕ ಬಿಜೆಪಿ ನಾಯಕರಿಗೆ ಪ್ರಶ್ನೆಗಳ ಸುರಿಮಳೆಗೈದಿದ್ದಾರೆ.

ಸಿದ್ದರಾಮಯ್ಯ ಟ್ವಿಟ್ಟರ್ ನಲ್ಲಿ…
RSS ದೃಷ್ಟಿಯಲ್ಲಿ ಹಿಂದೂ ಆಗಲೂ 40% ಕಮಿಷನ್ ಹೊಡೆಯಬೇಕಾ? ಬ್ಲೂ ಫಿಲ್ಮ್ ನೋಡಬೇಕಾ? ಗಣಿ ಲೂಟಿ ಮಾಡಬೇಕಾ? ಚೆಕ್ ನಲ್ಲಿ ದುಡ್ಡು ಪಡೆದು ಜೈಲಿಗೆ ಹೋಗಬೇಕಾ? ರೇಪ್ ಮಾಡಬೇಕಾ? ಏನು ಮಾಡಬೇಕು? ಹೇಳಿಬಿಡಿ.
ಹಸಿದ ಹೊಟ್ಟೆಗೆ ಅನ್ನ, ಎಳೆಯ ಮಕ್ಕಳಿಗೆ ಹಾಲು, ರೈತರ ಬೆಳೆಗೆ ನ್ಯಾಯದ ಬೆಲೆ, ಯುವಜನರಿಗೆ ಉದ್ಯೋಗ, ಅವಕಾಶ ವಂಚಿತರಿಗೆ ಸಮಾನ ಅವಕಾಶ, ಜಾತಿ ತಾರತಮ್ಯದಿಂದ ಅನ್ಯಾಯಕ್ಕೀಡಾದವರಿಗೆ ಸಾಮಾಜಿಕ ನ್ಯಾಯ.. ಹಿಂದೂ ಆಗಲು ಇಷ್ಟು ಅರ್ಹತೆ ಸಾಲದೇ?..
ಹಸಿದ ಹೊಟ್ಟೆಗೆ ಅನ್ನ, ಎಳೆಯ ಮಕ್ಕಳಿಗೆ ಹಾಲು, ರೈತರ ಬೆಳೆಗೆ ನ್ಯಾಯದ ಬೆಲೆ, ಯುವಜನರಿಗೆ ಉದ್ಯೋಗ, ಅವಕಾಶ ವಂಚಿತರಿಗೆ ಸಮಾನ ಅವಕಾಶ, ಜಾತಿ ತಾರತಮ್ಯದಿಂದ ಅನ್ಯಾಯಕ್ಕೀಡಾದವರಿಗೆ ಸಾಮಾಜಿಕ ನ್ಯಾಯ.. ಹಿಂದೂ ಆಗಲು ಇಷ್ಟು ಅರ್ಹತೆ ಸಾಲದೇ? 6/12#AryanRSS
— Siddaramaiah (@siddaramaiah) May 28, 2022
ಹಿಂದೂಗಳೆಲ್ಲ ಒಂದು ಎಂದು ಕಂಠಶೋಷಣೆ ಮಾಡುತ್ತಿರುವ ಆರ್.ಎಸ್.ಎಸ್ ತನ್ನ ಸಂಘಟನೆಯ ಪದಾಧಿಕಾರಗಳನ್ನೆಲ್ಲಾ ಯಾಕೆ ಒಂದು ಜಾತಿಗೆ ಮೀಸಲಿಟ್ಟಿದೆ ? ಆರ್.ಎಸ್.ಎಸ್ ನ ಪದಾಧಿಕಾರಿಗಳಲ್ಲಿ ಎಷ್ಟು ಮಂದಿ ದಲಿತರು, ಹಿಂದುಳಿದ ಜಾತಿಯವರಿದ್ದಾರೆ?
ಆರ್.ಎಸ್.ಎಸ್ ದೃಷ್ಟಿಯಲ್ಲಿ ಹಿಂದೂ ಧರ್ಮದ ವ್ಯಾಖ್ಯಾನ ಏನು? ಹಿಂದೂ ಆಗಲು ಹಿಂದೂ ತಂದೆ-ತಾಯಿ ಹೊಟ್ಟೆಯಲ್ಲಿ ಹುಟ್ಟಿದರೆ ಸಾಕಾ? ಇಲ್ಲವೇ ಬಿಜೆಪಿ ಎಂಬ ರಾಜಕೀಯ ಪಕ್ಷದ ಸದಸ್ಯರಾಗಬೇಕಾ ಎಂದು ಪ್ರಶ್ನೆಗಳ ಸುರಿಮಳೆಗೈದಿದ್ದಾರೆ.








