ಸಿಧು ಮೂಸೆವಾಲ ಹತ್ಯೆ ಪ್ರಕರಣ – “ಹಂತಕರನ್ನ ಬಿಡುವುದಿಲ್ಲ” CM ಭಗವಂತ್ ಸಿಂಗ್ ಮಾನ್
ಖ್ಯಾತ ಪಂಜಾಬಿ ಗಾಯಕ ಕಾಂಗ್ರೆಸ್ ಮುಖಂಡ ಸಿಧು ಮೂಸೆವಾಲ ಅವರನ್ನು ಅಪರಿಚಿತ ದುಷ್ಕರ್ಮಿಗಳು ಭಾನುವಾರ ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ.
ಗುಂಡೇಟಿನಿಂದ ಗಾಯಗೊಂಡಿದ್ದ ಸಿಧು ಮತ್ತು ಕಾರಿನಲ್ಲಿದ್ದ ಇಬ್ಬರು ಸ್ನೇಹಿತರನ್ನ ಸ್ಥಳಿಯರು ಖಾಸಗಿ ಆಸ್ಪತ್ರೆಗೆ ಸೇರಿಸಿದ್ದರು. ಈ ಮೂರಲ್ಲಿ ಸಿಧು ಮೃತಪಟ್ಟಿರುವುದಾಗಿ ಮಾನ್ಸಾ ಆಸ್ಪತ್ರೆಯ ಸಿವಿಲ್ ಸರ್ಜನ್ ಡಾ. ರಂಜೀತ್ ರೈ ತಿಳಿಸಿದ್ದಾರೆ.
ಇಬ್ಬರು ಗಾಯಾಳುಗಳಿಗೆ ಪ್ರಾಥಮಿಕ ಚಿಕಿತ್ಸೆ ನೀಡಿದ ಹೆಚ್ಚಿನ ಚಿಕಿತ್ಸೆಗಾಗಿ ಉನ್ನತ ಸಂಸ್ಥೆಗೆ ಸೇರಿಸಲು ಶಿಫಾರಸು ಮಾಡಲಾಗಿದೆ ಎಂದು ಅವರು ಹೇಳಿದ್ದಾರೆ.
ಸಿಧು ಮೂಸೆವಾಲ ಅವರ ಮೇಲೆ ದಾಳಿ ಮಾಡಿದವರನ್ನು ಬಿಡುವುದಿಲ್ಲ ಎಂದು ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಅವರು ಹೇಳಿದ್ದಾರೆ. ಎಲ್ಲರೂ ಶಾಂತವಾಗಿರುವಂತೆ ಸಿಎಂ ಮನವಿ ಮಾಡಿದ್ದಾರೆ.
ಸಿಧು ಮೂಸೆವಾಲಾ ಅವರ ಭೀಕರ ಹತ್ಯೆಯಿಂದ ನಾನು ಆಘಾತಕ್ಕೊಳಗಾಗಿದ್ದೇನೆ ಮತ್ತು ತೀವ್ರವಾಗಿ ದುಃಖಿತನಾಗಿದ್ದೇನೆ. ಇದರಲ್ಲಿ ಭಾಗಿಯಾಗಿರುವ ಯಾರನ್ನೂ ಬಿಡಲಾಗುವುದಿಲ್ಲ. ನನ್ನ ಆಲೋಚನೆಗಳು ಮತ್ತು ಪ್ರಾರ್ಥನೆಗಳು ಅವರ ಕುಟುಂಬ ಮತ್ತು ಪ್ರಪಂಚದಾದ್ಯಂತದ ಅವರ ಅಭಿಮಾನಿಗಳೊಂದಿಗೆ ಇವೆ. ನಾನು ಶಾಂತವಾಗಿರುವಂತೆ ಎಲ್ಲರಿಗೂ ಮನವಿ ಮಾಡುತ್ತೇನೆ” ಎಂದು ಭಗವಂತಾ ಮಾನ್ ಟ್ವೀಟ್ ಮಾಡಿದ್ದಾರೆ.
ವಿಐಪಿ ಸಂಸ್ಕೃತಿಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಭಗವಂತ್ ಮಾನ್ ಸರ್ಕಾರ ನಿನ್ನೆ 424 ಜನರ ಭದ್ರತೆಯನ್ನು ಹಿಂಪಡೆದಿತ್ತು. ಅವರ ಭದ್ರತೆ ಹಿಂತೆಗೆದುಕೊಂಡ 1 ದಿನದ ಬಳಿಕ ದುರ್ಘಟನೆ ನಡೆದಿದೆ.








