KL Rahul | ಕನ್ನಡಿಗ ಕೆ.ಎಲ್.ರಾಹುಲ್ ಭಾವುಕ ಟ್ವೀಟ್
ಈ ಕಠಿಣವಾದ ವಾಸ್ತವವನ್ನು ಜಿರ್ಣೀಸಿಕೊಳ್ಳಲು ಆಗುತ್ತಿಲ್ಲ. ನಾನು ಇಂದು ಮತ್ತೊಂದು ಸವಾಲನ್ನು ಎದುರಿಸಬೇಕಾಯಿತು.
ತವರಿನಲ್ಲಿ ತಂಡವನ್ನು ಮುನ್ನಡೆಸುವ ಮೊದಲ ಅವಕಾಶ ಕೈತಪ್ಪಿದೆ. ಆದರೆ, ನಮ್ಮ ಆಟಗಾರರಿಗೆ ನನ್ನ ಬೆಂಬಲ ಸದಾ ಇರುತ್ತದೆ.
ನನ್ನ ಬೆಂಬಲಕ್ಕೆ ನಿಂತ ಎಲ್ಲರಿಗೂ ಹೃತ್ಪೂರ್ವಕ ಧನ್ಯವಾದಗಳು. ರಿಷಬ್ ಪಂತ್ ಮತ್ತು ಹುಡುಗರಿಗೆ ಶುಭವಾಗಲಿ.
ನಾನು ಶೀಘ್ರದಲ್ಲೇ ಹಿಂತಿರುಗುತ್ತೇನೆ ಎಂದು ಟೀಂ ಇಂಡಿಯಾ ಉಪನಾಯಕ ಕೆಎಲ್ ರಾಹುಲ್ ಭಾವನಾತ್ಮಕ ಟ್ವೀಟ್ ಮಾಡಿದ್ದಾರೆ.
ಅಲ್ಲದೆ ದಕ್ಷಿಣ ಆಫ್ರಿಕಾ ವಿರುದ್ಧದ ಸರಣಿಯಲ್ಲಿ ಭಾರತ ತಂಡ ಉತ್ತಮ ಪ್ರದರ್ಶನ ನೀಡಲಿದೆ ಎಂದು ರಾಹುಲ್ ಆಶಿಸಿದ್ದಾರೆ.

ಐದು ಪಂದ್ಯಗಳ ಟಿ20 ಸರಣಿಗಾಗಿ ಪ್ರೋಟೀಸ್ ತಂಡ ಭಾರತ ಪ್ರವಾಸ ಕೈಗೊಂಡಿದೆ.
ಬಿಸಿಸಿಐ ಹಿರಿಯ ಆಟಗಾರರಾದ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಜಸ್ಪ್ರೀತ್ ಬುಮ್ರಾ ಮತ್ತು ಇತರರಿಗೆ ವಿಶ್ರಾಂತಿ ನೀಡಿದ್ದು, ನಾಯಕತ್ವವನ್ನು ಕೆಎಲ್ ರಾಹುಲ್ ಅವರಿಗೆ ಹಸ್ತಾಂತರಿಸಿತ್ತು.
ಆದರೆ, ಕೆ.ಎಲ್.ರಾಹುಲ್ ಸರಣಿ ಆರಂಭಕ್ಕೂ ಮೊದಲೇ ಗಾಯಗೊಂಡಿದ್ದು, ಯುವ ವಿಕೆಟ್ ಕೀಪರ್ ರಿಷಬ್ ಪಂತ್ ಗೆ ಕ್ಯಾಪ್ಟನ್ಸಿ ನೀಡಲಾಗಿದೆ.








