ವಿಧಾನ ಪರಿಷತ್ ಫೈಟ್ – ರಂಗೇರಿದ ಕಣ; ಮತದಾನ ಚುರುಕು….
ವಿಧಾನ ಪರಿಷತ್ ಚುನಾವಣೆಗಾಗಿ ರಾಜ್ಯದ ಎರಡು ಶಿಕ್ಷಕರ ಕ್ಷೇತ್ರ ಮತ್ತು ಎರಡು ಪದವೀಧರರ ಕ್ಷೇತ್ರದ ಚುನಾವಣೆಗೆ ಮತದಾನ ಇಂದು ಬೆಳಿಗ್ಗೆ ಆರಂಭಗೊಂಡಿದೆ. ಪಶ್ಚಿಮ ಶಿಕ್ಷಕರ ಕ್ಷೇತ್ರ, ವಾಯುವ್ಯ ಶಿಕ್ಷಕರ ಕ್ಷೇತ್ರದಲ್ಲಿ ಉತ್ತಮ ಮತದಾನ ನಡೆಯುತ್ತಿದ್ದು, ವಾಯುವ್ಯ ಪದವೀಧರ, ದಕ್ಷಿಣ ಪದವೀಧರರ ಕ್ಷೇತ್ರದಲ್ಲಿ ಮಂದಗತಿಯಲ್ಲಿ ಸಾಗುತ್ತಿದೆ.
ಮತಗಟ್ಟೆಯಲ್ಲಿ ಕೋವಿಡ್ ಮಾರ್ಗಸೂಚಿಯನ್ನ ಪಾಲಿಸುವುದರೊಂದಿಗೆ ಮತದಾನ ನಡೆಸಲಾಗುತ್ತಿದೆ. ಸಂಸದ ಪ್ರತಾಪ್ ಸಿಂಹ, ಸುತ್ತೂರಿನ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ, ಜೆಡಿಎಸ್ ಅಭ್ಯರ್ಥಿ ರಾಮು, ಬಿಜೆಪಿ ಅಭ್ಯರ್ಥಿ ಮೈ.ವಿ ರವಿಶಂಕರ್ ಸೇರಿದಂತೆ ಪ್ರಮುಖರು ಮೈಸೂರಿನಲ್ಲಿ ಮತ ಚಲಾಯಿಸಿದ್ದಾರೆ.
ವಾಯವ್ಯ ಪದವೀಧರರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸುನೀಲ್ ಸಂಕ ಅವರು ಅಥಣಿ ಪಟ್ಟಣದ 4 ಮತಗಟ್ಟೆಗಳಲ್ಲಿ ತಮ್ಮ ಹಕ್ಕು ಚಲಾಯಿಸಿದ್ದಾರೆ. ನಂತರ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿ, ವಾಯವ್ಯ ಮತಕ್ಷೇತ್ರದಲ್ಲಿ ಪ್ರಜ್ಞಾವಂತ ಮತದಾರರು ಇರುವುದರಿಂದ ಗೆಲುವಿನ ವಿಶ್ವಾಸ ವ್ಯಕ್ತಪಡಿಸಿದ್ದಾರೆ.