ಬಾಲಿವುಡ್ ನಟಿ ದೀಪಿಕಾ ಪಡುಕೋಣೆ ಆಸ್ಪತ್ರೆಗೆ ದಾಖಲು…
ಬಾಲಿವುಡ್ ಬೆಡಗಿ ದೀಪಿಕಾ ಪಡುಕೋಣೆ ಆರೋಗ್ಯ ಹದಗೆಟ್ಟ ಕಾರಣ ಆಸ್ಪತ್ರೆಗೆ ದಾಖಲಾಗಿರುವ ವಿಚಾರ ಇತ್ತೀಚೆಗೆ ಬೆಳಕಿಗೆ ಬಂದಿದೆ. ಹೃದಯ ಬಡಿತ ಹೆಚ್ಚಾದ ಹಿನ್ನೆಲೆಯಲ್ಲಿ ಅವರನ್ನು ಹೈದರಾಬಾದ್‌ನ ಕಾಮಿನೇನಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇದೀಗ ವೈದ್ಯಕೀಯ ತಂಡ ಅವರನ್ನ ನಿಗಾದಲ್ಲಿ ಇರಿಸಿದೆ.
ಪ್ರಭಾಸ್ ನಾಯಕನಾಗಿ ನಟಿಸುತ್ತಿರುವ ‘ಪ್ರಾಜೆಕ್ಟ್ ಕೆ’ ಚಿತ್ರದಲ್ಲಿ ದೀಪಿಕಾ ನಾಯಕಿಯಾಗಿ ನಟಿಸಿದ್ದಾರೆ. ಸದ್ಯ ರಾಮೋಜಿ ಫಿಲ್ಮ್ ಸಿಟಿಯಲ್ಲಿ ಚಿತ್ರೀಕರಣ ನಡೆಯುತ್ತಿದೆ. ಚಿತ್ರೀಕರಣದ ವೇಳೆ ಹಠಾತ್ ಹೃದಯ ಬಡಿತ ಹೆಚ್ಚಾದ ಕಾರಣ ಅವರನ್ನು ಆಸ್ಪತ್ರೆಗೆ ಸೇರಿಸಲಾಯಿತು.
ವರದಿಗಳ ಪ್ರಕಾರ ವೈದ್ಯರ ಚಿಕಿತ್ಸೆಯ ನಂತರ ಅವರ ಆರೋಗ್ಯ ಸ್ಥಿರವಾಗಿದ್ದು ಸೆಟ್ ಮತ್ತೆ ಮರಳಿದ್ದಾರೆ ಎನ್ನಲಾಗುತ್ತಿದೆ.
ಸೋಮವಾರ ದೀಪಿಕಾ ಆರೋಗ್ಯ ಹದಗೆಟ್ಟಿದ್ದು, ನೋವಾಲೆಟ್ ಹೋಟೆಲ್‌ನಲ್ಲಿ ನಿಗಾ ಇರಿಸಲಾಗಿತ್ತು ಎಂದು ಅವರ ಆಪ್ತ ಮೂಲಗಳು ತಿಳಿಸಿವೆ. ಪ್ರಾಜೆಕ್ಟ್ ಕೆ ಚಿತ್ರವನ್ನ ವೈಜಯಂತಿ ಮೂವೀಸ್ ನಿರ್ಮಿಸುತ್ತಿದ್ದು, ಪ್ರಭಾಸ್ ಗೆ ಜೋಡಿಯಾಗಿ ದೀಪಿಕಾ ಪಡುಕೋಣೆ ನಟಿಸುತ್ತಿದ್ದಾರೆ. ಅಮಿತಾಬ್ ಬಚ್ಚನ್ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಚಿತ್ರಕ್ಕೆ ನಾಗ್ ಅಶ್ವಿನ್ ಆಕ್ಷನ್ ಕಟ್ ಹೇಳುತ್ತಿದ್ದಾರೆ.








