ಬೆಂಗಳೂರು : ರೆಬೆಲ್ ಶಾಸಕರ ಮನವೊಲಿಕಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮುಂದಾಗಿದ್ದಾರೆ ಎನ್ನಲಾಗಿದೆ. ಶಾಸಕ ಉಮೇಶ್ ಕತ್ತಿ ಹೋಮ್ ಡಿನ್ನರ್ ಪಾರ್ಟಿ ರಾಜ್ಯ ರಾಜಕೀಯದಲ್ಲಿ ಕೋಲಾಹಲ ಸೃಷ್ಟಿಸಿದೆ. ಶಾಸಕ ಉಮೇಶ್ ಕತ್ತಿ ಅವರ ಮನೆಯಲ್ಲಿ ನಡೆದ ಔತಣ ಕೂಟದಲ್ಲಿ 25ಕ್ಕೂ ಹೆಚ್ಚು ಶಾಸಕರು ಭಾಗಿಯಾಗಿದ್ದರು. ಸಭೆ ಬಳಿಕ ಕೆಲ ಶಾಸಕರು ಬಹಿರಂಗವಾಗಿ ಅಸಮಾಧಾನ ಹೊರ ಹಾಕಿದ್ದರು.
ಈ ಹಿನ್ನೆಯಲ್ಲಿ ರೆಬಲ್ ಶಾಸಕರನ್ನು ಮನವೊಲಿಸುವ ಪ್ರಯತ್ನಕ್ಕೆ ಯಡಿಯೂರಪ್ಪ ಮುಂದಾಗಿದ್ದಾರೆ ಎನ್ನಲಾಗಿದೆ. ಇದಕ್ಕೆ ಪೂರಕವೆಂಬಂತೆ ಸಭೆಯಲ್ಲಿ ಭಾಗಿದ ಶಾಸಕರು ತಮ್ಮನ್ನು ಭೇಟಿಯಾಗುವಂತೆ ಸಿಎಂ ಯಡಿಯೂರಪ್ಪ ಸಂದೇಶ ಕಳಿಸಿದ್ದಾರೆ. ಅಲ್ಲದೆ ಮಾಜಿ ಸಚಿವ ಮುರುಗೇಶ್ ನಿರಾಣಿಗೆ ದೂರವಾಣಿ ಕರೆ ಮಾಡಿ ಮಾತುಕತೆ ನಡೆಸಿದ್ದಾರೆ. ಇದೆ ವೇಳೆ ನಿರಾಣಿ ಮಾಧ್ಯಮಗಳ ಮುಂದೆ ಗೊಂದಲದ ಹೇಳಿಕೆ ನೀಡಿರುವದನ್ನು ಯಡಿಯೂರಪ್ಪ ಪ್ರಸ್ತಾಪಿಸಿದ್ದಾರೆ ಎನ್ನಲಾಗಿದೆ. ಮಾತುಕತೆ ಸಮಯದಲ್ಲಿ ನಾವು ಯಾವುದೇ ರೀತಿಯ ಸಭೆ ನಡೆಸಿಲ್ಲ ಎಂದು ಮುರುಗೇಶ್ ನಿರಾಣಿ ಹೇಳಿದ್ದಾರೆ ಎಂದು ಮೂಲಗಳು ತಿಳಿಸಿವೆ.








