ಅತ್ಯುತ್ತಮ ಪ್ರಾದೇಶಿಕ ವಿಮಾನ ನಿಲ್ದಾಣ ಪ್ರಶಸ್ತಿ ಪಡೆದ ಬೆಂಗಳೂರು ಏರ್ಪೋರ್ಟ್ ….
ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣವು 2022 ರ ಸ್ಕೈ ಟ್ರಾಕ್ಸ್ ವರ್ಲ್ಡ್ ಏರ್‌ಪೋರ್ಟ್ ಪ್ರಶಸ್ತಿಗಳಲ್ಲಿ ಭಾರತ ಮತ್ತು ದಕ್ಷಿಣ ಏಷ್ಯಾದ ಅತ್ಯುತ್ತಮ ಪ್ರಾದೇಶಿಕ ವಿಮಾನ ನಿಲ್ದಾಣ ಪ್ರಶಸ್ತಿಯನ್ನು ಪಡೆದುಕೊಂಡಿದೆ.
ಜಾಗತಿಕವಾಗಿ ನಡೆಸಿದ ಸಮೀಕ್ಷೆಯಲ್ಲಿ ಗ್ರಾಹಕರ ಪ್ರತಿಕ್ರಿಯೆಯನ್ನು ಆಧರಿಸಿ ಈ ಪ್ರಶಸ್ತಿ ನೀಡಲಾಗಿದೆ. ಚೆಕ್-ಇನ್‌ನಿಂದ ಆಗಮನ, ವರ್ಗಾವಣೆ, ಶಾಪಿಂಗ್, ಭದ್ರತೆ, ವಲಸೆ ಮತ್ತು ನಿರ್ಗಮನದ ಗೇಟ್‌ಗಳಲ್ಲಿನ ವ್ಯವಸ್ಥೆಗಳವರೆಗಿನ ಗ್ರಾಹಕರ ಅನುಭವವನ್ನು ಸಮೀಕ್ಷೆಯು ಮೌಲ್ಯಮಾಪನ ಮಾಡುತ್ತದೆ.
ಈ ವರ್ಷದ ಆರಂಭದಲ್ಲಿ ನಡೆದ ವಿಂಗ್ಸ್ ಇಂಡಿಯಾ ಪ್ರಶಸ್ತಿಗಳಲ್ಲಿ ಬೆಂಗಳೂರು ವಿಮಾನ ನಿಲ್ದಾಣವು ಅತ್ಯುತ್ತಮ ವಿಮಾನ ನಿಲ್ದಾಣ ಮತ್ತು ಏವಿಯೇಷನ್ ಇನ್ನೋವೇಶನ್ ಪ್ರಶಸ್ತಿಯನ್ನು ಗೆದ್ದುಕೊಂಡಿತ್ತು.
Bengaluru Airport voted as the ‘Best Regional Airport in India & South Asia’








