ADVERTISEMENT
Wednesday, March 4, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ನೀನ್ಯಾಕೆ ಬೌಲಿಂಗ್ ಮಾಡುತ್ತಿಲ್ಲ ಅಂತ ಇಶಾಂತ್‍ಗೆ ದ್ರಾವಿಡ್ ಕೇಳಿದಾಗ… !

admin by admin
May 30, 2020
in Newsbeat, Sports, ಕ್ರೀಡೆ
India's Ishant Sharma reacts to a dropped catch during day two of the first Test cricket match between New Zealand and India at the Basin Reserve in Wellington on February 22, 2020. (Photo by Marty MELVILLE / AFP) (Photo by MARTY MELVILLE/AFP via Getty Images)

India's Ishant Sharma reacts to a dropped catch during day two of the first Test cricket match between New Zealand and India at the Basin Reserve in Wellington on February 22, 2020. (Photo by Marty MELVILLE / AFP) (Photo by MARTY MELVILLE/AFP via Getty Images)

Share on FacebookShare on TwitterShare on WhatsappShare on Telegram

ಇದು ಇಶಾಂತ್ ಶರ್ಮಾ ಅವರ ಕ್ರಿಕೆಟ್ ಜರ್ನಿ ಶುರುವಾಗುವುದಕ್ಕಿಂತ ಮುನ್ನ ದಿನ ನಡೆದಿದ್ದ ಘಟನೆ. ಬಹುಶಃ ಇಶಾಂತ್ ಶರ್ಮಾ ಕೂಡ ನಿರೀಕ್ಷೆ ಮಾಡಿರಲಿಲ್ಲ. ಯಾಕಂದ್ರೆ ಇಶಾಂತ್ ಶರ್ಮಾಗೆ ಆವಾಗ ಜಸ್ಟ್ 17 ವರ್ಷ. ಆಗಲೇ ಬಾಂಗ್ಲಾದೇಶದ ವಿರುದ್ಧ ಆಡುವ ಮೂಲಕ ಟೆಸ್ಟ್ ಪಂದ್ಯಕ್ಕೆ ಪದಾರ್ಪಣೆ ಮಾಡಿದ್ದರು. ಆದ್ರೆ ಏಕದಿನ ಪಂದ್ಯಕ್ಕೆ ಇನ್ನೂ ಎಂಟ್ರಿಯಾಗಲಿಲ್ಲ. ಹೀಗಾಗಿ ಅವರು ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಗೆ ಆಯ್ಕೆಯಾಗಿದ್ದು,ಅದನ್ನು ಎದುರು ನೋಡುತ್ತಿದ್ದರು. ಈ ನಡುವೆ ಒಂದು ಅನಿರೀಕ್ಷಿತ ಕರೆ ಇಶಾಂತ್ ಶರ್ಮಾಗೆ ಅಚ್ಚರಿಯನ್ನುಂಟು ಮಾಡಿತ್ತು. ಜೊತೆಗೆ ಏಕದಿನ ಪಂದ್ಯಕ್ಕೆ ಆಡುವ ಅವಕಾಶವೂ ಸಿಕ್ಕಿತ್ತು.

ತಾನು ಏಕದಿನ ಪಂದ್ಯಕ್ಕೆ ಪದಾರ್ಪಣೆ ಹೇಗೆ ಮಾಡಿದ್ದೆ. ಆಗ ನೆಟ್ಸ್ ನಲ್ಲಿ ಏನಾಯ್ತು, ಸುಮ್ಮನೆ ನೆಟ್ಸ್ ನಲ್ಲಿ ನಿಂತು ನೋಡುತ್ತಿದ್ದ ನನ್ನನ್ನು ದ್ರಾವಿಡ್ ಯಾಕೆ ಪ್ರಶ್ನೆ ಮಾಡಿದ್ರು, ದ್ರಾವಿಡ್ ಏನು ಹೇಳಿದ್ರು, ಯಾರ ಶ್ಯೂ ಹಾಕೊಂಡು ಚೊಚ್ಚಲ ಏಕದಿನ ಪಂದ್ಯವನ್ನು ಆಡಿದ್ದೆ ಎಂಬುದನ್ನು ಮಯಾಂಕ್ ಅಗರ್‍ವಾಲ್ ಜೊತೆಗಿನ ಲೈವ್ ಕಾರ್ಯಕ್ರಮದಲ್ಲಿ ಹೇಳಿಕೊಂಡಿದ್ದಾರೆ.

Related posts

ಕೆಪಿಸಿಸಿ ಅಧ್ಯಕ್ಷರಾಗಿ 6 ವರ್ಷ: ಡಿಸಿಎಂ ಡಿಕೆಶಿ ಡಿನ್ನರ್ ಕೂಟ ಆಯೋಜನೆ

ಕೆಪಿಸಿಸಿ ಅಧ್ಯಕ್ಷರಾಗಿ 6 ವರ್ಷ: ಡಿಸಿಎಂ ಡಿಕೆಶಿ ಡಿನ್ನರ್ ಕೂಟ ಆಯೋಜನೆ

March 4, 2026
ಇರಾನ್–ಇಸ್ರೇಲ್ ಸಂಘರ್ಷದ ಪರಿಣಾಮ: ಬೆಂಗಳೂರಿಗೆ ತಟ್ಟುತ್ತಾ ಡ್ರೈಫ್ರೂಟ್ಸ್ ಬೆಲೆ ಏರಿಕೆ?

ಇರಾನ್–ಇಸ್ರೇಲ್ ಸಂಘರ್ಷದ ಪರಿಣಾಮ: ಬೆಂಗಳೂರಿಗೆ ತಟ್ಟುತ್ತಾ ಡ್ರೈಫ್ರೂಟ್ಸ್ ಬೆಲೆ ಏರಿಕೆ?

March 4, 2026

ನಾನು ಮನೆಯಲ್ಲಿ ಆರಾಮವಾಗಿ ಕುಳಿತಿದ್ದೆ. ಆಗ ನನಗೆ ಒಂದು ಕರೆ ಬಂತು, (ಆಗ ಐರ್ಲೆಂಡ್ ನಲ್ಲಿ ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವೆ ಏಕದಿನ ಸರಣಿ ನಡೆಯುತ್ತಿತ್ತು. ಆ ನಂತರ ಇಂಗ್ಲೆಂಡ್ ಸರಣಿ) ನೀನು ಈಗಲೇ ಐರ್ಲೆಂಡ್ ಬಂದು ಟೀಮ್ ಇಂಡಿಯಾವನ್ನು ಸೇರಿಕೊಳ್ಳಬೇಕು ಅಂತ. ಆದ್ರೆ ನನಗೆ ಅಚ್ಚರಿ ಒಂದು ಕಡೆಯಾದ್ರೆ ಮತ್ತೊಂದೆಡೆ ಖುಷಿ. ಈ ನಡುವೆ ಅಲ್ಲಿ ತುಂಬಾನೆ ಚಳಿ ಇದೆ ಎಂಬುದನ್ನು ತಿಳಿದಿದ್ದೆ. ಅಲ್ಲದೆ ಟೀಮ್ ಇಂಡಿಯಾದ ಆರೇಳು ಆಟಗಾರರು ಜ್ವರದಿಂದ ಬಳಲುತ್ತಿದ್ದರು. ದಿನೇಶ್ ಕಾರ್ತಿಕ್, ರಾಬಿನ್ ಉತ್ತಪ್ಪ, ಧೋನಿ, ಆರ್.ಪಿ.ಸಿಂಗ್ ಸೇರಿದಂತೆ ಆರೇಳು ಮಂದಿ ಜ್ವರದಿಂದ ಬಳಲುತ್ತಿದ್ದರು. ಹೀಗಾಗಿ ನಾನು ಐರ್ಲೆಂಡ್ ನಲ್ಲಿ ಟೀಮ್ ಇಂಡಿಯಾವನ್ನು ಸೇರಿಕೊಂಡೆ ಅಂತ ತಾನು ಹೇಗೆ ಏಕದಿನ ತಂಡಕ್ಕೆ ಆಯ್ಕೆಯಾದೆ ಎಂಬುದನ್ನು ಹೇಳಿಕೊಂಡ್ರು.

ನಾನು ಐರ್ಲೆಂಡ್ ನಲ್ಲಿ ತಂಡವನ್ನು ಸೇರಿಕೊಂಡೆ. ಅಲ್ಲಿ ನಾನು ನನ್ನ ಲಗೇಜ್‍ಗಾಗಿ ಕಾಯುತ್ತ ಇದ್ದೆ. ಕೊನೆಗೆ ನನ್ನ ಮ್ಯಾನೇಜರ್‍ಗೆ ಕರೆ ಮಾಡಿದ್ದೆ. ಆಗ ಮ್ಯಾನೇಜರ್ ಲಗೇಜ್ ಎಲ್ಲಾ ನಿನ್ನ ರೂಮ್‍ಗೆ ನೇರವಾಗಿ ಬರುತ್ತೆ ಅಂತ ಹೇಳಿದ್ದ. ಆಗ ನಾನು ವ್ಹಾ ಅಂತ ಉದ್ಗಾರವೆತ್ತಿದ್ದೆ. ನಮಗೆ ಈ ರೀತಿಯ ಸೌಲಭ್ಯಗಳು ಇದೆಯಾ ಅಂತ ಖುಷಿಯಾಯ್ತು.ಯಾಕಂದ್ರೆ ರಣಜಿ ಪಂದ್ಯಗಳ ವೇಳೆ ನಮ್ಮ ಲಗೇಜ್‍ಗಳನ್ನು ನಾವೇ ತೆಗೆದುಕೊಂಡು ಹೋಗಬೇಕಾಗಿತ್ತು ಎಂದು ಆ ಕ್ಷಣ ತನ್ನ ಮನದಲ್ಲಿ ಮೂಡಿದ್ದ ಭಾವನೆಗಳನ್ನು ವ್ಯಕ್ತಪಡಿಸಿದ್ರಂತೆ.

ಸರಿ ಅಂತ ಟೀಮ್ ಇಂಡಿಯಾ ಆಟಗಾರರು ನೆಟ್ಸ್ ನಲ್ಲಿ ಅಭ್ಯಾಸದಲ್ಲಿ ನಿರತರಾಗಿದ್ದರು. ನಾನು ಅವರು ಅಭ್ಯಾಸ ಮಾಡುತ್ತಿರುವುದನ್ನು ನೋಡ್ತಾ ನಿಂತಿದ್ದೆ. ಆಗ ನನ್ನ ಬಳಿ ಬಂದು, ಇಶಾಂತ್ ನೀನ್ಯಾಕೆ ಬೌಲಿಂಗ್ ಮಾಡುತ್ತಿಲ್ಲ ಅಂತ ಪ್ರಶ್ನೆ ಮಾಡಿದ್ದರು. ಆತಂಕಗೊಂಡ ಮೆಲ್ಲನೆಯ ಸ್ವರದಲ್ಲಿ ಏನೇನೋ ಹೇಳ್ತಾ ಇದ್ದೆ. ಆಗ ತಕ್ಷಣವೇ ಏನು ಅಂತ ದ್ರಾವಿಡ್ ಕೇಳಿದ್ದರು. ಆಗ ನಾನು ಹೇಳಿದ್ದೆ. ರಾಹುಲ್ ಭಾಯ್, ನನ್ನ ಲಗೇಜ್ ಇನ್ನೂ ಬಂದಿಲ್ಲ. ಆಗ ದ್ರಾವಿಡ್ ಇದ್ರ ಅರ್ಥ ಏನು ಅಂತ ಕೇಳಿದ್ದರು. ಅದಕ್ಕೆ ವಿಮಾನದಲ್ಲಿ ಹಾಕಿದ್ದೆ. ಆದ್ರೆ ನನ್ನ ಲಗೇಜ್ ಇನ್ನೂ ನನ್ನ ಕೈಸೇರಿಲ್ಲ ಅಂದೆ. ಮತ್ತೆ ದ್ರಾವಿಡ್ ಅವರದ್ದು ಪ್ರಶ್ನೆ. ಹಾಗಾದ್ರೆ ನಾಳೆ ಮ್ಯಾಚ್ ಹೇಗೆ ಆಡುತ್ತಿಯಾ ? ಈ ಪ್ರಶ್ನೆ ನನ್ನ ಮತ್ತಷ್ಟು ಆಘಾತಕ್ಕೀಡು ಮಾಡಿತ್ತು. ಅಚ್ಚರಿಯಂದ್ರೆ ನಾನು ನನ್ನ ಮೊದಲ ಪಂದ್ಯವನ್ನು ಜಹೀರ್ ಖಾನ್ ಅವರ ಶ್ಯೂ ಹಾಕೊಂಡು ಆಡಿದ್ದೆ ಎಂದು ಇಶಾಂತ್ ಶರ್ಮಾ ತನ್ನ ಬದುಕಿನ ಮೊದಲ ಏಕದಿನ ಪಂದ್ಯದ ಅನುಭವವನ್ನು ಹಂಚಿಕೊಂಡ್ರು.

Tags: ishant sharma
ShareTweetSendShare
Join us on:

Related Posts

ಕೆಪಿಸಿಸಿ ಅಧ್ಯಕ್ಷರಾಗಿ 6 ವರ್ಷ: ಡಿಸಿಎಂ ಡಿಕೆಶಿ ಡಿನ್ನರ್ ಕೂಟ ಆಯೋಜನೆ

ಕೆಪಿಸಿಸಿ ಅಧ್ಯಕ್ಷರಾಗಿ 6 ವರ್ಷ: ಡಿಸಿಎಂ ಡಿಕೆಶಿ ಡಿನ್ನರ್ ಕೂಟ ಆಯೋಜನೆ

by Shwetha
March 4, 2026
0

ಉಪ ಮುಖ್ಯಮಂತ್ರಿ ಹಾಗೂ ಕರ್ನಾಟಕ ಪ್ರದೇಶ್ ಕಾಂಗ್ರೆಸ್ ಕಮಿಟಿ (KPCC) ಅಧ್ಯಕ್ಷರಾದ ಡಿ. ಕೆ. ಶಿವಕುಮಾರ್ ಅವರು ಆ ಹುದ್ದೆಯಲ್ಲಿ ಆರು ವರ್ಷಗಳನ್ನು ಪೂರೈಸಿದ್ದಾರೆ. ಈ ಹಿನ್ನೆಲೆಯಲ್ಲಿ...

ಇರಾನ್–ಇಸ್ರೇಲ್ ಸಂಘರ್ಷದ ಪರಿಣಾಮ: ಬೆಂಗಳೂರಿಗೆ ತಟ್ಟುತ್ತಾ ಡ್ರೈಫ್ರೂಟ್ಸ್ ಬೆಲೆ ಏರಿಕೆ?

ಇರಾನ್–ಇಸ್ರೇಲ್ ಸಂಘರ್ಷದ ಪರಿಣಾಮ: ಬೆಂಗಳೂರಿಗೆ ತಟ್ಟುತ್ತಾ ಡ್ರೈಫ್ರೂಟ್ಸ್ ಬೆಲೆ ಏರಿಕೆ?

by Shwetha
March 4, 2026
0

ಇರಾನ್–ಇಸ್ರೇಲ್ ನಡುವಿನ ಸಂಘರ್ಷ ಜಾಗತಿಕ ವ್ಯಾಪಾರಕ್ಕೆ ಧಕ್ಕೆಯೊಡ್ಡುತ್ತಿರುವ ಹಿನ್ನೆಲೆ, ಅದರ ಪರಿಣಾಮ ಬೆಂಗಳೂರಿನ ಮಾರುಕಟ್ಟೆಯ ಮೇಲೂ ಬೀರುವ ಸಾಧ್ಯತೆ ಇದೆ ಎಂದು ಸ್ಥಳೀಯ ವ್ಯಾಪಾರಿಗಳು ಹೇಳುತ್ತಿದ್ದಾರೆ. ವಿಶೇಷವಾಗಿ...

ಅಧಿಕಾರ ಹಸ್ತಾಂತರದ ಸುಳಿವು ನೀಡಿದ್ರಾ ಸಿದ್ದರಾಮಯ್ಯ ಕಾಂಗ್ರೆಸ್ ಸಿಎಂ ಇರ್ತಾರೆ ಎಂದ ಮಾತುಗಳ ಹಿಂದಿನ ಮರ್ಮವೇನು

ಅಧಿಕಾರ ಹಸ್ತಾಂತರದ ಸುಳಿವು ನೀಡಿದ್ರಾ ಸಿದ್ದರಾಮಯ್ಯ ಕಾಂಗ್ರೆಸ್ ಸಿಎಂ ಇರ್ತಾರೆ ಎಂದ ಮಾತುಗಳ ಹಿಂದಿನ ಮರ್ಮವೇನು

by Shwetha
March 4, 2026
0

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಮತ್ತೊಂದು ಸುತ್ತಿನ ರಣರೋಚಕ ಚರ್ಚೆ ಶುರುವಾಗಿದೆ. ರಾಜ್ಯ ಬಜೆಟ್ ಮಂಡನೆ ಯಶಸ್ವಿಯಾಗಿ ಮುಗಿದ ಬೆನ್ನಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೊರಡಿಸಿರುವ ಪತ್ರಿಕಾ ಪ್ರಕಟಣೆ...

ದರ್ಶನ್ ಕೇಸ್‌ನಲ್ಲಿ ಪೊಲೀಸರ ಎಡವಟ್ಟು ಬಯಲು ಕೋರ್ಟ್ ಅಂಗಳದಲ್ಲಿ ತನಿಖಾಧಿಕಾರಿಗಳ ವಿರುದ್ಧ ಸಿಡಿದೆದ್ದ ಜಡ್ಜ್

ದರ್ಶನ್ ಕೇಸ್‌ನಲ್ಲಿ ಪೊಲೀಸರ ಎಡವಟ್ಟು ಬಯಲು ಕೋರ್ಟ್ ಅಂಗಳದಲ್ಲಿ ತನಿಖಾಧಿಕಾರಿಗಳ ವಿರುದ್ಧ ಸಿಡಿದೆದ್ದ ಜಡ್ಜ್

by Shwetha
March 4, 2026
0

ರಾಜ್ಯವನ್ನೇ ಬೆಚ್ಚಿಬೀಳಿಸಿದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದಿನಕ್ಕೊಂದು ಸ್ಫೋಟಕ ಮಾಹಿತಿ ಹೊರಬೀಳುತ್ತಿದೆ. ಇದೀಗ ಹೈ ಪ್ರೊಫೈಲ್ ಆರೋಪಿ ದರ್ಶನ್ ತೂಗುದೀಪ ಮತ್ತು ಗ್ಯಾಂಗ್ ವಿರುದ್ಧದ ತನಿಖೆಯಲ್ಲಿ ಪೊಲೀಸರು...

ಮಧ್ಯಪ್ರಾಚ್ಯ ಸಂಘರ್ಷ: ಭಾರತ ನೈತಿಕವಾಗಿ ಸ್ಪಷ್ಟ ನಿಲುವು ತಾಳಬೇಕು – ರಾಹುಲ್ ಗಾಂಧಿ

ಮಧ್ಯಪ್ರಾಚ್ಯ ಸಂಘರ್ಷ: ಭಾರತ ನೈತಿಕವಾಗಿ ಸ್ಪಷ್ಟ ನಿಲುವು ತಾಳಬೇಕು – ರಾಹುಲ್ ಗಾಂಧಿ

by Shwetha
March 4, 2026
0

ಮಧ್ಯಪ್ರಾಚ್ಯದಲ್ಲಿ ಹೆಚ್ಚುತ್ತಿರುವ ಉದ್ವಿಗ್ನತೆ ಕುರಿತು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಪ್ರತಿಕ್ರಿಯೆ ನೀಡಿದ್ದು, ಭಾರತವು ಈ ವಿಚಾರದಲ್ಲಿ ನೈತಿಕವಾಗಿ ಸ್ಪಷ್ಟ ನಿಲುವು ತಾಳಬೇಕು ಎಂದು ಹೇಳಿದ್ದಾರೆ. ಇರಾನ್...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram