ಬೆಂಗಳೂರಿನಲ್ಲಿ ಪ್ರಧಾನಿ – ಹಲವು ಅಭಿವೃದ್ದಿ ಯೋಜನೆಗಳಿಗೆ ಪ್ರಧಾನಿ ಶಂಕುಸ್ಥಾಪನೆ…
ಎರಡು ದಿನಗಳ ಕಾಲ ರಾಜ್ಯ ಪ್ರವಾಸದಲ್ಲಿರು ಪ್ರಧಾನಿ ನರೇಂದ್ರ ಮೋದಿ ಅವರು, ಬೆಂಗಳೂರಿನ ಕೊಮ್ಮಘಟ್ಟದಲ್ಲಿಂದು ಆಯೋಜಿಸಲಾಗಿದ್ದ ಬೃಹತ್ ಕಾರ್ಯಕ್ರಮದಲ್ಲಿ ಬೆಂಗಳೂರು ಉಪನಗರ ರೈಲು ಯೋಜನೆ ಸೇರಿದಂತೆ 28 ಸಾವಿರ ಕೋಟಿ ರೂಪಾಯಿಗೂ ಅಧಿಕ ಮೊತ್ತದ ರೈಲು ಹಾಗೂ ರಸ್ತೆ, ಮೂಲಸೌಕರ್ಯ ಅಭಿವೃದ್ಧಿ ಯೋಜನೆಗಳ ಸಮರ್ಪಣೆ ಮತ್ತು ಶಂಕುಸ್ಥಾಪನೆ
ಕನ್ನಡದಲ್ಲಿ ತಮ್ಮ ಭಾಷಣ ಆರಂಭಿಸಿದ ಪ್ರಧಾನಿ ನರೇಂದ್ರ ಮೋದಿ, ಕರುನಾಡಿನ ಜನತೆಗೆ ನನ್ನ ಪ್ರೀತಿಯ ನಮಸ್ಕಾರಗಳು. ಬೆಂಗಳೂರಿನ ಮಹಾಜನತೆಗೆ ವಿಶೇಷವಾದ ನಮಸ್ಕಾರಗಳು. ರಾಜ್ಯದಲ್ಲಿ ಇಂದು ಮಹತ್ವದ ದಿನ. ಹಲವಾರು ಮೂಲಸೌಕರ್ಯ ಕಲ್ಪಿಸುವ ಯೋಜನೆ ಕೈಗೆತ್ತಿಕೊಂಡಿರುವ ಸುದಿನ ಎಂದು ರಾಜ್ಯದ ಜನರಿಗೆ ಶುಭ ಕೋರಿದರು.
ರಾಜ್ಯದಲ್ಲಿ 5 ರಾಷ್ಟ್ರೀಯ ಹೆದ್ದಾರಿಗಳು ಮತ್ತು 7 ರೈಲ್ವೆ ಯೋಜನೆಗಳಿಗೆ ಶಿಲಾನ್ಯಾಸ ಮಾಡಿರುವುದರಿಂದ ಸಂಚಾರ ದಟ್ಟಣೆ ಸಮಸ್ಯೆಗೆ ಪರಿಹಾರ ಸಿಗಲಿದೆ. ಬೆಂಗಳೂರು, ಏಕ ಭಾರತ, ಶ್ರೇಷ್ಠ ಭಾರತದ ಪ್ರತಿಬಿಂಬ. ಬೆಂಗಳೂರು ಅಭಿವೃದ್ಧಿಗೆ ಮತ್ತಷ್ಟು ನೆರವು ನೀಡುವುದಾಗಿ ತಿಳಿಸಿದರು.
ಕರ್ನಾಟಕದಲ್ಲಿ ಅಭಿವೃದ್ಧಿ ಯೋಜನೆಗಳಿಗೆ ಕೇಂದ್ರದಿಂದ ಮತ್ತಷ್ಟು ನೆರವು ನೀಡಲಾಗುವುದು. ಕೇಂದ್ರ ಮತ್ತು ರಾಜ್ಯದಲ್ಲಿ ನಿರಂತರವಾಗಿ ಡಬಲ್ ಇಂಜಿನ್ ಸರ್ಕಾರ ಕೆಲಸ ಮಾಡುತ್ತಿದೆ. ಇದೇ ಬದ್ಧತೆ ಹತ್ತು ಹಲವು ಯೋಜನೆಗಳನ್ನು ಜಾರಿ ಮಾಡಲು ಸ್ಫೂರ್ತಿ ನೀಡಲಿದೆ ಎಂದರು.
40 ವರ್ಷಗಳಿಂದ ಚರ್ಚೆಯಲ್ಲಿದ್ದ ಬೆಂಗಳೂರು ಉಪನಗರ ರೈಲು ಯೋಜನೆಗೆ ಶಂಕುಸ್ಥಾಪನೆ ನೆರವೇರಿಸುವ ಮೂಲಕ ಬೆಂಗಳೂರಿಗರ ಬಹುದಿನಗಳ ಕನಸು ನನಸು ಮಾಡುವ ಕಾರ್ಯ ಆರಂಭಿಸಿದ್ದೇವೆ. ಬೆಂಗಳೂರಿನ ಸಂಚಾರ ದಟ್ಟಣೆ ಕಡಿಮೆ ಮಾಡಲು ಮೆಟ್ರೋ ರೈಲು, ಸುರಂಗ ಮಾರ್ಗ ಸೇರಿದಂತೆ ಹಲವು ಯೋಜನೆಗಳನ್ನು ಕೈಗೆತ್ತಿಕೊಳ್ಳಲಾಗಿದೆ ಎಂದರು.
ನನ್ನನ್ನು ನಂಬಿ ನೀವು ಜವಾಬ್ದಾರಿ ನೀಡಿದ್ದೀರಿ. ಪ್ರತಿಕ್ಷಣವೂ ನಿಮ್ಮ ಸೇವೆಗಾಗಿ ಸಮಯವನ್ನು ಮೀಸಲಿಟ್ಟಿದ್ದೇನೆ ಎಂದು ಅವರು ಇದೇ ಸಂದರ್ಭದಲ್ಲಿ ತಿಳಿಸಿದರು.








