ADVERTISEMENT
Friday, September 18, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Cinema

777 ಚಾರ್ಲಿಗೆ ತೆರಿಗೆ ವಿನಾಯ್ತಿ…!!! ಸಿಎಂ ಬೊಮ್ಮಾಯಿ ಅವರನ್ನ ಪ್ರಶ್ನಿಸಿದ ಮಂಸೋರೆ…!!!

Namratha Rao by Namratha Rao
June 20, 2022
in Cinema, Newsbeat, ಮನರಂಜನೆ
Share on FacebookShare on TwitterShare on WhatsappShare on Telegram

ದೇಶಾದ್ಯಂತ ಸದ್ದು ಮಾಡ್ತಿರುವ ಕನ್ನಡದ ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ ಅಭಿನಯದ 777 ಚಾರ್ಲಿಗೆ ಸಿಎಂ ಬೊಮ್ಮಾಯಿ ಅವರು ತೆರಿಗೆ ವಿನಾಯ್ತಿ ಘೋಷಣೆ ಮಾಡಿದ್ದಾರೆ.. ಆದ್ರೆ ಈ ಬಗ್ಗೆ ನಿರ್ದೇಶಕ ಮಂಸೋರೆ ಅವರು ಅಸಮಾಧಾನ ಹೊರಹಾಕಿದ್ದಾರೆ..

ಅವರ ಪತ್ರ ಹೀಗಿದೆ..

Related posts

ಯತ್ನಾಳ ಮತ್ತು ಈಶ್ವರಪ್ಪ ಇಲ್ಲದೆ ಬಿಜೆಪಿ ಅಧಿಕಾರಕ್ಕೆ ಬರಲು ಸಾಧ್ಯವಿಲ್ಲ: ಹಿರಿಯ ನಾಯಕರ ಪರ ನಿರಾಣಿ ಬ್ಯಾಟಿಂಗ್- ರಾಜ್ಯಾಧ್ಯಕ್ಷ ವಿಜಯೇಂದ್ರಗೆ ಮುರುಗೇಶ ನಿರಾಣಿ ಖಡಕ್ ಸಲಹೆ

ಯತ್ನಾಳ ಮತ್ತು ಈಶ್ವರಪ್ಪ ಇಲ್ಲದೆ ಬಿಜೆಪಿ ಅಧಿಕಾರಕ್ಕೆ ಬರಲು ಸಾಧ್ಯವಿಲ್ಲ: ಹಿರಿಯ ನಾಯಕರ ಪರ ನಿರಾಣಿ ಬ್ಯಾಟಿಂಗ್- ರಾಜ್ಯಾಧ್ಯಕ್ಷ ವಿಜಯೇಂದ್ರಗೆ ಮುರುಗೇಶ ನಿರಾಣಿ ಖಡಕ್ ಸಲಹೆ

September 18, 2026
ರಷ್ಯಾ ತೈಲ ಖರೀದಿಗೆ ಅಮೆರಿಕದ ಕಠಿಣ ಕ್ರಮ: ಭಾರತ, ಚೀನಾ ಸೇರಿ ದೇಶಗಳ ಮೇಲೆ 100%ವರೆಗೆ ಸುಂಕಕ್ಕೆ ಟ್ರಂಪ್‌ಗೆ ಅಧಿಕಾರ

ರಷ್ಯಾ ತೈಲ ಖರೀದಿಗೆ ಅಮೆರಿಕದ ಕಠಿಣ ಕ್ರಮ: ಭಾರತ, ಚೀನಾ ಸೇರಿ ದೇಶಗಳ ಮೇಲೆ 100%ವರೆಗೆ ಸುಂಕಕ್ಕೆ ಟ್ರಂಪ್‌ಗೆ ಅಧಿಕಾರ

September 18, 2026

“ ಕರ್ನಾಟಕದ ಮುಖ್ಯಮಂತ್ರಿಗಳಾದ Chief Minister of Karnataka ಬಸವರಾಜ ಬೊಮ್ಮಾಯಿ ಅವರಿಗೆ ನಮಸ್ಕಾರ.

ನನ್ ಹೆಸರು,

ಮಂಸೋರೆ,  ಕನ್ನಡ ಸಿನೆಮಾ ನಿರ್ದೇಶಕ.

ತಾವು ಕನ್ನಡ ಸಿನೆಮಾ, ಚಾರ್ಲಿ 777ಗೆ ನಿರ್ಮಾಪಕರ ಕೋರಿಕೆಯ ಮೇರೆಗೆ , ಸದರಿ ಸಿನೆಮಾಗೆ 100% ಜಿಎಸ್‌ಟಿ ಇಂದ ವಿನಾಯಿತಿ ಕೊಟ್ಟಿರುವುದು ತುಂಬಾ ಸಂತೋಷದ ವಿಷಯ. ಕನ್ನಡ ಸಿನಿಮಾಗಳ ಏಳಿಗೆಗೆ ಇದು ಅತ್ಯವಶ್ಯಕ. ಜೊತೆಗೆ ಈ ಹಿಂದೆ ಯಾವುದೋ ಅನ್ಯ ಭಾಷೆಯ ಸಿನಿಮಾಗು ತಾವು 100% ಜಿಎಸ್‌ಟಿ ತೆರಿಗೆ ವಿನಾಯಿತಿ ಕೊಟ್ಟಿದ್ದೀರಿ ಎಂದು ಯಾವುದೋ ಸುದ್ದಿ ಪತ್ರಿಕೆಯಲ್ಲಿ ಓದಿದ ನೆನಪು. ಈಗ ಈ ಪತ್ರವನ್ನು ತಮಗೆ ಬರೆಯುತ್ತಿರುವುದರ ಕಾರಣವನ್ನು ಮೊದಲಿಗೆ ತಮಗೆ ವಿವರಿಸುತ್ತೇನೆ. ತಾವು ಮುಖ್ಯಮಂತ್ರಿ ಆಗುವ ಮೊದಲು, ತಮ್ಮ ಬಿಜೆಪಿ ಸರ್ಕಾರ ಬರುವ ಮೊದಲು ಕನ್ನಡದ ಸಿನೆಮಾಗಳಿಗೆ ಕನ್ನಡದ ನೆಲದಲ್ಲೇ ಸಂಪೂರ್ಣವಾಗಿ ತಯಾರಾಗುವ (ಹೊರ ರಾಜ್ಯದಲ್ಲಿ ಚಿತ್ರೀಕರಣವಾಗುವುದಾದರೆ ಅದಕ್ಕೆ ಸೂಕ್ತ ಕಾರಣ ಕೊಡಬೇಕಿತ್ತು) ಎಲ್ಲಾ ಕನ್ನಡ ಸಿನೆಮಾಗಳಿಗೆ 100% ತೆರಿಗೆ ವಿನಾಯಿತಿ ಇತ್ತು ಎಂಬ ವಿಷಯ ತಮಗೆ ಗೊತ್ತಿತ್ತೇ?

ಕನ್ನಡದ ಸಿನೆಮಾಗಳಿಗೆ ಇದ್ದ ಈ ವಿನಾಯಿತಿಯನ್ನು ಕನ್ನಡಿಗರ ಕೈಯಿಂದ (ಕನ್ನಡದ ನಿರ್ಮಾಪಕರ ಹೊಟ್ಟೆ ಮೇಲೆ ಹೊಡೆದು ಕಿತ್ತುಕೊಂಡಿದ್ದು) ನಿಮ್ಮದೇ ಆದ ಬಿಜೆಪಿ ಸರ್ಕಾರ ಎಂಬುದು ನಿಮಗೆ ತಿಳಿದಿದೆಯೇ? ಅದು ಜಿಎಸ್‌ಟಿ ಎಂಬ ಹೆಮ್ಮಾರಿಯ ಹೆಸರಲ್ಲಿ ಎಂಬುದು ತಮಗೆ ತಿಳಿದಿದೆಯೇ?

ಈ ಹಿಂದೆ ಕರ್ನಾಟಕದ ಮುಖ್ಯಮಂತ್ರಿಗಳಾಗಿದ್ದ ರಾಮಕೃಷ್ಣ ಹೆಗಡೆ ಅವರು ಕನ್ನಡ ಸಿನೆಮಾಗಳ ಮೇಲೆ ಮನರಂಜನಾ ತೆರಿಗೆ ವಿಧಿಸಲು ಹೋದಾಗ, ನಮ್ಮೆಲ್ಲರ ಪಾಲಿನ ಅಣ್ಣಾವ್ರು, ಡಾ. ರಾಜ್ಕುಮಾರ್ ಅವರು ಕನ್ನಡ ಚಿತ್ರರಂಗವನ್ನೇ ತ್ಯಜಿಸಿ ತಮ್ಮ ಹಳ್ಳಿಗೆ ಹೋಗುವ ನಿರ್ಧಾರ ಮಾಡುತ್ತಾರೆ, ಆಗ ಮುಖ್ಯಮಂತ್ರಿಗಳೇ ಅಣ್ಣಾವ್ರ ಮನೆಗೆ ಹೋಗಿ ಅವರ ನಿರ್ಧಾರವನ್ನು ಹಿಂತೆಗೆದುಕೊಳ್ಳುವಂತೆ ಅವರ ಮನವೊಲಿಸಿ ಅವರು ತಮ್ಮ ನಿರ್ಧಾರವನ್ನು ಹಿಂತೆಗೆದುಕೊಳ್ಳುವಂತೆ ಒಪ್ಪಿಸುತ್ತಾರೆ ಹಾಗು ತೆರಿಗೆ ವಿಧಿಸುವ ತಮ್ಮ ನಿಲುವನ್ನು ಹಿಂತೆಗೆದುಕೊಳ್ಳುತ್ತಾರೆ.

 

(ಹಿರಿಯ ಪತ್ರಕರ್ತರಾದ ಬಿ.ವಿ.ವೈಕುಂಠರಾಜು ರವರ ಸಿನೆಮಾತು ಪುಸ್ತಕದಲ್ಲಿ ಇದರ ಬಗ್ಗೆ ಸ್ಪಷ್ಟವಾಗಿ  ಉಲ್ಲೇಖಿಸಲಾಗಿದೆ) ಅದೇ ಮುಂದೆ ಕನ್ನಡ ಹಾಗೂ ಕನ್ನಡ ನೆಲದಲ್ಲಿ ತಯಾರಾಗುವ ಎಲ್ಲಾ ಸಿನೆಮಾಗಳಿಗೂ 100% ತೆರಿಗೆ ವಿನಾಯಿತಿ ನೀಡಲಾಗುವ ನಿರ್ಧಾರ ಕೈಗೊಳ್ಳಲಾಗುತ್ತದೆ. ಅಂತಹ ಮಹಾನುಭಾವರ ನಿರ್ಧಾರದಿಂದ ಕನ್ನಡ ಚಿತ್ರರಂಗಕ್ಕೆ ಸಿಕ್ಕಿದ್ದ ಸೌಲಭ್ಯವನ್ನು ಕಿತ್ತುಕೊಂಡಿದ್ದು ಜಿಎಸ್‌ಟಿ ನೆಪದಲ್ಲಿ ನಿಮ್ಮದೇ ಬಿಜೆಪಿ ಸರ್ಕಾರ ಎಂಬುದು ತಮಗೆ ತಿಳಿದಿದೆಯೇ?

ಈಗ ವಾಪಸ್ಸು ನಿಮ್ಮ ಆಡಳಿತದ ಸರ್ಕಾರದ ವಿಷಯಕ್ಕೆ ಬರುವುದಾದರೆ, ಶ್ವಾನದ ಕಾಳಜಿಯಿಂದ ತಾವು ಆ ‘ಒಂದು’ ಕನ್ನಡ ಸಿನೆಮಾಗೆ ಮಾತ್ರ 100% ಜಿಎಸ್‌ಟಿ ತೆರಿಗೆ ವಿನಾಯಿತಿ ನೀಡಲು ಆ ಹಣವನ್ನು ತಾವು ತಮ್ಮ ಜೇಬಿನಿಂದ ನೀಡುತ್ತಿದ್ದೀರ ಎಂದು ತಿಳಿಯಲು ಡಾ.ಬಿ.ಆರ್.ಅಂಬೇಡ್ಕರ್ ಸರ್ ಬರೆದಿರುವ, ಸಾಂವಿಧಾನಿಕ ಹಕ್ಕನ್ನು ಪಡೆದಿರುವ ಕರ್ನಾಟಕದ ಪ್ರಜೆಗಳಾಗಿ ಕೇಳಿತ್ತಿದ್ದೇನೆ, ದಯವಿಟ್ಟು ತಿಳಿಸಿ.

ಶ್ವಾನದಷ್ಟೇ ಅಮೂಲ್ಯವಾದ ಜೀವ ಪಡೆದಿರುವ ಮಾನವೀಯ, ಮನುಷ್ಯತ್ವದ ಅಂಶ ಎತ್ತಿ ಹಿಡಿಯುವ ನೂರಾರು ಕನ್ನಡ ಸಿನೆಮಾಗಳು ಪ್ರತೀ ವರ್ಷ ತಯಾರಾಗುತ್ತಿವೆ. ಅಂತರ್ರಾಷ್ಟ್ರೀಯ ಮಟ್ಟದಲ್ಲಿ ಪ್ರದರ್ಶನವಾಗುತ್ತಿರುವ ಅನೇಕ ಕನ್ನಡ ಚಿತ್ರಗಳು ಕನ್ನಡ ನೆಲದಲ್ಲಿ ತಯಾರಾಗುತ್ತಿವೆ. ಉದಾ : ಪೆಡ್ರೋ, ಕೋಳಿತಾಲ್, ಡೊಳ್ಳು, ದಾರಿ ಯಾವುದಯ್ಯ ವೈಕುಂಟಕ್ಕೆ, ಅಮೃತಮತಿ, ನೀಲಿ ಹಕ್ಕಿ ಇನ್ನೂ ಬಹಳಷ್ಟು ಸಿನೆಮಾ ಇದೆ. ಜೊತೆಗೆ ಅಂತರ್ರಾಷ್ಟ್ರೀಯ ಚಿತ್ರೋತ್ಸವಕ್ಕೆ ಹೋಗದಿದ್ದರೂ ಸಹ, ಅನೇಕ ಕನ್ನಡ ಸಿನೆಮಾಗಳು ಅತ್ತ್ಯುತ್ತಮವಾದ ಮಾನವೀಯ ಗುಣವುಳ್ಳ ಸಿನೆಮಾಗಳು ಕಳೆದ ನಾಲ್ಲೈದು ವರ್ಷಗಳಲ್ಲೇ ಸಾಕಷ್ಟಿವೆ, ಅದು ಯಾವುದಕ್ಕೂ ನೀಡದ ೧೦೦% ತೆರಿಗೆ ವಿನಾಯಿತಿ ಕೇವಲ ಒಂದು ಸಿನೆಮಾಗೆ ನೀಡುವುದು ನಮ್ಮೆಲ್ಲರ ಮೆಚ್ಚಿನ ಅಣ್ಣಾವ್ರ ಆಶಯಕ್ಕೆ ತದ್ವಿರುದ್ಧವಾದದ್ದು ಎಂದು ತಮಗೆ ಮನವರಿಕೆ ಮಾಡಲು ಇಚ್ಚಿಸುತ್ತೇನೆ. ಚಾರ್ಲಿ ಸಿನೆಮಾದ ನಿರ್ಮಾಪಕರೂ ಸೇರಿದಂತೆ ಕನ್ನಡದ ಯಾರೊಬ್ಬ ನಿರ್ಮಾಪಕರು ಅಣ್ಣಾವ್ರ ಆಶಯ ಮೀರಿ, ಕನ್ನಡ ಚಿತ್ರರಂಗವನ್ನು ಹೊರಗಿಟ್ಟು, ಸ್ವಾರ್ಥಿಗಳಂತೆ ತಮ್ಮ ಸಿನೆಮಾಗೆ ಮಾತ್ರ ೧೦೦% ತೆರಿಗೆ ವಿನಾಯಿತಿ ಕೊಡಬೇಕೆಂದು ಹಂಬಲಿಸಲಾರರು, ತಮ್ಮಲ್ಲಿ ಬೇಡಿಕೊಳ್ಳಲಾರರು ಎಂದು ನನ್ನ ಬಲವಾದ ನಂಬಿಕೆ. ಇದು ಕನ್ನಡ ಚಿತ್ರರಂಗದ ಏಳಿಗೆಗಾಗಿ ಶ್ರಮಿಸುತ್ತಿರುವ ಪ್ರತಿಯೊಬ್ಬ ನಿರ್ಮಾಪಕರ, ತಂತ್ರಜ್ಞ, ಶ್ರಮಿಕ ಹಾಗೂ ಕಲಾವಿದರ ಅನ್ನದ ಪ್ರಶ್ನೆಯಾಗಿರುವುದರಿಂದ ಹಾಗೂ ನಮ್ಮ ನೆಚ್ಚಿನ ಅಣ್ಣಾವ್ರು ಡಾ. ರಾಜ್ಕುಮಾರ್ ಅವರ ಆಶಯವೂ ಆಗಿರುವ ಕಾರಣದಿಂದಾಗಿ ಕನ್ನಡದ, ಕನ್ನಡದ ನೆಲದಲ್ಲೇ ಸಂಪೂರ್ಣವಾಗಿ ತಯಾರಾಗುವ ಪ್ರತೀ ಸಿನೆಮಾಗೂ ಈ ಹಿಂದೆ ಇದ್ದಂತೆ ಸಂಪೂರ್ಣ ತೆರಿಗೆ ವಿನಾಯಿತಿ ನೀಡುತ್ತೀರಾ ಎಂಬ ನಂಬಿಕೆಯಿಂದ ಈ ಪತ್ರ ಬರೆಯುತ್ತಿದ್ದೇನೆ.

ಹೀಗೆಂದು ಬರೆಯುವ ಮೂಲಕ ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ ಮನವಿ ಮಾಡಿಕೊಂಡಿದ್ದು , ಸರ್ಕಾರದ ನಡೆಯನ್ನೂ ನಯವಾಗಿಯೇ ಖಂಡಿಸಿದ್ದಾರೆ..

Tags: #saakshatvKannada Film IndustrymansoreSandalwood
ShareTweetSendShare
Join us on:

Related Posts

ಯತ್ನಾಳ ಮತ್ತು ಈಶ್ವರಪ್ಪ ಇಲ್ಲದೆ ಬಿಜೆಪಿ ಅಧಿಕಾರಕ್ಕೆ ಬರಲು ಸಾಧ್ಯವಿಲ್ಲ: ಹಿರಿಯ ನಾಯಕರ ಪರ ನಿರಾಣಿ ಬ್ಯಾಟಿಂಗ್- ರಾಜ್ಯಾಧ್ಯಕ್ಷ ವಿಜಯೇಂದ್ರಗೆ ಮುರುಗೇಶ ನಿರಾಣಿ ಖಡಕ್ ಸಲಹೆ

ಯತ್ನಾಳ ಮತ್ತು ಈಶ್ವರಪ್ಪ ಇಲ್ಲದೆ ಬಿಜೆಪಿ ಅಧಿಕಾರಕ್ಕೆ ಬರಲು ಸಾಧ್ಯವಿಲ್ಲ: ಹಿರಿಯ ನಾಯಕರ ಪರ ನಿರಾಣಿ ಬ್ಯಾಟಿಂಗ್- ರಾಜ್ಯಾಧ್ಯಕ್ಷ ವಿಜಯೇಂದ್ರಗೆ ಮುರುಗೇಶ ನಿರಾಣಿ ಖಡಕ್ ಸಲಹೆ

by Shwetha
September 18, 2026
0

ಬಾಗಲಕೋಟೆ: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ರಾಜ್ಯದಲ್ಲಿ ಅಧಿಕಾರಕ್ಕೆ ಬರಬೇಕೆಂದರೆ ಪಕ್ಷದಿಂದ ದೂರವಾಗಿರುವ ಬಂಡಾಯ ನಾಯಕರನ್ನು ಮತ್ತೆ ಮನೆಗೆ ಕರೆತರುವುದು ಅನಿವಾರ್ಯ ಎಂದು ಮಾಜಿ ಸಚಿವ ಮುರುಗೇಶ...

ರಷ್ಯಾ ತೈಲ ಖರೀದಿಗೆ ಅಮೆರಿಕದ ಕಠಿಣ ಕ್ರಮ: ಭಾರತ, ಚೀನಾ ಸೇರಿ ದೇಶಗಳ ಮೇಲೆ 100%ವರೆಗೆ ಸುಂಕಕ್ಕೆ ಟ್ರಂಪ್‌ಗೆ ಅಧಿಕಾರ

ರಷ್ಯಾ ತೈಲ ಖರೀದಿಗೆ ಅಮೆರಿಕದ ಕಠಿಣ ಕ್ರಮ: ಭಾರತ, ಚೀನಾ ಸೇರಿ ದೇಶಗಳ ಮೇಲೆ 100%ವರೆಗೆ ಸುಂಕಕ್ಕೆ ಟ್ರಂಪ್‌ಗೆ ಅಧಿಕಾರ

by Shwetha
September 18, 2026
0

ರಷ್ಯಾದಿಂದ ಕಚ್ಚಾತೈಲ ಮತ್ತು ನೈಸರ್ಗಿಕ ಅನಿಲ ಖರೀದಿಸುವ ದೇಶಗಳ ಮೇಲೆ ಆರ್ಥಿಕ ಒತ್ತಡ ಹೆಚ್ಚಿಸಲು ಅಮೆರಿಕ ಮಹತ್ವದ ಹೆಜ್ಜೆ ಇಟ್ಟಿದೆ. ರಷ್ಯಾ ವಿರುದ್ಧದ ನಿರ್ಬಂಧಗಳನ್ನು ಮತ್ತಷ್ಟು ಬಿಗಿಗೊಳಿಸುವ...

ಕೋತಿ ಮೊಸರು ತಿಂದು ಮೇಕೆ ಬಾಯಿಗೆ ಒರೆಸಿದ್ರು : ಟಿ ನರಸೀಪುರ ಇನ್‌ಸ್ಪೆಕ್ಟರ್ ಧನಂಜಯ ವಿರುದ್ಧ ವರದಿಗಾರನ ಆಕ್ರೋಶ

ಕೋತಿ ಮೊಸರು ತಿಂದು ಮೇಕೆ ಬಾಯಿಗೆ ಒರೆಸಿದ್ರು : ಟಿ ನರಸೀಪುರ ಇನ್‌ಸ್ಪೆಕ್ಟರ್ ಧನಂಜಯ ವಿರುದ್ಧ ವರದಿಗಾರನ ಆಕ್ರೋಶ

by Shwetha
September 18, 2026
0

ಮೈಸೂರು: ಟಿ ನರಸೀಪುರದ ಇನ್‌ಸ್ಪೆಕ್ಟರ್ ಧನಂಜಯ ಅವರ ವಿವಾದಾತ್ಮಕ ನಡೆ ಈಗ ಇಡೀ ಪೊಲೀಸ್ ಇಲಾಖೆಯನ್ನು ಮುಜುಗರಕ್ಕೀಡು ಮಾಡಿದೆ. ಗಣೇಶ ಮೆರವಣಿಗೆಗೆ ಸಂಬಂಧಿಸಿದಂತೆ ತಾವು ನೀಡಿದ್ದ ವಿವಾದಾತ್ಮಕ...

ರೇಷನ್ ಕಾರ್ಡ್ e-KYCಗೆ ಸೆಪ್ಟೆಂಬರ್ 30 ಗಡುವು: ಮಾಡಿಸದಿದ್ದರೆ ಏನಾಗಲಿದೆ?

ರೇಷನ್ ಕಾರ್ಡ್ e-KYC ಗಡುವು ವಿಸ್ತರಣೆ: ಅಕ್ಟೋಬರ್ 20ರವರೆಗೆ ಅವಕಾಶ, ನ್ಯಾಯಬೆಲೆ ಅಂಗಡಿ ಸಮಯವೂ ಬದಲಾವಣೆ

by Shwetha
September 18, 2026
0

ಕರ್ನಾಟಕದ ರೇಷನ್ ಕಾರ್ಡ್ ಫಲಾನುಭವಿಗಳಿಗೆ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಮಹತ್ವದ ಮಾಹಿತಿ ನೀಡಿದೆ. ರೇಷನ್ ಕಾರ್ಡ್‌ಗಳ e-KYC ಪೂರ್ಣಗೊಳಿಸಲು ನಿಗದಿಪಡಿಸಿದ್ದ ಸೆಪ್ಟೆಂಬರ್ 30ರ ಗಡುವನ್ನು...

ನಾನೀಗ ಮುಖ್ಯಮಂತ್ರಿಯಲ್ಲ ನನ್ನ ಮಾತು ಎಷ್ಟು ನಡೆಯುತ್ತೆ ಅಂತ ನನಗೇ ಗೊತ್ತು: ಸಿದ್ದರಾಮಯ್ಯ ಅವರ ಅಂತರಾಳದ ಮಾತುಗಳ ಹಿಂದಿರುವ ಮರ್ಮವೇನು?

ನಾನೀಗ ಮುಖ್ಯಮಂತ್ರಿಯಲ್ಲ ನನ್ನ ಮಾತು ಎಷ್ಟು ನಡೆಯುತ್ತೆ ಅಂತ ನನಗೇ ಗೊತ್ತು: ಸಿದ್ದರಾಮಯ್ಯ ಅವರ ಅಂತರಾಳದ ಮಾತುಗಳ ಹಿಂದಿರುವ ಮರ್ಮವೇನು?

by Shwetha
September 18, 2026
0

ಬೆಂಗಳೂರು: ರಾಜಕೀಯ ಅಖಾಡದಲ್ಲಿ ಯಾವಾಗಲೂ ಖಡಕ್ ಮಾತುಗಳಿಗೆ ಹೆಸರಾದ ಸಿದ್ದರಾಮಯ್ಯನವರು ಇಂದು ಅತ್ಯಂತ ಭಾವುಕವಾಗಿ ಮತ್ತು ಮಾರ್ಮಿಕವಾಗಿ ಮಾತನಾಡಿದ್ದಾರೆ. ನಾನೀಗ ಮುಖ್ಯಮಂತ್ರಿಯಲ್ಲ, ನನ್ನ ಮಾತು ಈಗ ಎಷ್ಟು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram