ದೆಹಲಿ: ರಾಷ್ಟ್ರರಾಜಧಾನಿ ದೆಹಲಿಯಲ್ಲಿ ಬೆಳ್ಳಂ ಬೆಳಿಗ್ಗೆ ಪೊಲೀಸರ ಪಿಸ್ತೂಲ್ ಸದ್ದು ಮಾಡಿದೆ. ಅನೇಕ ಅಪರಾಧ ಪ್ರಕರಣಗಳಲ್ಲಿ ಬೇಕಾಗಿದ್ದ ಇಬ್ಬರು ಆರೋಪಿಗಳನ್ನು ದಿಲ್ಲಿ ಪೊಲೀಸರು ಎನ್ ಕೌಂಟರ್ ಮಾಡಿದ್ದಾರೆ. ರಾಜಾ ಖುರೇಷಿ ಮತ್ತು ರಮೇಶ್ ಬಹದ್ದೂರ್ ಮೃತ ಕ್ರಿಮಿನಲ್ ಗಳಾಗಿದ್ದಾರೆ.
ಬದರ್‌ಪುರ ಬಳಿಯ ಪುಲ್ ಪ್ರಹ್ಲಾದ್ ಪುರದಲ್ಲಿ ಇಂದು ಬೆಳಿಗ್ಗೆ 5 ಗಂಟೆ ಸುಮಾರಿಗೆ ಎನ್‌ಕೌಂಟರ್ ನಡೆದಿದೆ. ಎರಡೂ ಕಡೆಯಿಂದ ಗುಂಡಿನ ಚಕಮಕಿ ನಡೆದಿದ್ದು, ಈ ವೇಳೆ ಸುಮಾರು 30 ಸುತ್ತು ಗುಂಡುಗಳನ್ನು ಹಾರಿಸಲಾಗಿದೆ ಎಂದು ತಿಳಿದುಬಂದಿದೆ.
ಕೊಲೆ ಯತ್ನಗಳು, ಹಫ್ತಾ ವಸೂಲಿ, ಗಣ್ಯ ವ್ಯಕ್ತಿಗಳಿಗೆ ಜೀವ ಬೆದರಿಕೆ , ಅಕ್ರಮ ಶಸ್ತ್ರಾಸ್ತ್ರಗಳ ಸಾಗಣೆ ಮೊದಲಾದ ಗಂಭೀರ ಅಪರಾಧ ಪ್ರಕರಣಗಳಲ್ಲಿ ರಾಜಾ ಮತ್ತು ರಮೇಶ್ ಶಾಮೀಲಾಗಿದ್ದರು. ಇವರಿಬ್ಬರ ವಿರುದ್ಧ ವಿವಿಧ ಪೊಲೀಸ್ ಠಾಣೆಗಳಲ್ಲಿ ಹಲವಾರು ಪ್ರಕರಣಗಳು ದಾಖಲಾಗಿದ್ದವು.
Astro-ಈಶ್ವರನ ಕೃಪೆಯಿಂದ ಇಂದು ಈ ರಾಶಿಯವರಿಗೆ ಸಿಗಲಿದೆ ಭಾರೀ ಯಶಸ್ಸು, ಎಚ್ಚರಿಕೆ ಇರಲಿ
ಈಶ್ವರನ ಕೃಪೆಯಿಂದ ಇಂದು ಈ ರಾಶಿಯವರಿಗೆ ಸಿಗಲಿದೆ ಭಾರೀ ಯಶಸ್ಸು, ಎಚ್ಚರಿಕೆ ಇರಲಿ ಪಂಡಿತ್ ಜ್ಞಾನೇಶ್ವರ್ ರಾವ್ ಶ್ರೀ ಶೃಂಗೇರಿ ಶಾರದಾಂಬೆ ವೇದಾಂಗ ಜ್ಯೋತಿಷ್ಯಂ ನಿಮ್ಮ ಪ್ರೀತಿ...








