ಮಂಗಳೂರು : ಅಶಿಸ್ತಿನ ವಿರುದ್ಧ ಹೈಕಮಾಂಡ್ ಶಿಸ್ತು ಕ್ರಮ ಕೈಗೊಳ್ಳುತ್ತದೆ ಎನ್ನುವ ಮೂಲಕ ರೆಬಲ್ ಶಾಸಕರಿಗೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಎಚ್ಚರಿಕೆ ನೀಡಿದ್ದಾರೆ. ಮಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯಲ್ಲಿ ಯಾವುದೇ ಭಿನ್ನಾಭಿಪ್ರಾಯವಿಲ್ಲ. ಸರ್ಕಾರದಲ್ಲಿ ಎಲ್ಲರೂ ಒಂದಾಗಿದ್ದಾರೆ. ಯಡಿಯೂರಪ್ಪ ನಾಯಕತ್ವದಲ್ಲಿ ಬಿಜೆಪಿ ಮುಂದುವರಿಯುತ್ತದೆ. ಅಭಿವೃದ್ಧಿ ದೃಷ್ಟಿಯಿಂದ ಶಾಸಕರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಪಕ್ಷದ ಒಳಗೆ ಯಾವುದೇ ಅಶಿಸ್ತನ್ನು ಸಹಿಸುವುದಿಲ್ಲ. ಅಶಿಸ್ತಿನ ವಿರುದ್ಧ ಹೈಕಮಾಂಡ್ ಶಿಸ್ತು ಕ್ರಮ ಕೈಗೊಳ್ಳುತ್ತದೆ ಎನ್ನುವ ಮೂಲಕ ರೆಬಲ್ ಶಾಸಕರಿಗೆ ಎಚ್ಚರಿಕೆ ನೀಡಿದ್ದಾರೆ. ಭಿನ್ನಾಭಿಪ್ರಾಯ ಆಗಿದೆ ಅಂತಾ ಡಿಕೆಶಿ ಹಗಲುಗನಸು ಕಾಣುತ್ತಿದ್ದಾರೆ ಆದರೆ ಸರ್ಕಾರ ಪೂರ್ಣಾವಧಿಯನ್ನು ಯಶಸ್ವಿಯಾಗಿ ಪೂರೈಸುತ್ತದೆ. ಯಡಿಯೂರಪ್ಪನವರೇ ಪೂರ್ಣಾವಧಿ ಸಿಎಂ ಆಗಿರುತ್ತಾರೆ ಎಂದು ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ.
ಮಕ್ಕಳಿಲ್ಲದ ದಂಪತಿಗಳಿಗೆ ಗುಡ್ ನ್ಯೂಸ್: ಆಯುಷ್ಮಾನ್ ಪ್ಯಾಕೇಜ್ ನಿರಾಕರಿಸಿದ ಖಾಸಗಿ ಆಸ್ಪತ್ರೆಗಳಿಗೆ ಸರ್ಕಾರದ ಸೆಡ್ಡು- ಬಡವರ ಮಡಿಲು ತುಂಬಲು ಸರ್ಕಾರಿ ಆಸ್ಪತ್ರೆಗಳಲ್ಲೇ ಹೈಟೆಕ್ ಐವಿಎಫ್ ಭಾಗ್ಯ!
ಮಂಗಳೂರು: ಸಂತಾನ ಭಾಗ್ಯವಿಲ್ಲದೆ ಮಾನಸಿಕವಾಗಿ ಕೊರಗುತ್ತಿರುವ ರಾಜ್ಯದ ಬಡ ಮತ್ತು ಮಧ್ಯಮ ವರ್ಗದ ದಂಪತಿಗಳ ಬಾಳಲ್ಲಿ ಆಶಾಕಿರಣ ಮೂಡಿಸುವ ಐತಿಹಾಸಿಕ ನಿರ್ಧಾರವೊಂದನ್ನು ರಾಜ್ಯ ಆರೋಗ್ಯ ಇಲಾಖೆ ಕೈಗೊಂಡಿದೆ....






