ಚರಂಡಿಯಲ್ಲಿ ವ್ಯಕ್ತಿಯ ಶವ ಪತ್ತೆ..!!
ಧಾರವಾಡ : ರಾತ್ರಿ ಮನೆಯಿಂದ ಹೊರ ಹೋದ ವ್ಯಕ್ತಿಯೊಬ್ಬ ಇಂದು ಬೆಳಗಾಗುವಷ್ಟರಲ್ಲಿ ಚರಂಡಿಯಲ್ಲಿ ಶವವಾಗಿ ಪತ್ತೆಯಾಗಿರುವ ಘಟನೆ ಧಾರವಾಡ ತಾಲೂಕಿನ ಅಮ್ಮಿನಭಾವಿ ಗ್ರಾಮದಲ್ಲಿ ನಡೆದಿದೆ.
ಅಮ್ಮಿನಭಾವಿ ಗ್ರಾಮದ 45 ವರ್ಷದ ಮಲ್ಲಿಕಾರ್ಜುನ ಗೂಳದಕೊಪ್ಪ ಎಂಬಾತ ಮೃತಪಟ್ಟಿದ್ದಾನೆ..
ನಿನ್ನೆ ರಾತ್ರಿ ಮನೆಯಿಂದ ಹೊರ ಹೋಗಿದ್ದ ಈತ , ಬೆಳಗಾಗುವಷ್ಟರಲ್ಲಿ ಗ್ರಾಮದ ಗ್ರಾಮ ದೇವಿ ದೇವಸ್ಥಾನ ಬಳಿಯ ಚರಂಡಿಯಲ್ಲಿ ಶವವಾಗಿ ಪತ್ತೆಯಾಗಿದ್ದಾನೆ .
ಅರೆನಗ್ನ ಸ್ಥಿತಿಯಲ್ಲಿರುವ ಶವ ಪತ್ತೆಯಾಗಿದೆ. ಈ ಪ್ರಕರಣ ಧಾರವಾಡ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.