BJP Tweet | ಕರಾಳ ಇತಿಹಾಸಕ್ಕೆ ಮುನ್ನುಡಿ ಬರೆದ ಕಾಂಗ್ರೆಸ್ ಪಕ್ಷಕ್ಕೆ ಧಿಕ್ಕಾರವಿರಲಿ
ಬೆಂಗಳೂರು : ತುರ್ತು ಪರಿಸ್ಥಿತಿ ವಿಚಾರವಾಗಿ ಕಾಂಗ್ರೆಸ್ ನಾಯಕರ ವಿರುದ್ಧ ರಾಜ್ಯ ಬಿಜೆಪಿ ಘಟಕ ಕಿಡಿಕಾರಿದ್ದು, ಕರಾಳ ಇತಿಹಾಸಕ್ಕೆ ಮುನ್ನುಡಿ ಬರೆದ ಕಾಂಗ್ರೆಸ್ ಪಕ್ಷಕ್ಕೆ ಧಿಕ್ಕಾರವಿರಲಿ ಎಂದಿದೆ.
ಈ ಕುರಿತು ಟ್ವೀಟ್ ಗಳನ್ನು ಮಾಡಿರುವ ಬಿಜೆಪಿ, ದೇಶದಲ್ಲಿ ಈಗ ಅಘೋಷಿತ ತುರ್ತು ಪರಿಸ್ಥಿತಿ ಇದೆ ಎಂದು ಹುಯಿಲೆಬ್ಬಿಸುವ ಕಾಂಗ್ರೆಸ್ಸಿಗರಿಗೆ ಘೋಷಿತ ತುರ್ತು ಪರಿಸ್ಥಿತಿಯ ಕರಾಳ ಅಧ್ಯಾಯ ಮರೆತು ಹೋಗಿದೆ. ಬ್ರಿಟಿಷ್ ಕಾಲದಲ್ಲಿ ನಡೆದ ದೌರ್ಜನ್ಯ ಮೀರಿಸುವ ರೀತಿ ಇಂದಿರಾ ಗಾಂಧಿ ದೇಶವಾಸಿಗಳನ್ನು ಹಿಂಸಿಸಿದ್ದನ್ನು ಮರೆಯಲು ಹೇಗೆ ಸಾಧ್ಯ?
ಸಂವಿಧಾನದಲ್ಲಿ ಉಲ್ಲೇಖವಾದ ವಿಚಾರಗಳನ್ನೇ ಗುರಾಣಿಯಾಗಿ ಬಳಸಿಕೊಂಡ ಇಂದಿರಾ ಗಾಂಧಿ ಸಂವಿಧಾನವನ್ನು ಕಾಲಡಿಗೆ ಹಾಕಿದರು. ಎಷ್ಟಾದರೂ ಸಂವಿಧಾನ ಶಿಲ್ಪಿಗೆ ಅವಮಾನ ಮಾಡಿದ ಅನುಭವ ಇತ್ತಲ್ಲವೇ ಎಂದು ಪ್ರಶ್ನಿಸಿದೆ.
ನಕಲಿ ಗಾಂಧಿ ಕುಟುಂಬದ ವಿರುದ್ಧದ ಧ್ವನಿ ಹತ್ತಿಕ್ಕಲು
√ 21 ತಿಂಗಳ ತುರ್ತು ಪರಿಸ್ಥಿತಿ
√ ಲಕ್ಷಕ್ಕೂ ಅಧಿಕ ಜನರ ಬಂಧನ, ಜೈಲುವಾಸ
√ 22 ಕ್ಕೂ ಅಧಿಕ ಸಂಗ್ರಾಮಿಗಳ ಕಸ್ಟಡಿ ಸಾವುಕರಾಳ ಇತಿಹಾಸಕ್ಕೆ ಮುನ್ನುಡಿ ಬರೆದ ಕಾಂಗ್ರೆಸ್ ಪಕ್ಷಕ್ಕೆ ಧಿಕ್ಕಾರವಿರಲಿ.#Emergency1975HauntsIndia
— BJP Karnataka (@BJP4Karnataka) June 25, 2022
ಸ್ವಾತಂತ್ರ್ಯಾನಂತರ ದೇಶದ ಪ್ರಜಾತಂತ್ರದ ಇತಿಹಾಸದಲ್ಲಿ ತುರ್ತು ಪರಿಸ್ಥಿತಿ ಕರಾಳ ಅಧ್ಯಾಯ. ತಮ್ಮ ಸ್ವಾರ್ಥಕ್ಕಾಗಿ ಈಡಿ ದೇಶವನ್ನೇ ಅಂದಿನ ಪ್ರಧಾನಿ ಇಂದಿರಾ ಗಾಂಧಿ ಕತ್ತಲೆಯಲಿಟ್ಟರು. ಕಾಂಗ್ರೆಸ್ ನಾಯಕರು ನಕಲಿ ಗಾಂಧಿ ಕುಟುಂಬದ ಪಾದಪೂಜೆ ಮಾಡುವ ಮುನ್ನ ಇತಿಹಾಸದ ಪುಟಗಳನ್ನು ತಿರುವಿಹಾಕಲಿ.
ಸಂವಿಧಾನದ ಬಗ್ಗೆ ಪುಂಖಾನುಪುಂಖವಾಗಿ ಮಾತನಾಡುವ ಸಿದ್ದರಾಮಯ್ಯ, ಡಿಕೆಶಿ, ಮಹಾದೇವಪ್ಪ ಮೊದಲಾದವರಿಗೆ ಸಂವಿಧಾನದ ಆಶಯಗಳಿಗೆ ಧಕ್ಕೆ ತಂದ ಮಹಾನ್ ಕುಟುಂಬ ಯಾವುದು ಎಂಬುದೇ ಗೊತ್ತಿಲ್ಲ. ಸತ್ಯವನ್ನು ಗ್ರಹಿಸದ ನಿಮ್ಮ ಏಕಮುಖ ರಸ್ತೆಯ ಪ್ರಯಾಣದ ಬಗ್ಗೆ ವಿಷಾದ ಮಾತ್ರ ವ್ಯಕ್ತಪಡಿಸಲು ಸಾಧ್ಯ!
ನಕಲಿ ಗಾಂಧಿ ಕುಟುಂಬದ ವಿರುದ್ಧದ ಧ್ವನಿ ಹತ್ತಿಕ್ಕಲು √ 21 ತಿಂಗಳ ತುರ್ತು ಪರಿಸ್ಥಿತಿ √ ಲಕ್ಷಕ್ಕೂ ಅಧಿಕ ಜನರ ಬಂಧನ, ಜೈಲುವಾಸ √ 22 ಕ್ಕೂ ಅಧಿಕ ಸಂಗ್ರಾಮಿಗಳ ಕಸ್ಟಡಿ ಸಾವು. ಕರಾಳ ಇತಿಹಾಸಕ್ಕೆ ಮುನ್ನುಡಿ ಬರೆದ ಕಾಂಗ್ರೆಸ್ ಪಕ್ಷಕ್ಕೆ ಧಿಕ್ಕಾರವಿರಲಿ ಎಂದು ಬಿಜೆಪಿ ಕಿಡಿಕಾರಿದೆ.








