ಬೆಂಗಳೂರು: ವಿಧಾನಮಂಡಲ ಜಂಟಿ ಅಧಿವೇಶನ ಆರಂಭಗೊಂಡಿದ್ದು, ಉಭಯ ಸದನವನ್ನುದ್ದೇಶಿಸಿ ರಾಜ್ಯಪಾಲ ವಜುಭಾಯ್ ವಾಲಾ ಅವರು ಭಾಷಣ ಮಾಡುತ್ತಿದ್ದಾರೆ. ರಾಜ್ಯಪಾಲರನ್ನು ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ, ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹಾಗೂ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಸ್ವಾಗತಿಸಿದರು.
ಜಂಟಿ ಅಧಿವೇಶನವನ್ನುದ್ದೇಶಿ ಭಾಷಣ ಆರಂಭಿಸಿದ ರಾಜ್ಯಪಾಲರು, ರಾಜ್ಯ ಸರ್ಕಾರದ ಸಾಧನೆಗಳು, ಜಾರಿಯಾದ ಯೋಜನೆಗಳ ಕುರಿತು ಪ್ರಸ್ತಾಪಿಸಿದರು.
ನೆರೆ ಪರಿಹಾರಕ್ಕೆ ಸರ್ಕಾರ ಸೂಕ್ತರೀತಿಯಲ್ಲಿ ಸ್ಪಂದನೆ ನೀಡುತ್ತಿದೆ. ಅಲ್ಲದೆ, ಕೇಂದ್ರ ಸರ್ಕಾರದ ಸಹಕಾರದೊಂದಿಗೆ ಪ್ರವಾಹ ಪೀಡಿತ ಪ್ರದೇಶದ ಜನರಿಗೆ ಹಾಗೂ ಬೆಲೆ ಕಳೆದುಕೊಂಡ ರೈತರಿಗೆ ಸಮರೋಪಾದಿಯಲ್ಲಿ ಪರಿಹಾರ ನೀಡಿದೆ ಎಂದು ತಿಳಿಸಿದರು.
ಇಂದಿನಿಂದ ಆರಂಭವಾಗಿರುವ ಅಧಿವೇಶನ ಮಾರ್ಚ್ 31ಕ್ಕೆ ಮುಕ್ತಾಯಗೊಳ್ಳಲಿದೆ.
SIR ಕರಡು ಮತದಾರರ ಪಟ್ಟಿ ಪ್ರಕಟ; ನಿಮ್ಮ ಹೆಸರು ಇದೆಯೇ ಎಂದು ಆನ್ಲೈನ್ನಲ್ಲಿ ಚೆಕ್ ಮಾಡಿ
ರಾಜ್ಯದಲ್ಲಿ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಕರಡು ಮತದಾರರ ಪಟ್ಟಿಯನ್ನು ಚುನಾವಣಾ ಆಯೋಗದ ಅಧಿಕೃತ ವೆಬ್ಸೈಟ್ನಲ್ಲಿ ಪರಿಶೀಲಿಸಬಹುದಾಗಿದೆ. ಚುನಾವಣಾ ಆಯೋಗದ ಅಧಿಕೃತ ಪೋರ್ಟಲ್ನಲ್ಲಿ SIR-2026,...








