ಕುಮುಟ ಸಮುದ್ರ ಪಾಲಾದ ಪ್ರವಾಸಿ ವಿದ್ಯಾರ್ಥಿಗಳು – ಇಬ್ಬರ ಶವ ಪತ್ತೆ….
ಕುಮುಟಾ: ಪ್ರವಾಸಕ್ಕೆಂದು ಬೆಂಗಳೂರಿನಿಂದ ಬಂದಿದ್ದ ವಿದ್ಯಾರ್ಥಿಗಳ ಪೈಕಿ ನಾಲ್ವರು ವಿದ್ಯಾರ್ಥಿಗಳು ಸಮುದ್ರ ಪಾಲಾದ ಘಟನೆ ಉತ್ತರ ಕನ್ನಡ ಜಿಲ್ಲೆಯ ಕುಮಟಾದಲ್ಲಿ ನಡೆದಿದೆ.
ಮೃತರನ್ನು ಬೆಂಗಳೂರು ಮೂಲದ ಅರ್ಜುನ್, ಚೈತ್ರಶ್ರೀ, ತೇಜಸ್ ಡಿ., ಕಿರಣ್ ಕುಮಾರ್ ಎಂದು ಗುರುತಿಸಲಾಗಿದೆ. ಈ ಪೈಕಿ ಅರ್ಜುನ್, ಚೈತ್ರಶ್ರೀ ಅವರ ಮೃತದೇಹ ಪತ್ತೆಯಾಗಿದ್ದು, ಉಳಿದವರಿಗಾಗಿ ಹುಡುಕಾಟ ನಡೆಯುತ್ತಿದೆ.
87 ಮಂದಿ ವಿದ್ಯಾರ್ಥಿಗಳ ತಂಡವೊಂದು ಪ್ರವಾಸಕ್ಕೆಂದು ಬೆಂಗಳೂರಿನಿಂದ ಉತ್ತರ ಕನ್ನಡದ ಕುಮಟಾ ತಾಲೂಕಿನ ಸಿಲ್ವರ್ ಸ್ಯಾಂಡ್ ರೆಸಾರ್ಟ್‌ಗೆ ಆಗಮಿಸಿತ್ತು. ರೆಸಾರ್ಟ್ ನಲ್ಲಿ ಉಳಿದುಕೊಂಡಿದ್ದ ವಿದ್ಯಾರ್ಥಿಗಳ ಪೈಕಿ ಕೆಲವರು ಸಮುದ್ರ ಅಲೆಗಳನ್ನ ಲೆಕ್ಕಿಸದೇ ನೀರಿಗಿಳಿದಿದ್ದರು. ಈ ವೇಳೆ ನಾಲ್ವರು ವಿದ್ಯಾರ್ಥಿಗಳು ನೀರುಪಾಲಾಗಿದ್ದಾರೆ.
ಈಗಾಗಲೇ ಸ್ಥಳಕ್ಕೆ ತೆರಳಿರುವ ಕುಮಟಾ ಪೊಲೀಸರು ಹಾಗೂ ಅಗ್ನಿಶಾಮಕ ಸಿಬ್ಬಂದಿ ಇನ್ನಿಬ್ಬರು ವಿದ್ಯಾರ್ಥಿಗಳಿಗಾಗಿ ಶೋಧಕಾರ್ಯ ಮುಂದುವರೆಸಿದ್ದಾರೆ.








