ಠಾಕ್ರೆ ರಾಜಿನಾಮೆ – ಸರ್ಕಾರ ರಚನೆಯ ಕಸರತ್ತು, ರಾಜಭವನದ ಮೇಲೆ ಎಲ್ಲರ ಕಣ್ಣು
ಮಹಾರಾಷ್ಟ್ರ ಮುಖ್ಯಮಂತ್ರಿ ಸ್ಥಾನಕ್ಕೆ ಉದ್ಧವ್ ಠಾಕ್ರೆ ಅವರು ರಾಜೀನಾಮೆ ನೀಡಿದ ನಂತರ ರಾಜ್ಯಪಾಲ ಭಗತ್ ಸಿಂಗ್ ಕೊಶ್ಯಾರಿ ಅವರು ರಾಜ್ಯದಲ್ಲಿ ಮುಂದಿನ ಸರ್ಕಾರ ರಚಿಸಲು ಬಿಜೆಪಿಯನ್ನು ಯಾವಾಗ ಆಹ್ವಾನಿಸುತ್ತಾರೆ ಎಂದು ನೋಡಲು ಎಲ್ಲರ ಕಣ್ಣು ರಾಜಭವನದ ಮೇಲಿದೆ.
ಏಕನಾಥ್ ಶಿಂಧೆ ನೇತೃತ್ವದಲ್ಲಿ ಶಿವಸೇನೆಯ ಸುಮಾರು 40 ಶಾಸಕರ ಬಂಡಾಯದೊಂದಿಗೆ ರಾಜ್ಯದಲ್ಲಿ ಆಡಳಿತ ಬದಲಾವಣೆಯ ಪ್ರಕ್ರಿಯೆಯು ಪ್ರಾರಂಭವಾಯಿತು, ಬಿಜೆಪಿ ನಾಯಕ ದೇವೇಂದ್ರ ಫಡ್ನವಿಸ್ ಮಂಗಳವಾರ ರಾತ್ರಿ ಕೋಶ್ಯಾರಿ ಅವರನ್ನು ಭೇಟಿಯಾಗಿ ಬಹುಮತ ಸಾಬೀತು ಪರೀಕ್ಷೆಗೆ ಆದೇಶಿಸುವಂತೆ ಕೇಳಿಕೊಂಡ ನಂತರ ಠಾಕ್ರ ಸರ್ಕಾರ ಉರುಳುವುದು ಖಚಿತವಾಯಿತು.
ಗುರುವಾರ ವಿಧಾನಸಭೆಯಲ್ಲಿ ವಿಶ್ವಾಸಮತ ಯಾಚನೆ ನಡೆಸುವಂತೆ ರಾಜ್ಯಪಾಲ ಕೊಶ್ಯಾರಿ ಅವರ ನಿರ್ದೇಶನಕ್ಕೆ ತಡೆ ನೀಡಲು ಸುಪ್ರೀಂ ಕೋರ್ಟ್ ನಿರಾಕರಿಸಿದ ಕೆಲವೇ ನಿಮಿಷಗಳಲ್ಲಿ ಉದ್ಧವ್ ಠಾಕ್ರೆ ಮುಖ್ಯಮಂತ್ರಿ ಸ್ಥಾನಕ್ಕೆ ಬುಧವಾರ ರಾತ್ರಿ ರಾಜೀನಾಮೆ ನೀಡಿದ್ದಾರೆ.
ಠಾಕ್ರೆ ರಾಜಿನಾಮೆ ಬಳಿಕ 2014 ರಿಂದ 2019 ರವರೆಗೆ ಮುಖ್ಯಮಂತ್ರಿಯಾಗಿ ಅಧಿಕಾರನಡೆಸಿ ಅನುಭವ ಹೊಂದಿರುವ ಬಿಜೆಪಿಯ ಪ್ರಮುಖ ನಾಯಕ ದೇವೇಂದ್ರ ಫಡ್ನವೀಸ್ ಅವರು ಮತ್ತೆ ಮುಖ್ಯಮಂತ್ರಿಯಾಗಿ ಪುನರಾವರ್ತನೆಯಾಗುವ ನಿರೀಕ್ಷೆಯಿದೆ








