KGF ನಟ ಅವಿನಾಶ್ ಕಾರು ಅಪಘಾತ – ಪ್ರಾಣಾಪಾಯದಿಂದ ಪಾರು
ದೇಶಾದ್ಯಂತ ಸದ್ದು KGF ಸಿನಿಮಾದಲ್ಲಿ ವಿಲನ್ ಆಂಡ್ರೂಸ್ ಪಾತ್ರದಲ್ಲಿ ನಟಿಸಿ ಖ್ಯಾತಿ ಪಡೆದ ನಟ ಅವಿನಾಶ್ ಅವರ ಬೆನ್ಜ್ ಕಾರು ಬೆಂಗಳೂರಿನಲ್ಲಿ ಅಪಘಾತಕ್ಕೊಳಗಾಗಿದೆ.
ಅವಿನಾಶ್ ಅವರು ಬುಧವಾರ ಬೆಳಗ್ಗೆ 6 ಗಂಟೆ ಸುಮಾರಿಗೆ ಜಿಮ್ ಗೆ ತೆರಳುತ್ತಿರುವಾಗ ನಗರದ ಅನಿಲ್ ಕುಂಬ್ಳೆ ಸರ್ಕಲ್ ಬಳಿ ಕಾರನ್ನು ಚಲಾಯಿಸಿಕೊಂಡು ಹೋಗುತ್ತಿದ್ದರು. ಈ ವೇಳೆ ಗೂಡ್ಸ್ ಲಾರಿಯೊಂದು ಕಾರಿಗೆ ಡಿಕ್ಕಿ ಹೊಡೆದಿದ್ದು, ಅವಿನಾಶ್ ಅವರ ಬೆನ್ಜ್ ಕಾರು ಸಂಪೂರ್ಣ ಜಖಂಗೊಂಡಿದೆ.
ಆದ್ರೆ ಅದೃಷ್ಟವಶಾತ್ ಘಟನೆಯಲ್ಲಿ ಅವಿನಾಶ್ ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಇದೀಗ ಕ್ಯಾಂಟರ್ ಚಾಲಕ ಶಿವಗೌಡನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.. ಕಬ್ಬನ್ ಪಾರ್ಕ್ ಸಂಚಾರಿ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.
Covid Update – 130 ದಿನಗಳ ಬಳಿಕ 18 ಸಾವಿರ ಕರೋನಾ ಸೋಂಕಿತರು ಪತ್ತೆ…
ದಕ್ಷಿಣ ಕನ್ನಡದಲ್ಲಿ ಭಾರಿ ಮಳೆ – ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ…








