ಅತಿಥಿ ಶಿಕ್ಷಕರಿಗೆ ಗುಡ್ ನ್ಯೂಸ್ –2,500 ಗೌರವ ಧನ ಹೆಚ್ಚಿಸಿದ ರಾಜ್ಯ ಸರ್ಕಾರ
ಅತಿಥಿ ಶಿಕ್ಷಕರಿಗೆ ರಾಜ್ಯ ಸರ್ಕಾರ ಸಿಹಿ ಸುದ್ಧಿ ಕೊಟ್ಟಿದೆ. ಅತಿಥಿ ಶಿಕ್ಷಕರ ಗೌರವ ಧನ ಹೆಚ್ಚಳ ಮಾಡಿ ರಾಜ್ಯ ಸರ್ಕಾರ ಆದೇಶ ನೀಡಿದೆ.
ಅತಿಥಿ ಶಿಕ್ಷಕರ ಸಂಭಾವನೆ ಪರಿಷ್ಕರಣೆಯ ಮನವಿಗೆ ಸ್ಪಂದಿಸಿರುವ ಸಿಎಂ ಬಸವರಾಜ ಬೊಮ್ಮಾಯಿ, ಆದೇಶಕ್ಕೆ ಒಪ್ಪಿಗೆ ಸೂಚಿಸಿದ್ದಾರೆ ಎಂದು ಪ್ರಾಥಮಿಕ ಮತ್ತು ಪೌಢ ಶಿಕ್ಷಣ ಸಚಿವ ಬಿ. ಸಿ. ನಾಗೇಶ್ ಟ್ವೀಟ್ ಮಾಡುವ ಮೂಲಕ ಅಭಿನಂದನೆ ಸಲ್ಲಿಸಿದ್ದಾರೆ. ಈ ಮೂಲಕ ಬಹು ವರ್ಷಗಳ ಬೇಡಿಕೆಯಾದ ಸರ್ಕಾರಿ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳ ಅತಿಥಿ ಶಿಕ್ಷಕರ ಗೌರವ ಸಂಭಾವನೆ 2,500 ರೂ. ಹೆಚ್ಚಳವಾಗಿದೆ.
ಪ್ರಾಥಮಿಕ ಶಿಕ್ಷಕರಿಗೆ ಪ್ರಸ್ತುತ 7,500 ರೂ. ಗೌರವ ಸಂಭಾವನೆಗಳಿದ್ದು ಅದನ್ನು 10,000 ರೂ.ಗೆ ಗೌರವಧನವನ್ನು ಹೆಚ್ಚಳ ಮಾಡಲಾಗಿದೆ. ಇನ್ನೂ ಸರ್ಕಾರಿ ಪ್ರೌಢ ಶಾಲೆಗಳ ಶಿಕ್ಷಕರಿಗೆ ಪ್ರಸ್ತುತ 8,000 ರೂ. ಇದ್ದು, 10,500 ರೂ.ಗೆ ಗೌರವಧನವನ್ನು ಹೆಚ್ಚಳ ಮಾಡಲಾಗಿದೆ. ಒಟ್ಟು 2,500 ರೂಗಳಷ್ಟು ಗೌರವ ಧನ ಹೆಚ್ಚಳ ಮಾಡಲಾಗಿದೆ.








