ಉತ್ತರಾಖಂಡ : ಕೇದಾರನಾಥ ರಸ್ತೆಯಲ್ಲಿ ಭೂಕುಸಿತವಾಗಿದ್ದು ಘಟನೆಯಲ್ಲಿ ಮಹಾರಾಷ್ಟ್ರದ ಮಹಿಳೆಯೊಬ್ಬರು ಮೃತಪಟ್ಟಿದ್ದಾರೆ.. ಐವರು ಗಂಭೀರವಾಗಿ ಗಾಯಗೊಂಡಿದ್ದಾರೆ.
ರುದ್ರಪ್ರಯಾಗ-ಗೌರಿಕುಂಡ್ ರಾಷ್ಟ್ರೀಯ ಹೆದ್ದಾರಿಯ ಸೋನ್ ಪ್ರಯಾಗದ ಬಳಿ ಮಧ್ಯಾಹ್ನ 3:00 ಗಂಟೆ ಸುಮಾರಿಗೆ ಈ ಘಟನೆ ಸಂಭವಿಸಿದೆ ಎಂದು ರುದ್ರಪ್ರಯಾಗ ಜಿಲ್ಲಾ ವಿಪತ್ತು ನಿರ್ವಹಣಾ ಅಧಿಕಾರಿ ನಂದನ್ ಸಿಂಗ್ ರಾಜವರ್ ತಿಳಿಸಿದ್ದಾರೆ.
ಅಪಘಾತದ ಸಮಯದಲ್ಲಿ ವಾಹನದಲ್ಲಿ 11 ಜನರಿದ್ದರು ಮತ್ತು ಅವರು ಕೇದಾರನಾಥದಿಂದ ಹಿಂತಿರುಗುತ್ತಿದ್ದರು ಈ ವೇಳೆ ಭೂ ಕುಸಿತವಾಗಿದೆ ಎಂದು ತಿಳಿಸಿದ್ದಾರೆ..
ವಾಹನವು ಸೋನ್‌ಪ್ರಯಾಗ್ – ಗೌರಿಕುಂಡ್ ಶಟಲ್ ಸೇವೆಯಲ್ಲಿ ತೊಡಗಿತ್ತು ಮತ್ತು ಮುಂಕಾಟಿಯ ಬಳಿಯ ಗುಡ್ಡದಿಂದ ಇದ್ದಕ್ಕಿದ್ದಂತೆ ಕೆಳಗೆ ಬಂದ ಬೃಹತ್ ಬಂಡೆಗಳು ಮತ್ತು ಅವಶೇಷಗಳಿಂದ ಡಿಕ್ಕಿ ಹೊಡೆದಿದೆ ಎಂದು ಅವರು ಹೇಳಿದರು.
ಮಹಾರಾಷ್ಟ್ರದ ಅಹಮದ್ ನಗರದ ಮಹಿಳೆಯನ್ನು 62 ವರ್ಷದ ಪುಷ್ಪಾ ಮೋಹನ್ ಬೋನ್ಸ್ಲೆ ಎಂದು ಗುರುತಿಸಲಾಗಿದೆ. ಅವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಘಟನೆಯ ಬಗ್ಗೆ ಮಾಹಿತಿ ಪಡೆದ ಪೊಲೀಸರು ಮತ್ತು ರಾಜ್ಯ ವಿಪತ್ತು ನಿರ್ವಹಣಾ ಪಡೆ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆಯನ್ನು ಪ್ರಾರಂಭಿಸಿದರು ಎಂದು ರಾಜವರ್ ಹೇಳಿದರು.








