ಕರ್ನಾಟಕ ಹೈಕೋರ್ಟ್ ನ ಹಂಗಾಮಿ ಮುಖ್ಯ ನ್ಯಾಯಮೂರ್ತಿಗಳಾಗಿ ಅಲೋಕ್ ಆರಾಧೆ ಅವರು ನೇಮಕಗೊಂಡಿದ್ದಾರೆ..
ಜುಲೈ 2 ರಂದು ಮುಖ್ಯ ನ್ಯಾಯಮೂರ್ತಿ ಋತುರಾಜ್ ಅವಸ್ಥಿ ಅವರು ನಿವೃತ್ತರಾಗುತ್ತಿರುವ ಹಿನ್ನೆಲೆಯಲ್ಲಿ ನ್ಯಾಯಮೂರ್ತಿ ಅಲೋಕ್ ಆರಾಧೆ ಅವರನ್ನು ಕರ್ನಾಟಕ ಹೈಕೋರ್ಟ್ನ ಹಂಗಾಮಿ ಮುಖ್ಯ ನ್ಯಾಯಮೂರ್ತಿಯಾಗಿ ನೇಮಕ ಮಾಡಲಾಗಿದೆ.
ಕರ್ನಾಟಕ ಹೈಕೋರ್ಟ್ನ ಹಂಗಾಮಿ ಮುಖ್ಯ ನ್ಯಾಯಮೂರ್ತಿಯಾಗಿ ಆರಾಧೆ ಅವರನ್ನು ನೇಮಿಸಿರುವ ಕುರಿತು ಕೇಂದ್ರ ಕಾನೂನು ಸಚಿವ ಕಿರಣ್ ರಿಜಿಜು ಟ್ವೀಟ್ ಮಾಡಿದ್ದಾರೆ.
ನ್ಯಾಯಮೂರ್ತಿ ಆರಾಧೆ ಅವರು ಕರ್ನಾಟಕ ಹೈಕೋರ್ಟ್ನ ಅತ್ಯಂತ ಹಿರಿಯ ನ್ಯಾಯಮೂರ್ತಿಯಾಗಿದ್ದು, ಜುಲೈ 3ರಂದು ಅಧಿಕಾರ ವಹಿಸಿಕೊಳ್ಳಲಿದ್ದಾರೆ.








