ಬೆಂಗಳೂರು : ತಳವಾರ ಮತ್ತು ಪರಿವಾರ ಹಾಗೂ ಸಿದ್ದಿ ಸಮುದಾಯಗಳನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಶತಮಾನಗಳಿಂದಲೂ ಈ ಸಮುದಾಯಗಳನ್ನು ಪರಿಶಿಷ್ಟ ಪಂಗಡಗಳಿಗೆ ಸೇರಿಸುವಂತೆ ಒತ್ತಾಯ ಕೇಳಿ ಬಂದಿತ್ತು. ಇದೀಗ ಸರ್ಕಾರ ರಾಜ್ಯ ಸರ್ಕಾರ ತಳವಾರ ಮತ್ತು ಪರಿವಾರ ಹಾಗೂ ಸಿದ್ದಿ ಸಮುದಾಯಗಳನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಿ ಆದೇಶ ಹೊರಡಿಸಿದೆ.
2014 ರಲ್ಲಿ ಕಾಂಗ್ರೆಸ್ ಆಡಳಿತ ರಾಜ್ಯದಲ್ಲಿತ್ತು. ಆಗ ಸಚಿವ ಸಂಪುಟದಲ್ಲಿ ತಳವಾರ ಮತ್ತು ಪರಿವಾರ ಸಮುದಾಯಗಳು ಪರಿಶಿಷ್ಟ ಪಂಗಡಗಳಿಗೆ ಸೇರಿದ ಪಂಗಡಗಳು ಎಂದು ಅಂಗೀಕಾರ ಮಾಡಲಾಗಿತ್ತು. ಈ ಕುರಿತು ಕೇಂದ್ರ ಸರ್ಕಾರಕ್ಕೆ ಅಧಿಸೂಚನೆ ಹೊರಡಿಸುವಂತೆ ಒತ್ತಾಯಿಸಿ ಪತ್ರ ಬರೆಯಲಾಗಿತ್ತು. ಅದರ ಪ್ರತಿಫಲವಾಗಿ ಕೇಂದ್ರ ಸರ್ಕಾರ ಆರು ವರ್ಷಗಳ ಬಳಿಕ ಅಧಿಸೂಚನೆ ಹೊರಡಿಸಿತ್ತು. ಕಳೆದ ಕೆಲ ದಿನಗಳ ಹಿಂದೆ ಈ ವಿಚಾರವಾಗಿ ರಾಜ್ಯ ಸರ್ಕಾರಕ್ಕೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಪತ್ರ ಬರೆದು ಒತ್ತಾಯಿಸಿದ್ದರು. ಇದಾದ ಕೆಲ ದಿನಗಳ ಬಳಿಕ ರಾಜ್ಯ ಸರ್ಕಾರ ತಳವಾರ ಮತ್ತು ಪರಿವಾರ ಹಾಗೂ ಸಿದ್ದಿ ಸಮುದಾಯಗಳನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಿ ಆದೇಶ ಹೊರಡಿಸಿದೆ








