ಇಂದಿನಿಂದ ಪೌರ ಕಾರ್ಮಿಕರ ಮುಷ್ಕರ – ತ್ಯಾಜ್ಯ ಸಮಸ್ಯೆ ಉಲ್ಬಣ ಸಾಧ್ಯತೆ…
ನೇರ ಪಾವತಿ ಮತ್ತು ಪೌರ ಕಾರ್ಮಿಕರ ಖಾಯಂ ನೇಮಕಾತಿಗಾಗಿ ಆಗ್ರಹಿಸಿ ಪೌರ ಕಾರ್ಮಿಕರು ಅನಿರ್ಧಿಷ್ಟಾವಧಿಗೆ ಮುಷ್ಕರ ಹಮ್ಮಿಕೊಂಡಿದ್ದಾರೆ. ಪೌರ ಕಾರ್ಮಿಕರು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಪ್ರತಿಭಟನೆ ನಡೆಸಲಿದ್ದು, ಸ್ವಚ್ಛತಾ ಕಾರ್ಮಿಕರ ಮುಷ್ಕರದಿಂದಾಗಿ ನಗರಗಳಲ್ಲಿ ತ್ಯಾಜ್ಯ ಸಮಸ್ಯೆ ಉಲ್ಬಣಿಸು ಸಾಧ್ಯತೆ ಇದೆ.
ಪೌರ ಕಾರ್ಮಿಕರ ಖಾಯಂ ನೇಮಕಾತಿಗಾಗಿ ಆಗ್ರಹಿಸಿ ಕರ್ನಾಟಕ ರಾಜ್ಯ ಮಹಾನಗರ ಪಾಲಿಕೆ, ನಗರಸಭೆ, ಪುರಸಭೆಗಳ ಪೌರ ಕಾರ್ಮಿಕರ ಮಹಾಸಂಘದಿಂದ ಜುಲೈ 1ರಿಂದ ಅನಿರ್ಧಿಷ್ಟಾವಧಿ ಮುಷ್ಕರ ಹಮ್ಮಿಕೊಳ್ಳಲಾಗಿದೆ
ಸರ್ಕಾರ ಪೌರ ಕಾರ್ಮಿಕರ ನೇಮಕಾತಿ ವಿಚಾರವಾಗಿ ಮೌನವಾಗಿದೆ. ನಮ್ಮ ಕಡೆಗಣಿಸುತ್ತಿದೆ. ಹಲವಾರು ಬಾರಿ ಸಿಎಂ ಗಮನಕ್ಕೆ ತರಲಾಗಿದೆ. ಆದರೂ ಯಾವುದೇ ಪ್ರಯೋಜನ ಆಗಿಲ್ಲ. ಸರ್ಕಾರದ ನಿರ್ಲಕ್ಷ್ಯ ಧೋರಣೆ ಖಂಡಿಸಿ, ಮಹಾನಗರ ಪಾಲಿಕೆ ಮುಂಭಾಗ ಧರಣಿ ಸತ್ಯಾಗ್ರಹ ನಡೆಸಲಾಗುವುದು ಎಂದು ರಾಜ್ಯ ಉಪಾಧ್ಯಕ್ಷ ಎಲ್.ಎಂ.ಹನುಮಂತಪ್ಪ ದಾವಣಗೆರೆ ಸುದ್ದಿಗೋಷ್ಠಿಯಲ್ಲಿ ಹೇಳಿದ್ದಾರೆ.
ಕೆಲಸದ ಖಾಯಮಾತಿ ಪೌರಕಾರ್ಮಿಕರ ಪ್ರಮುಖ ಬೇಡಿಕೆಯಾಗಿದೆ. ಸಫಾಯಿ ಕರ್ಮಾಚಾರಿ, ಸ್ವೀಪರ್ ಸೇರಿದಂತೆ ಪೌರಕಾರ್ಮಿಕರಿಗೆ ಮಾಸಿಕ ಸುಮಾರು 14,000 ರೂ. ಅಲ್ಪ ವೇತನ ನೀಡಲಾಗುತ್ತಿದೆ. ಇದರಿಂದ ಮೂಲ ಅಗತ್ಯಗಳನ್ನು ಈಡೇರಿಸುವುದೇ ದುಸ್ತರವಾಗಿ ಪರಿಣಮಿಸಿದೆ. ಹೀಗಾಗಿ, ನೇರ ನೇಮಕಾತಿ ಮಾಡಬೇಕೆಂಬುದು ಪೌರಕಾರ್ಮಿಕ ಒಕ್ಕೂಟದ ಪ್ರಮುಖ ಬೇಡಿಕೆಯಾಗಿದೆ.








