ಪಂಜಾಬ್ ನಲ್ಲಿ ಇತ್ತೀಚೆಗೆ ಅಧಿಕಾರಕ್ಕೆ ಬಂದ ನೂತನ AAP ಸರ್ಕಾರ ಹೊಸ ಹೊಸ ಯೋಜನೆಗಳನ್ನ ತರುತ್ತಿದೆ.. ಇತ್ತೀಚೆಗೆ ಜುಲೈ 1ರಿಂದ ಗೃಹ ಬಳಕೆಗಾಗಿ ತಿಂಗಳಿಗೆ 300 ಯೂನಿಟ್‍ಗಳ ಉಚಿತ ವಿದ್ಯುತ್ ಪೂರೈಸುವುದಾಗಿ ಮುಖ್ಯಮಂತ್ರಿ ಭಗವಂತ್ ಮಾನ್ ನೇತೃತ್ವದ ಸರ್ಕಾರ ಘೋಷಿಸಿತ್ತು.
ಅಂತೆಯೇ ಇಂದಿನಿಂದ ಪಂಜಾಬ್‍ನ ಪ್ರತಿ ಮನೆಗೂ 300 ಯೂನಿಟ್ ವಿದ್ಯುತ್ ಅನ್ನು ಉಚಿತವಾಗಿ ಪೂರೈಸುತ್ತಿದೆ. 2022 ರ ಪಂಜಾಬ್ ವಿಧಾನಸಭಾ ಚುನಾವಣೆ ವೇಳೆ ಆಮ್ ಆದ್ಮಿ ಪಕ್ಷ ನೀಡಿದ ಪ್ರಮುಖ ಭರವಸೆಗಳಲ್ಲಿ ಪ್ರತಿ ಮನೆಗೆ 300 ಯೂನಿಟ್ ಉಚಿತ ವಿದ್ಯುತ್ ನೀಡುವುದು ಕೂಡ ಒಂದಾಗಿತ್ತು. ಅದರಂತೆ ಜುಲೈ 1 ರಿಂದ ಪ್ರತಿ ಮನೆಗೆ 300 ಯೂನಿಟ್ ಉಚಿತ ವಿದ್ಯುತ್ ನೀಡುವುದಾಗಿ ಎಎಪಿ ಸರ್ಕಾರ ಸೋಮವಾರ ಘೋಷಿಸಿತ್ತು.








