ADVERTISEMENT
Wednesday, May 13, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

Minister Dr. K. Sudhakar | ಹಣದಿಂದ ವೈದ್ಯರ ಸೇವೆ ಅಳೆಯಲು ಸಾಧ್ಯವಿಲ್ಲ

Mahesh M Dhandu by Mahesh M Dhandu
July 2, 2022
in Newsbeat, State, ರಾಜ್ಯ
K Sudhakar Saaksha Tv
Share on FacebookShare on TwitterShare on WhatsappShare on Telegram

Minister Dr. K. Sudhakar | ಹಣದಿಂದ ವೈದ್ಯರ ಸೇವೆ ಅಳೆಯಲು ಸಾಧ್ಯವಿಲ್ಲ

ಬೆಂಗಳೂರು : ವೈದ್ಯಕೀಯ ವೃತ್ತಿ ಅತ್ಯಂತ ಪುಣ್ಯದ ಕೆಲಸವಾಗಿದ್ದು, ಅದೃಷ್ಟವಂತರಿಗೆ ಮಾತ್ರ ಈ ಅವಕಾಶ ಸಿಗುತ್ತದೆ. ವೈದ್ಯರ ಸೇವೆಯನ್ನು ಹಣದಿಂದ ಅಳೆಯಲು ಸಾಧ್ಯವಿಲ್ಲ. ಇಂತಹ ವೃತ್ತಿಯನ್ನು ಸಮರ್ಪಣಾ ಮನೋಭಾವದಿಂದ ಮಾಡಬೇಕು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಹೇಳಿದರು.

Related posts

ಸೋತರೂ ಬಗ್ಗದ ಸ್ಟಾಲಿನ್ ಪುತ್ರ: ವಿರೋಧ ಪಕ್ಷದ ನಾಯಕನಾಗಿ ಮೊದಲ ಭಾಷಣದಲ್ಲೇ ಸನಾತನ ಧರ್ಮದ ವಿರುದ್ಧ ಉದಯನಿಧಿ ಗುಡುಗು!

ಸೋತರೂ ಬಗ್ಗದ ಸ್ಟಾಲಿನ್ ಪುತ್ರ: ವಿರೋಧ ಪಕ್ಷದ ನಾಯಕನಾಗಿ ಮೊದಲ ಭಾಷಣದಲ್ಲೇ ಸನಾತನ ಧರ್ಮದ ವಿರುದ್ಧ ಉದಯನಿಧಿ ಗುಡುಗು!

May 13, 2026
ಗೃಹಲಕ್ಷ್ಮಿ ಫಲಾನುಭವಿಗಳಿಗೆ ಸಿಹಿ ಸುದ್ದಿ: ಇನ್ನು ನಾಲ್ಕೇ ದಿನಗಳಲ್ಲಿ ನಿಮ್ಮ ಖಾತೆಗೆ ಬರಲಿದೆ 2000 ರೂಪಾಯಿ ಬಾಕಿ ಹಣ!

ಗೃಹಲಕ್ಷ್ಮಿ ಫಲಾನುಭವಿಗಳಿಗೆ ಸಿಹಿ ಸುದ್ದಿ: ಇನ್ನು ನಾಲ್ಕೇ ದಿನಗಳಲ್ಲಿ ನಿಮ್ಮ ಖಾತೆಗೆ ಬರಲಿದೆ 2000 ರೂಪಾಯಿ ಬಾಕಿ ಹಣ!

May 13, 2026

ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ರಾಷ್ಟ್ರೀಯ ವೈದ್ಯರ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಹಣದಿಂದ ವೈದ್ಯರ ಸೇವೆಯನ್ನು ಅಳೆಯಲು ಸಾಧ್ಯವಿಲ್ಲ. ವೈದ್ಯರು ವೃತ್ತಿಪರರಾಗಿದ್ದಾಗ ಸಮಾಜ ಅವರನ್ನು ಗುರುತಿಸಿ ಗೌರವಿಸುತ್ತದೆ. ವೈದ್ಯರು ಕೇವಲ ಔಷಧಿ ಮಾತ್ರ ಕೊಡುವುದಿಲ್ಲ, ಬದಲಾಗಿ ರೋಗಿಯನ್ನು ಅಂತಃಕರಣದಿಂದ ಆರೈಕೆ ಮಾಡುತ್ತಾರೆ ಎಂದು ಹೇಳಿದರು.

ವೈದ್ಯರಿಗೆ ಪ್ರತಿದಿನದ ಕಲಿಕೆ ಮುಖ್ಯ. ವೈದ್ಯರು ನಿರಂತರ ಅಧ್ಯಯನ ಮಾಡಿದರೆ ಮಾತ್ರ ಹೊಸತನಕ್ಕೆ ಹೊಂದಿಕೊಳ್ಳಲು ಸಾಧ್ಯ. ಸರ್ಕಾರಿ ಆಸ್ಪತ್ರೆಗಳಲ್ಲಿ ಕೆಲಸ ಮಾಡುವ ವೈದ್ಯರು ಸಮರ್ಪಣೆಯಿಂದ ಕೆಲಸ ಮಾಡಬೇಕೆ ಹೊರತು, ಟೈಮ್‌ಪಾಸ್‌ ಅಥವಾ ಪರ್ಯಾಯ ಎಂದು ಭಾವಿಸಬಾರದು. ಸಂಜೆ ಖಾಸಗಿ ಪ್ರಾಕ್ಟಿಸ್‌ ಮಾಡಲು ಸರ್ಕಾರ ಅವಕಾಶ ಮಾಡಿಕೊಟ್ಟಿದೆ. ಆದರೆ ಕೆಲ ವೈದ್ಯರು ಮಾಡುವ ಮೌಲ್ಯ ರಹಿತ ಕಾರ್ಯಗಳಿಂದ ಇಡೀ ವೈದ್ಯಲೋಕಕ್ಕೆ ಕೆಟ್ಟ ಹೆಸರು ಬರುತ್ತದೆ. ಪ್ರಾಮಾಣಿಕವಾಗಿ ಕೆಲಸ ಮಾಡುವ ವೈದ್ಯರಿಗೆ ಇದರಿಂದ ನೋವಾಗುತ್ತದೆ ಎಂದರು.

ಯಾರಾದರೂ ವೈದ್ಯರಿಗೆ ಸಂಪೂರ್ಣವಾಗಿ ಖಾಸಗಿ ಕ್ಷೇತ್ರದಲ್ಲೇ ತೊಡಗಿಸಿಕೊಳ್ಳಬೇಕು ಎಂಬ ಮನಸ್ಸಿದ್ದರೆ ಅವರು ಸ್ವತಂತ್ರರಾಗಿದ್ದಾರೆ. ಸರ್ಕಾರಿ ಆಸ್ಪತ್ರೆಗಳಲ್ಲಿ ಸದ್ಯ ವೈದ್ಯರ ಕೊರತೆ ಇಲ್ಲ. ಆದರೆ ಕೆಲ ವೈದ್ಯರಿಂದ ಹಾಜರಾತಿ ವ್ಯವಸ್ಥೆಯಲ್ಲಿ ಬದಲಾವಣೆ ತರುವ ಹಾಗಾಗಿದೆ. ವೈದ್ಯರ ಮೇಲೆ ಯಾರೂ ನಿಗಾ ಇಡಬಾರದು. ವೈದ್ಯರನ್ನು ಯಾರೂ ಅನುಮಾನದಿಂದ ನೋಡಿದರೆ ಆ ವೃತ್ತಿಗೆ ಅಪಮಾನವಾಗುತ್ತದೆ. ಬಯೋಮೆಟ್ರಿಕ್‌ ವ್ಯವಸ್ಥೆಯನ್ನು ಬಹಳ ನೋವಿನಿಂದ ಜಾರಿ ತರುವಂತಾಗಿದೆ ಎಂದರು.

Minister Dr. K. Sudhakar A doctor's service cannot be measured by money saaksha tv
Minister Dr. K. Sudhakar A doctor’s service cannot be measured by money saaksha tv

ಆಸ್ಪತ್ರೆಯಲ್ಲಿ ರೋಗಿಗೆ ನೀಡುವ ಚಿಕಿತ್ಸೆ ಎಷ್ಟು ಮುಖ್ಯವೋ, ಆಸ್ಪತ್ರೆಯ ನಿರ್ವಹಣೆಯೂ ಅಷ್ಟೇ ಮುಖ್ಯ. ಆಗ ಮಾತ್ರ ಆರೋಗ್ಯ ಸೇವೆಗಳಲ್ಲಿ ದಕ್ಷತೆ, ಗುಣಮಟ್ಟ, ವೃತ್ತಿಪರತೆ ಕಾಯ್ದುಕೊಳ್ಳಲು ಸಾಧ್ಯ. ವೈದ್ಯರು ಆಯುಷ್ಯವನ್ನು ವೃದ್ಧಿ ಮಾಡಲು, ನೋವನ್ನು ನಿವಾರಣೆ ಮಾಡಲು ಸಾಧ್ಯ. ಭಗವಂತ ಈ ಶಕ್ತಿಯನ್ನು ಕೇವಲ ವೈದ್ಯರಿಗೆ ಮಾತ್ರ ಕೊಟ್ಟಿದ್ದಾನೆ. ಡಾ.ಬಿ.ಸಿ.ರಾಯ್ ಜನ್ಮಶತಮಾನೋತ್ಸವದ ಅಂಗವಾಗಿ ಇಡೀ ದೇಶದಲ್ಲಿ ವೈದ್ಯರ ದಿನಾಚರಣೆ ನಡೆಯುತ್ತಿದೆ. ರಾಜ್ಯ ಸರ್ಕಾರ ಕೂಡ ಅರ್ಥಪೂರ್ಣ ಆಚರಣೆಗೆ ಸಿದ್ಧವಾಗಿದೆ. ಜುಲೈ 7 ರಂದು ವಿಧಾನಸೌಧದಲ್ಲಿ ವೈದ್ಯಕೀಯ ಕ್ಷೇತ್ರದಲ್ಲಿ ವಿಶೇಷ ಹಾಗೂ ಗಣನೀಯ ಸೇವೆ ಮಾಡಿದವರಿಗೆ ಗೌರವ ಸಮರ್ಪಣೆ ಮಾಡಲಾಗುವುದು ಎಂದರು.

ಶುಲ್ಕ ವಸೂಲಿ
ಕೊರೊನಾ ಸಮಯದಲ್ಲಿ ಕೆಲ ಖಾಸಗಿ ಆಸ್ಪತ್ರೆಗಳು ರೋಗಿಗಳಿಗೆ ಚಿಕಿತ್ಸೆ ನೀಡಿ, ರೋಗಿಗಳಿಂದ ಹಾಗೂ ಸರ್ಕಾರದಿಂದ ಹಣ ಪಡೆದಿವೆ. ಅಂತಹ ಆಸ್ಪತ್ರೆಗಳಿಗೆ ನೋಟಿಸ್‌ ನೀಡಿ ಹಣ ವಸೂಲಿ ಮಾಡಿ, ರೋಗಿಗಳ ಕುಟುಂಬಕ್ಕೆ ಹಣ ವಾಪಸ್‌ ಕೊಡಿಸಲಾಗುವುದು ಎಂದು ಸಚಿವರು ತಿಳಿಸಿದರು.

ಎಲ್ಲಾ ವೈದ್ಯರು ಆಡಳಿತದಲ್ಲಿ ಪರಿಣತಿ ಪಡೆಯಬೇಕು. ಅದಕ್ಕಾಗಿ ಡಾಕ್ಟರ್ಸ್ ಹೆಲ್ತ್ ಕೇರ್ ಮ್ಯಾನೇಜ್ಮೆಂಟ್ ಆರಂಭಿಸಿದ್ದೇವೆ. ಹೆಲ್ತ್ ವರ್ಕರ್ಸ್ ಕೂಡ ವೃತ್ತಿಪರರಾಗಿ ಬೆಳೆಯಬೇಕು. ಕೋವಿಡ್ ಬಂದ ಮೇಲೆ ಮೂಲಭೂತ ಸೌಕರ್ಯಗಳು ಅಭಿವೃದ್ಧಿಯಾಯಿತು. ಕೋವಿಡ್ ಬಳಿಕ 10 ವರ್ಷದಲ್ಲಿ ಆಗುವಂತಹ ಬೆಳವಣಿಗೆ ಒಂದು ವರ್ಷದಲ್ಲಿ ಆಗಿದೆ. 2020ಕ್ಕೆ ಹೋಲಿಸಿದರೆ ಈಗ ಹೆಚ್ಚುವರಿಯಾಗಿ 4,000 ವೈದ್ಯರು ಕೆಲಸ ಮಾಡುತ್ತಿದ್ದಾರೆ ಎಂದು ಹೇಳಿದರು.

ಸರ್ಕಾರ ವೈದ್ಯರ ನೇಮಕಾತಿ ಹಾಗೂ ಮೂಲಭೂತ ಸೌಕರ್ಯ, ಸೌಲಭ್ಯಗಳನ್ನು ಹೆಚ್ಚು ಮಾಡುತ್ತಿದೆ. ಪ್ರತಿ ಜಿಲ್ಲೆಯಲ್ಲೂ ವೈದ್ಯಕೀಯ ಕಾಲೇಜು ಆರಂಭವಾಗಬೇಕು. ಆದರೆ ಅದಕ್ಕೂ ಮೊದಲು ಗುಣಮಟ್ಟದಲ್ಲಿ ಬದಲಾವಣೆ ತರಬೇಕು. ವೈದ್ಯರ ಮೇಲೆ ಯಾರೇ ಹಲ್ಲೆ ಮಾಡಿದರೂ ಅದು ಅಕ್ಷಮ್ಯ ಅಪರಾಧ. ವೈದ್ಯರ ಮೇಲೆ ಹಲ್ಲೆ ಮಾಡಿದರೆ ಕಾನೂನು ಕ್ರಮ ಕೈಗೊಳ್ಳುತ್ತೇವೆ ಎಂದು ಎಚ್ಚರಿಕೆ ನೀಡಿದರು.

ಮಾಸ್ಕ್ ಧರಿಸಿ
ಬೆಂಗಳೂರಿನಲ್ಲಿ ಕೊರೊನಾ ಪ್ರಕರಣಗಳು ಹೆಚ್ಚಾಗುತ್ತಿವೆ. ಜನರು ಮಾಸ್ಕ್ ಧರಿಸಬೇಕು. ಸರ್ಕಾರದ ಮಾರ್ಗ ಸೂಚಿಗಳನ್ನು ಪಾಲಿಸಬೇಕು ಎಂದು ಸಚಿವರು ತಿಳಿಸಿದರು.

Tags: #Minister Dr.K.Sudhakar.#Saaksha TVkarnataka
ShareTweetSendShare
Join us on:

Related Posts

ಸೋತರೂ ಬಗ್ಗದ ಸ್ಟಾಲಿನ್ ಪುತ್ರ: ವಿರೋಧ ಪಕ್ಷದ ನಾಯಕನಾಗಿ ಮೊದಲ ಭಾಷಣದಲ್ಲೇ ಸನಾತನ ಧರ್ಮದ ವಿರುದ್ಧ ಉದಯನಿಧಿ ಗುಡುಗು!

ಸೋತರೂ ಬಗ್ಗದ ಸ್ಟಾಲಿನ್ ಪುತ್ರ: ವಿರೋಧ ಪಕ್ಷದ ನಾಯಕನಾಗಿ ಮೊದಲ ಭಾಷಣದಲ್ಲೇ ಸನಾತನ ಧರ್ಮದ ವಿರುದ್ಧ ಉದಯನಿಧಿ ಗುಡುಗು!

by Shwetha
May 13, 2026
0

ಚೆನ್ನೈ: 2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ ಇಡೀ ದೇಶವನ್ನೇ ಬೆರಗುಗೊಳಿಸಿದೆ. ಭದ್ರಕೋಟೆಯಂತಿದ್ದ ಡಿಎಂಕೆ ಪಕ್ಷವು ಹೀನಾಯ ಸೋಲನ್ನನುಭವಿಸಿ ಅಧಿಕಾರ ಕಳೆದುಕೊಂಡಿದ್ದರೂ, ಮಾಜಿ ಉಪಮುಖ್ಯಮಂತ್ರಿ ಉದಯನಿಧಿ ಸ್ಟಾಲಿನ್...

ಗೃಹಲಕ್ಷ್ಮಿ ಫಲಾನುಭವಿಗಳಿಗೆ ಸಿಹಿ ಸುದ್ದಿ: ಇನ್ನು ನಾಲ್ಕೇ ದಿನಗಳಲ್ಲಿ ನಿಮ್ಮ ಖಾತೆಗೆ ಬರಲಿದೆ 2000 ರೂಪಾಯಿ ಬಾಕಿ ಹಣ!

ಗೃಹಲಕ್ಷ್ಮಿ ಫಲಾನುಭವಿಗಳಿಗೆ ಸಿಹಿ ಸುದ್ದಿ: ಇನ್ನು ನಾಲ್ಕೇ ದಿನಗಳಲ್ಲಿ ನಿಮ್ಮ ಖಾತೆಗೆ ಬರಲಿದೆ 2000 ರೂಪಾಯಿ ಬಾಕಿ ಹಣ!

by Shwetha
May 13, 2026
0

ರಾಜ್ಯದ ಲಕ್ಷಾಂತರ ಮಹಿಳೆಯರು ಅತ್ಯಂತ ಕುತೂಹಲದಿಂದ ಕಾಯುತ್ತಿದ್ದ ಗೃಹಲಕ್ಷ್ಮಿ ಯೋಜನೆಯ ಹಣ ಬಿಡುಗಡೆ ಕುರಿತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು...

ಪ್ರಧಾನಿ ಮೋದಿ ಮಾರ್ಗದಲ್ಲಿ ಸ್ಪೋಟಕ ಪತ್ತೆ..! ಪ್ರಕರಣ ಎನ್‌ಐಎಗೆ

ಪ್ರಧಾನಿ ಮೋದಿ ಮಾರ್ಗದಲ್ಲಿ ಸ್ಪೋಟಕ ಪತ್ತೆ..! ಪ್ರಕರಣ ಎನ್‌ಐಎಗೆ

by Shwetha
May 13, 2026
0

ಬೆಂಗಳೂರಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಸಂಚರಿಸುವ ಮಾರ್ಗದಲ್ಲಿ ಜಿಲೆಟಿನ್ ಕಡ್ಡಿ ಪತ್ತೆಯಾದ ಪ್ರಕರಣ ಇದೀಗ ಮತ್ತಷ್ಟು ಗಂಭೀರ ಸ್ವರೂಪ ಪಡೆದುಕೊಂಡಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಅದೇ ಸ್ಥಳದಲ್ಲಿ...

NEET ಪರೀಕ್ಷೆ ರದ್ದು: ವಿದ್ಯಾರ್ಥಿಗಳ ಕನಸುಗಳ ಜೊತೆ ಚೆಲ್ಲಾಟವೇ?

NEET ಪರೀಕ್ಷೆ ರದ್ದು: ವಿದ್ಯಾರ್ಥಿಗಳ ಕನಸುಗಳ ಜೊತೆ ಚೆಲ್ಲಾಟವೇ?

by Shwetha
May 13, 2026
0

ಡಾಕ್ಟರ್ ಆಗುವ ಮಹತ್ತರ ಕನಸನ್ನು ಹೊತ್ತು ರಾತ್ರಿ-ಹಗಲು ಶ್ರಮಪಟ್ಟು NEET ಪರೀಕ್ಷೆಗೆ ಸಿದ್ಧರಾದ ಲಕ್ಷಾಂತರ ವಿದ್ಯಾರ್ಥಿಗಳಿಗೆ ಇದೀಗ ಭಾರೀ ಆಘಾತ ಎದುರಾಗಿದೆ. ದೇಶದ ಅತ್ಯಂತ ಪ್ರಮುಖ ವೈದ್ಯಕೀಯ...

ಮಿತವ್ಯಯ ಮಂತ್ರಕ್ಕೆ ಡಿಕೆಶಿ ಕಿಡಿ ಬೊಮ್ಮಾಯಿ ಖಡಕ್ ತಿರುಗೇಟು: ರಾಜ್ಯ ರಾಜಕಾರಣದಲ್ಲಿ ಮೋದಿ ಕಿವಿಮಾತಿನದ್ದೇ ಸದ್ದು

ಮಿತವ್ಯಯ ಮಂತ್ರಕ್ಕೆ ಡಿಕೆಶಿ ಕಿಡಿ ಬೊಮ್ಮಾಯಿ ಖಡಕ್ ತಿರುಗೇಟು: ರಾಜ್ಯ ರಾಜಕಾರಣದಲ್ಲಿ ಮೋದಿ ಕಿವಿಮಾತಿನದ್ದೇ ಸದ್ದು

by Shwetha
May 13, 2026
0

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರು ಇತ್ತೀಚೆಗೆ ನೀಡಿದ ಚಿನ್ನ ಮತ್ತು ಇಂಧನ ಮಿತವ್ಯಯದ ಸಲಹೆ ಈಗ ರಾಜ್ಯ ರಾಜಕಾರಣದಲ್ಲಿ ಆಡಳಿತ ಮತ್ತು ವಿರೋಧ ಪಕ್ಷಗಳ ನಡುವೆ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram