Mandya : ಕೆ.ಎನ್.ರಾಜಣ್ಣ ವಿರುದ್ಧ ಬೃಹತ್ ಪ್ರತಿಭಟನೆ
ಮಂಡ್ಯ: ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ಖಂಡಿಸಿ ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಕೆ.ಎಂ.ದೊಡ್ಡಿಯಲ್ಲಿ ಜೆಡಿಎಸ್ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದಾರೆ.
ಹೆಚ್ ಡಿ ದೇವೇಗೌಡರು ಈಗ ಇಬ್ಬರ ಹೆಗಲ ಮೇಲೆ ಕೈ ಹಾಕಿ ನಡೆಯುತ್ತಿದ್ದಾರೆ.
ಇನ್ನು ನಾಲ್ವರ ಮೇಲೆ ಹೋಗುವ ಸಮಯ ಹತ್ತಿರದಲ್ಲೇ ಇದೆ ಎಂದು ಕಾಂಗ್ರೆಸ್ ನಾಯಕ ಕೆ. ಎನ್. ರಾಜಣ್ಣ ಲೇವಡಿ ಮಾಡಿದ್ದರು.
ಈ ಹೇಳಿಕೆಯನ್ನು ಖಂಡಿಸಿ ಜೆಡಿಎಸ್ ಕಾರ್ಯಕರ್ತರು ಮಳವಳ್ಳಿ-ಮದ್ದೂರು ಹೆದ್ದಾರಿ ತಡೆದು ಆಕ್ರೋಶ ಹೊರಹಾಕಿದ್ದಾರೆ.
ಈ ಪ್ರತಿಭಟನಾ ಮೆರವಣಿಗೆಯಲ್ಲಿ ಸಾವಿರಾರು ಸಂಖ್ಯೆಯಲ್ಲಿ ಜೆಡಿಎಸ್ ಕಾರ್ಯಕರ್ತರು ಭಾಗಿಯಾಗಿದ್ದಾರೆ.
ಹೆಡ್ ಡಿ ದೇವೇಗೌಡರ ಬಗ್ಗೆ ಅವಹೇಳಿನಕಾರಿಯಾಗಿ ಮಾತನಾಡಿರುವುದು ಸರಿಯಲ್ಲ.
ಈ ಕೂಡಲೇ ರಾಜಣ್ಣ ಕ್ಷಮೆ ಯಾಚಿಸಬೇಕು ಎಂದು ಒತ್ತಾಯ ಮಾಡುತ್ತಿದ್ದಾರೆ.