ತಾಕತ್ತು ಇದ್ದರೆ ಡಿಕೆಶಿ ವಿರುದ್ಧ ಸೆಟೆದು ನಿಲ್ಲಿ : ಸಿದ್ದುಗೆ ಬಿಜೆಪಿ ಸವಾಲು
ಬೆಂಗಳೂರು : ತಾನೇ ಮುಂದಿನ ಸಿಎಂ ಎಂದು ಬಿಂಬಿಸಿಕೊಳ್ಳಲು ತನ್ನದೇ ಪಟಾಲಂ ಜೊತೆಗೂಡಿ ವ್ಯಕ್ತಿ ಪೂಜೋತ್ಸವ ಮಾಡಿದರೆ ಅದನ್ನು ಶಕ್ತಿ ಪ್ರದರ್ಶನ ಎನ್ನುವುದಿಲ್ಲ, ಅದು ಉತ್ತರಕುಮಾರನ ಪೌರುಷ ಅಷ್ಟೇ. ತಾಕತ್ತು ಅನ್ನುವುದಿದ್ದರೆ ಈಗಲೇ ಡಿಕೆಶಿ ವಿರುದ್ಧ ಸೆಟೆದು ನಿಲ್ಲಿ, ರಾಜಕೀಯ ಸಂದಿಗ್ಧತೆ ತಂದಿಡುವುದು ಸಾಮರ್ಥ್ಯವೇ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧ ರಾಜ್ಯ ಬಿಜೆಪಿ ಪ್ರಶ್ನಿಸಿದೆ.
ಈ ಕುರಿತು ಸರಣಿ ಟ್ವೀಟ್ ಗಳನ್ನು ಮಾಡಿರುವ ರಾಜ್ಯ ಬಿಜೆಪಿ ಘಟಕ, ತಳಹದಿಯಿಲ್ಲದೆ ಮಹಡಿ ಮನೆ ಕಟ್ಟಲು ಸಿದ್ದರಾಮಯ್ಯ ಹೊರಟಿದ್ದಾರೆ. ರಾಜ್ಯದ ಮುಖ್ಯಮಂತ್ರಿಯಾಗಿದ್ದವರಿಗೆ ಮುಂದಿನ ಚುನಾವಣೆಗೆ ಸ್ಪರ್ಧಿಸಲು ಕ್ಷೇತ್ರ ಸಿಗಲಾರದ ಪರಿಸ್ಥಿತಿ ಯಾವ ನಾಯಕರಿಗೂ ಬರಬಾರದು. ಸಿದ್ದರಾಮಯ್ಯನವರೇ, ಇದಕ್ಕಾಗಿ ನಿಮ್ಮ ಬಗ್ಗೆ ನಮಗೆ ಅನುಕಂಪವಿದೆ!
ಸಿದ್ದರಾಮೋತ್ಸವದ ಬಳಿಕ ಕಾಂಗ್ರೆಸ್ ಮತ್ತಷ್ಟು ಖಾಲಿಯಾಗಲಿದೆ. ಕಾಂಗ್ರೆಸ್ ಮುಕ್ತ ಕರ್ನಾಟಕಕ್ಕೆ @siddaramaiah ನಾಂದಿ ಹಾಡುತ್ತಿದ್ದಾರೆ.
ಮುಖ್ಯಮಂತ್ರಿ ಅಭ್ಯರ್ಥಿ ಎಂದು ಸಿದ್ದರಾಮಯ್ಯ ಹೆಸರು ಘೋಷಿಸದೇ ಇದ್ದಲ್ಲಿ, ಆರು ಪಕ್ಷ ಬಿಟ್ಟು ಬಂದಿರುವ ಸಿದ್ದರಾಮಯ್ಯ ಅವರಿಗೆ ಏಳನೇ ಬಾರಿ ಪಕ್ಷಾಂತರ ಮಾಡುವುದು ಕಷ್ಟವೇ?#ಸಿದ್ದುಹಾಸ್ಯೋತ್ಸವ
— BJP Karnataka (@BJP4Karnataka) July 2, 2022
ತಾನೇ ಮುಂದಿನ ಸಿಎಂ ಎಂದು ಬಿಂಬಿಸಿಕೊಳ್ಳಲು ತನ್ನದೇ ಪಟಾಲಂ ಜೊತೆಗೂಡಿ ವ್ಯಕ್ತಿ ಪೂಜೋತ್ಸವ ಮಾಡಿದರೆ ಅದನ್ನು ಶಕ್ತಿ ಪ್ರದರ್ಶನ ಎನ್ನುವುದಿಲ್ಲ, ಅದು ಉತ್ತರಕುಮಾರನ ಪೌರುಷ ಅಷ್ಟೇ. ತಾಕತ್ತು ಅನ್ನುವುದಿದ್ದರೆ ಈಗಲೇ ಡಿಕೆಶಿ ವಿರುದ್ಧ ಸೆಟೆದು ನಿಲ್ಲಿ, ರಾಜಕೀಯ ಸಂದಿಗ್ಧತೆ ತಂದಿಡುವುದು ಸಾಮರ್ಥ್ಯವೇ?
ಆ ಭಾಗ್ಯ, ಈ ಭಾಗ್ಯ ಎಂದು ಘೋಷಣೆ ಮಾಡಿದ್ದೇ ಬಂತು, ಜನಪ್ರಿಯತೆ, ಪ್ರಚಾರಕ್ಕಾಗಿ ಮಾಡಿದ ಯಾವ ಕಾರ್ಯವೂ ಈಗ ಸಿದ್ದರಾಮಯ್ಯ ಸಹಾಯಕ್ಕೆ ಬರುತ್ತಿಲ್ಲ. ಹಲವು ಬಿಟ್ಟಿ ಭಾಗ್ಯ ನೀಡಿದ ಸಿದ್ದರಾಮಯ್ಯಗೆ ಈಗ ಕ್ಷೇತ್ರ ಭಾಗ್ಯದ ಫಲಾನುಭವಿಯಾಗಲು ಸಾಧ್ಯವಾಗುತ್ತಿಲ್ಲ. ಇದಕ್ಕಿಂತ ನಾಚಿಗಗೇಡಿನ ಸಂಗತಿ ಮತ್ತೊಂದಿದೆಯೇ?
ಸಿದ್ದರಾಮೋತ್ಸವದ ಬಳಿಕ ಕಾಂಗ್ರೆಸ್ ಮತ್ತಷ್ಟು ಖಾಲಿಯಾಗಲಿದೆ. ಕಾಂಗ್ರೆಸ್ ಮುಕ್ತ ಕರ್ನಾಟಕಕ್ಕೆ ಸಿದ್ದರಾಮಯ್ಯ ನಾಂದಿ ಹಾಡುತ್ತಿದ್ದಾರೆ. ಮುಖ್ಯಮಂತ್ರಿ ಅಭ್ಯರ್ಥಿ ಎಂದು ಸಿದ್ದರಾಮಯ್ಯ ಹೆಸರು ಘೋಷಿಸದೇ ಇದ್ದಲ್ಲಿ, ಆರು ಪಕ್ಷ ಬಿಟ್ಟು ಬಂದಿರುವ ಸಿದ್ದರಾಮಯ್ಯ ಅವರಿಗೆ ಏಳನೇ ಬಾರಿ ಪಕ್ಷಾಂತರ ಮಾಡುವುದು ಕಷ್ಟವೇ?
ತಾನೇ ಮುಂದಿನ ಸಿಎಂ ಎಂದು ಬಿಂಬಿಸಿಕೊಳ್ಳಲು ತನ್ನದೇ ಪಟಾಲಂ ಜೊತೆಗೂಡಿ ವ್ಯಕ್ತಿ ಪೂಜೋತ್ಸವ ಮಾಡಿದರೆ ಅದನ್ನು ಶಕ್ತಿ ಪ್ರದರ್ಶನ ಎನ್ನುವುದಿಲ್ಲ, ಅದು ಉತ್ತರಕುಮಾರನ ಪೌರುಷ ಅಷ್ಟೇ.
ತಾಕತ್ತು ಅನ್ನುವುದಿದ್ದರೆ ಈಗಲೇ ಡಿಕೆಶಿ ವಿರುದ್ಧ ಸೆಟೆದು ನಿಲ್ಲಿ, ರಾಜಕೀಯ ಸಂದಿಗ್ಧತೆ ತಂದಿಡುವುದು ಸಾಮರ್ಥ್ಯವೇ?#ಸಿದ್ದುಹಾಸ್ಯೋತ್ಸವ
— BJP Karnataka (@BJP4Karnataka) July 2, 2022
ಆ ಧರ್ಮರಾಯನ ಹಿಂದೆಯೇ ಯಾರೂ ಬರಲಿಲ್ಲ, ನಿಮ್ಮಂತಹ ಅಧರ್ಮರಾಯನ ಹಿಂದೆ ಯಾರು ತಾನೇ ನಿಲ್ಲಬಲ್ಲರು ಸಿದ್ದರಾಮಯ್ಯ..? ನಿಮ್ಮ ಉತ್ಸವ ನಾಲ್ಕು ಕುರ್ಚಿಗಳನ್ನು ತುಂಬಬಹುದೇ ಹೊರತು, ನಾಲ್ಕು ಸೀಟುಗಳನ್ನು ಗಳಿಸಿ ಕೊಡದು. ಸಿದ್ದರಾಮಯ್ಯನವರೇ, ಮೂಲ ಕಾಂಗ್ರೆಸ್ಸಿಗರು ನಿಮ್ಮಿಂದಾಗಿಯೇ ಪಕ್ಷ ತೊರೆಯುತ್ತಿರುವುದು ನಿಜವಲ್ಲವೇ?
ಹಿಂದೂ ವಿರೋಧಿ ಧೋರಣೆಯಿಂದಲೇ ಸಿದ್ದರಾಮಯ್ಯ ಅವರಿಗೆ ರಾಜಕೀಯ ಹಿನ್ನಡೆಯಾಗುತ್ತಿದೆ. ಚಾಮುಂಡೇಶ್ವರಿಯಲ್ಲಿ ದೇವಿ ಕೈಹಿಡಿಯಲಿಲ್ಲ. ಬದಾಮಿಯಲ್ಲೂ ಬನಶಂಕರಿಯ ಶಾಪ. ಸವದತ್ತಿ ಎಲ್ಲಮ್ಮನೂ ನಿಮ್ಮನ್ನು ಕಾಪಾಡಲಾರಳು. ಸಿದ್ದರಾಮಯ್ಯರ ಪಾಪದ ಕೊಡ ತುಂಬಿದೆ ಎಂದು ಬಿಜೆಪಿ ಬರೆದುಕೊಂಡಿದೆ.








