ಇಂದಿನಿಂದ ಹೈದ್ರಾಬಾದ್ ನಲ್ಲಿ ಬಿಜೆಪಿ ಕಾರ್ಯಕಾರಿಣಿ ಸಭೆ – ಪ್ರಧಾನಿ ಭಾಗಿ
ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿ ಸಮಿತಿ ಸಭೆ ಇಂದು ಹೈದರಾಬಾದ್‌ನಲ್ಲಿ ಆರಂಭವಾಗಲಿದೆ. ಎರಡು ದಿನಗಳ ಸಭೆಯ ಎಲ್ಲಾ ಅಧಿವೇಶನಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ಪಾಲ್ಗೊಳ್ಳಲಿದ್ದಾರೆ.
18 ವರ್ಷಗಳ ನಂತರ ಹೈದರಾಬಾದ್‌ನಲ್ಲಿ ರಾಷ್ಟ್ರೀಯ ಕಾರ್ಯಕಾರಿ ಸಮಿತಿ ಸಭೆ ನಡೆಯುತ್ತಿದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ತರುಣ್ ಚುಗ್ ಹೇಳಿದ್ದಾರೆ. ಸಭೆಗೂ ಮುನ್ನ ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಅವರು ನಿನ್ನೆ ಸಂಜೆ ಪ್ರಧಾನ ಕಾರ್ಯದರ್ಶಿಗಳ ಸಭೆ ನಡೆಸಿದರು.
ಇಂದು ಬೆಳಗ್ಗೆ ಪಕ್ಷದ ರಾಷ್ಟ್ರೀಯ ಪದಾಧಿಕಾರಿಗಳ ಸಭೆ ನಡೆಯಲಿದೆ. ಕಾರ್ಯಕಾರಿ ಸಮಿತಿ ಸಭೆಯಲ್ಲಿ ಕೇಂದ್ರ ಸಚಿವರಾದ ಅಮಿತ್ ಶಾ, ರಾಜನಾಥ್ ಸಿಂಗ್ ಮತ್ತು ನಿತಿನ್ ಗಡ್ಕರಿ ಸೇರಿದಂತೆ ಸುಮಾರು 340 ಪ್ರತಿನಿಧಿಗಳು ಭಾಗವಹಿಸುವ ಸಾಧ್ಯತೆಯಿದೆ.
ಬಿಜೆಪಿ ಆಡಳಿತವಿರುವ ರಾಜ್ಯಗಳ ಮುಖ್ಯಮಂತ್ರಿಗಳೂ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಸಂಜೆ ಆರಂಭವಾಗಲಿರುವ ರಾಷ್ಟ್ರೀಯ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಪಾಲ್ಗೊಳ್ಳಲಿದ್ದಾರೆ. ಮೋದಿ ಅವರು ಎಲ್ಲಾ ಅಧಿವೇಶನಗಳಲ್ಲಿ ಭಾಗವಹಿಸುತ್ತಾರೆ ಮತ್ತು ಪಕ್ಷದ ಕಾರ್ಯಕರ್ತರೊಂದಿಗೆ ಇರುತ್ತಾರೆ. ನಾಳೆ ಸಂಜೆಯವರೆಗೂ ಸಭೆ ನಡೆಯಲಿದೆ.
ಪ್ರಧಾನಮಂತ್ರಿಯವರು ನಾಳೆ ಸಂಜೆ ಸಿಕಂದರಾಬಾದ್‌ನ ಪರೇಡ್ ಮೈದಾನದಲ್ಲಿ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ತೆಲಂಗಾಣದ 35 ಸಾವಿರ ಮತಗಟ್ಟೆಗಳ ಬಿಜೆಪಿ ಕಾರ್ಯಕರ್ತರು ವಿಜಯ ಸಂಕಲ್ಪ ರ್ಯಾಲಿಯಲ್ಲಿ ಪಾಲ್ಗೊಳ್ಳಲಿದ್ದಾರೆ.







