ಮಡಿಕೇರಿ : ರಾಜ್ಯಾದ್ಯಂತ ಈಗಾಗಲೇ ಮುಂಗಾರು ಪ್ರವೇಶವಾಗಿದೆ.. ಬೆಂಗಳೂರಿನಲ್ಲೂ ಬಹಳ ದಿನಗಳಿಂದ ಮಳೆ ಸುರಿಯುತ್ತಿದೆ.. ಮಂಗಳೂರು , ಕೊಡಗು , ಚಿಕ್ಕ ಮಗಳೂರು ಸೇರಿದಂತೆ ಹಲವೆಡೆಯಂತೂ ಬಿಟ್ಟು ಬಿಡದೇ ಧಾರಾಕಾರ ಮಳೆಯಾಗ್ತಿದೆ..
ಮಳೆಯಿಂದಾಗಿ ಕೆರೆ , ಕಟ್ಟೆ , ಡ್ಯಾಮ್ ಗಳು ತುಂಬಿ ಹರಿಯುತ್ತಿವೆ.. ಇನ್ನೂ ಮಡಿಕೇರಿಯಲ್ಲಿ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 53.01 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 2.77 ಮಿ.ಮೀ. ಮಳೆಯಾಗಿತ್ತು. ಜನವರಿಯಿಂದ ಇಲ್ಲಿಯವರೆಗಿನ 779.73 ಮಿ.ಮೀ ಮಳೆಯಾಗಿದೆ. ಕಳೆದ ವರ್ಷ ಇದೇ ಅವಧಿಯಲ್ಲಿ 946.74 ಮಿ.ಮೀ ಮಳೆಯಾಗಿತ್ತು.
ಮಡಿಕೇರಿ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 100.25 ಮಿ.ಮೀ. ಕಳೆದ ವರ್ಷ ಇದೇ ದಿನ 6.18 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 1118.89 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 1392.02 ಮಿ.ಮೀ. ಮಳೆಯಾಗಿತ್ತು.
ವಿರಾಜಪೇಟೆ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 25.87 ಮಿ.ಮೀ. ಕಳೆದ ವರ್ಷ ಇದೇ ದಿನ 1.50 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 661.71 ಮಿ.ಮೀ. ಕಳೆದ ವರ್ಷ ಇದೇ ಅವಧಿಯಲ್ಲಿ 822.24 ಮಿ.ಮೀ. ಮಳೆಯಾಗಿತ್ತು.
ಸೋಮವಾರಪೇಟೆ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 32.90 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 0.63 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 558.57 ಮಿ.ಮೀ. ಕಳೆದ ವರ್ಷ ಇದೇ ಅವಧಿಯಲ್ಲಿ 625.96 ಮಿ.ಮೀ. ಮಳೆಯಾಗಿತ್ತು.
ಹಾರಂಗಿ ಜಲಾಶಯದ ಗರಿಷ್ಠ ಮಟ್ಟ 2,859 ಅಡಿಗಳು, ಇಂದಿನ ನೀರಿನ ಮಟ್ಟ 2856.52 ಅಡಿಗಳು. ನದಿ ತುಂಬಿದ್ದು ಸ್ಥಳೀಯರು ಸಂತಸದಿಂದ ಪೂಜೆ ಮಾಡಿ ಬಾಗಿನ ಅರ್ಪಿಸಿದ್ದಾರೆ..








