ADVERTISEMENT
Monday, October 19, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ನನಗೆ ಹುಷಾರಿಲ್ಲ.. ಯಾವುದಕ್ಕೂ ರೆಡಿಯಾಗಿರು… ಹೀಗೆ ಯುವಿ ಫೋನ್ ಕಾಲ್ ಮಾಡಿದ್ದಾಗ ರೈನಾ ಫುಲ್ ಟೆನ್ಸನ್…!

admin by admin
May 31, 2020
in Newsbeat, Sports, ಕ್ರೀಡೆ
Share on FacebookShare on TwitterShare on WhatsappShare on Telegram

ಸುರೇಶ್ ರೈನಾ 2005ರಲ್ಲಿ ಏಕದಿನ ಕ್ರಿಕೆಟ್‍ಗೆ ಪದಾರ್ಪಣೆ ಮಾಡಿದ್ದರು. ಆದ್ರೆ ಚೊಚ್ಚಲ ಏಕದಿನ ಪಂದ್ಯದಲ್ಲೇ ರೈನಾ ಡಕೌಟ್ ಆಗಿದ್ದರು. ಆನಂತರವೂ ಅವರು ಟೀಮ್ ಇಂಡಿಯಾದ ಏಕದಿನ ತಂಡದಲ್ಲಿ ಸ್ಥಾನ ಪಡೆದುಕೊಂಡಿದ್ದರು. ಆದ್ರೆ ತನ್ನ ಕನಸಿನ ಟೆಸ್ಟ್ ಪಂದ್ಯಕ್ಕೆ ಪದಾರ್ಪಣೆ ಮಾಡಲು ಅವರು ಕಾದಿದ್ದು ಬರೋಬ್ಬರಿ ಐದು ವರ್ಷಗಳು.

ಅಚ್ಚರಿ ಅಂದ್ರೆ ಸುರೇಶ್ ರೈನಾ 2005ರಲ್ಲಿ ಶ್ರೀಲಂಕಾ ವಿರುದ್ಧ ತನ್ನ ಚೊಚ್ಚಲ ಏಕದಿನ ಪಂದ್ಯವನ್ನಾಡಿದ್ರು. ಅದೇ ರೀತಿ ಐದು ವರ್ಷಗಳ ಬಳಿಕ ಅಂದ್ರೆ 2010ರಲ್ಲಿ ಶ್ರೀಲಂಕಾ ವಿರುದ್ಧ ಕೊಲೊಂಬೊದಲ್ಲಿ ಚೊಚ್ಚಲ ಟೆಸ್ಟ್ ಪಂದ್ಯದ ಕ್ಯಾಪ್ ಧರಿಸಿದ್ದರು. ಆದ್ರೆ ಚೊಚ್ಚಲ ಏಕದಿನ ಪಂದ್ಯದಂತೆ ರೈನಾ ತನ್ನ ಚೊಚ್ಚಲ ಟೆಸ್ಟ್ ಪಂದ್ಯವನ್ನು ಆಡಿರಲಿಲ್ಲ. ಲಂಕಾದ ಸ್ಪಿನ್ ಮತ್ತು ವೇಗದ ದಾಳಿಯನ್ನು ದಿಟ್ಟವಾಗಿ ಎದುರಿಸಿ ಶತಕ ಸಹ ಸಿಡಿಸಿದ್ರು. ಈ ಮೂಲಕ ಚೊಚ್ಚಲ ಟೆಸ್ಟ್ ಪಂದ್ಯದಲ್ಲಿ ಶತಕ ಸಿಡಿಸಿದ್ದ ಭಾರತದ 12ನೇ ಆಟಗಾರನಾಗಿ ಹೊರಹೊಮ್ಮಿದ್ದರು. ಇನ್ನೊಂದು ವಿಶೇಷತೆ ಅಂದ್ರೆ ರೈನಾ ಅವರು ಶತಕ ಸಿಡಿಸುವಾಗ ಮತ್ತೊಂದು ಬದಿಯಲ್ಲಿ ಬ್ಯಾಟಿಂಗ್ ಮಾಡುತ್ತಿದ್ದವರು ಮಾಸ್ಟರ್ ಬ್ಲ್ಯಾಸ್ಟರ್ ಸಚಿನ್ ತೆಂಡುಲ್ಕರ್. ಅಲ್ಲದೆ ಈ ಪಂದ್ಯದಲ್ಲಿ ರೈನಾ ಮತ್ತು ತೆಂಡುಲ್ಕರ್ ದ್ವಿಶತಕದ ಜೊತೆಯಾಟವನ್ನು ಆಡಿದ್ದರು. ಸಚಿನ್ ದ್ವಿಶತಕ ದಾಖಲಿಸಿದ್ದರು.  ಇದೀಗ ಸುರೇಶ್ ರೈನಾ ತನ್ನ ಚೊಚ್ಚಲ ಟೆಸ್ಟ್ ಪಂದ್ಯದ ಅನುಭವ ಹಾಗೂ ಚೊಚ್ಚಲ ಟೆಸ್ಟ್ ಪಂದ್ಯವನ್ನು ಆಡುತ್ತೇನೆ ಎಂಬುದರ ಬಗ್ಗೆ ಸುಳಿವು ಯಾರು ಕೊಟ್ಟಿದ್ದರು, ಚೊಚ್ಚಲ ಟೆಸ್ಟ್ ಪಂದ್ಯದ ವೇಳೆ ಯಾವ ರೀತಿ ಒತ್ತಡಕ್ಕೆ ಸಿಲುಕಿದ್ದರು ಎಂಬುದನ್ನು ಆಕಾಶ್ ಚೋಪ್ರಾ ಜೊತೆ ಲೈವ್ ಕಾರ್ಯಕ್ರಮದಲ್ಲಿ ಹಂಚಿಕೊಂಡಿದ್ದಾರೆ.

Related posts

ಬರ್ತೀನಿ ಬಿಡಿ ಅಂತ ಟೇಬಲ್ ಹೊಡೆದ್ರೆ ಈ ರಾಜ್ಯ ನಿಮ್ಮ ತಾತನ ಆಸ್ತಿನಾ?ಕಲ್ಯಾಣ ಕರ್ನಾಟಕದ ಮಣ್ಣಿನ ಜನ ಯಾವುದಕ್ಕೂ ಹೆದರುವುದಿಲ್ಲ ಬಗ್ಗುವುದೂ ಇಲ್ಲ. ಇಂತಹ ಹತ್ತಾರು ಜನರನ್ನು ನಾವು ನೋಡಿದ್ದೇವೆ: ಕುಮಾರಸ್ವಾಮಿ ವಿರುದ್ಧ ಶರಣಪ್ರಕಾಶ್ ಪಾಟೀಲ್ ಆಕ್ರೋಶ

ಬರ್ತೀನಿ ಬಿಡಿ ಅಂತ ಟೇಬಲ್ ಹೊಡೆದ್ರೆ ಈ ರಾಜ್ಯ ನಿಮ್ಮ ತಾತನ ಆಸ್ತಿನಾ?ಕಲ್ಯಾಣ ಕರ್ನಾಟಕದ ಮಣ್ಣಿನ ಜನ ಯಾವುದಕ್ಕೂ ಹೆದರುವುದಿಲ್ಲ ಬಗ್ಗುವುದೂ ಇಲ್ಲ. ಇಂತಹ ಹತ್ತಾರು ಜನರನ್ನು ನಾವು ನೋಡಿದ್ದೇವೆ: ಕುಮಾರಸ್ವಾಮಿ ವಿರುದ್ಧ ಶರಣಪ್ರಕಾಶ್ ಪಾಟೀಲ್ ಆಕ್ರೋಶ

October 18, 2026
ಮಹಾರಾಷ್ಟ್ರದಲ್ಲಿ ಅವಧಿ ಮೀರಿದ ಆಹಾರ ಉತ್ಪನ್ನಗಳ ಅಕ್ರಮ ಮಾರಾಟ ಜಾಲ ಪತ್ತೆ: ₹48 ಲಕ್ಷದ ಸರಕು ಜಪ್ತಿ, ರಿಲಯನ್ಸ್‌ ನಿರ್ದೇಶಕ ಸೇರಿ 10 ಜನರ ವಿರುದ್ಧ FIR

ಮಹಾರಾಷ್ಟ್ರದಲ್ಲಿ ಅವಧಿ ಮೀರಿದ ಆಹಾರ ಉತ್ಪನ್ನಗಳ ಅಕ್ರಮ ಮಾರಾಟ ಜಾಲ ಪತ್ತೆ: ₹48 ಲಕ್ಷದ ಸರಕು ಜಪ್ತಿ, ರಿಲಯನ್ಸ್‌ ನಿರ್ದೇಶಕ ಸೇರಿ 10 ಜನರ ವಿರುದ್ಧ FIR

October 18, 2026

ಅದು 2010ರ ಭಾರತ ಶ್ರೀಲಂಕಾ ನಡುವಿನ ಕೊಲೊಂಬೊ ಟೆಸ್ಟ್ ಪಂದ್ಯ. ಪಂದ್ಯಕ್ಕೆ ಮುನ್ನ ದಿನ ಯುವಿರಾಜ್ ಸಿಂಗ್ ನನಗೆ ಫೋನ್ ಮಾಡಿದ್ದರು. ರೈನಾ ನನಗೆ ಹುಷಾರಿಲ್ಲ. ಹೊಟ್ಟೆ ನೋವು. ನಾಳೆಯ ಪಂದ್ಯವನ್ನಾಡುವುದು ಕಷ್ಟ. ಯಾವುದಕ್ಕೂ ನೀನು ರೆಡಿಯಾಗಿರು ಅಂತ ಹೇಳಿದ್ದರು. ಯುವಿ ಫೋನ್ ಮಾಡಿ ಈ ರೀತಿ ಹೇಳಿದ ನಂತರ ನಾನು ತುಂಬಾನೇ ಒತ್ತಡಕ್ಕೆ ಸಿಲುಕಿದ್ದೆ. ರಾತ್ರಿ ಪೂರ್ತಿ ನಿದ್ದೆ ಮಾಡಿರಲಿಲ್ಲ. ತಲೆಯಲ್ಲಿ ಏನೇನೋ ಯೋಚನೆಗಳು. ಅದು ಬೇರೆ ಶ್ರೀಲಂಕಾದಲ್ಲಿ ಆಗ ಸಿಕ್ಕಾಪಟ್ಟೆ ಸೆಖೆ ಇತ್ತು. ಇನ್ನೊಂದೆಡೆ ಚೊಚ್ಚಲ ಏಕದಿನ ಪಂದ್ಯದಂತೆ ಇಲ್ಲೂ ಡಕೌಟಾದ್ರೆ ಅನ್ನೋ ಭಯ. ಮತ್ತೊಂದೆಡೆ, ಸಂಗಕ್ಕರ, ಜಯವರ್ಧನೆ, ತಿಲಕರತ್ನೆ ಸೇರಿದಂತೆ ಶ್ರೀಲಂಕಾದಂತಹ ಬಲಿಷ್ಠ ತಂಡದ ವಿರುದ್ಧ.. ಹೀಗೆ ನಾನು ಒತ್ತಡಕ್ಕೆ ಸಿಲುಕಿಕೊಂಡೇ ರಾತ್ರಿ ಕಳೆದಿದ್ದೆ ಅಂತಾರೆ ಸುರೇಶ್ ರೈನಾ.

ಸರಿ ಮರುದಿನ ಟಾಸ್ ಆಯ್ತು. ಆದ್ರೆ ನಮಗೆ ಮೊದಲು ಬ್ಯಾಟಿಂಗ್ ಮಾಡುವ ಅವಕಾಶ ಸಿಗಲಿಲ್ಲ. ಎರಡು ದಿನಗಳ ಕಾಲ ನಾವು ಫೀಲ್ಡಿಂಗ್ ಮಾಡಬೇಕಾಯ್ತು. ಕುಮಾರ ಸಂಗಕ್ಕರ (219), ಜಯವರ್ಧನೆ (174), ಪರ್ನವಿತನ (100) ಶತಕ ಸಿಡಿಸಿದಾಗ ಶ್ರೀಲಂಕಾದ ಮೊತ್ತ 4 ವಿಕೆಟ್‍ಗೆ 642 ರನ್. ಅಲ್ಲದೆ ಇನಿಂಗ್ಸ್ ಕೂಡ ಡಿಕ್ಲೇರ್ ಮಾಡಿಕೊಂಡಿತ್ತು. ಹೀಗಾಗಿ ಭಾರತೀಯ ಬೌಲರ್‍ಗಳು ಎರಡು ದಿನ ತುಂಬಾನೇ ಬೇಸರದಲ್ಲಿದ್ದರು. ಯಾರು ಕೂಡ ಖುಷಿಯಾಗಿರಲಿಲ್ಲ. ಆದ್ರೆ ಎರಡು ದಿನ ಎದುರಾಳಿ ತಂಡದ ಆಟವನ್ನು ನೋಡುತ್ತಿದ್ದಂತೆ ನನ್ನಲ್ಲಿದ್ದ ಒತ್ತಡಗಳು ಕೂಡ ನಿವಾರಣೆಯಾಗಿದ್ದವು ಎಂಬುದನ್ನು ಸುರೇಶ್ ರೈನಾ ನೆನಪಿಸಿಕೊಳ್ತಾರೆ.

ನಂತರ ನಮ್ಮ ಬ್ಯಾಟಿಂಗ್ ಸರದಿ. ಆಗ ನಾನು ಬ್ಯಾಟಿಂಗ್‍ಗೆ ಪೂರ್ತಿಯಾಗಿ ರೆಡಿಯಾಗಿದ್ದೆ. ಆದ್ರೂ ಚೊಚ್ಚಲ ಏಕದಿನ ಪಂದ್ಯದಂತೆ ಟೆಸ್ಟ್ ನಲ್ಲೂ ಡಕೌಟ್ ಆದ್ರೆ.. ಅನ್ನೋ ಸಣ್ಣ ಆತಂಕ ಇದ್ದೆ ಇತ್ತು. ಹಾಗೇ ಲಕ್ಷ್ಮಣ್ ಔಟಾಗುತ್ತಿದ್ದಂತೆ ನಾನು ಬ್ಯಾಟ್ ಹಿಡಿದು ಮೈದಾನಕ್ಕಿಳಿದೆ. ಆಗ ಬ್ಯಾಟಿಂಗ್ ಮಾಡುತ್ತಿದ್ದವರು ಸಚಿನ್ ತೆಂಡುಲ್ಕರ್. ಇದು ನನಗೆ ತುಂಬಾನೇ ನೆರವಾಯ್ತು. ಆಗ ನಾವು ಫಾಲೋಆನ್ ನಿಂದ ತಪ್ಪಿಸಿಕೊಳ್ಳಲು 201 ರನ್‍ಗಳು ಬೇಕಿದ್ದವು. ಸಚಿನ್ ಮತ್ತು ನಾನು ಅದ್ಭುತವಾದ ಇನಿಂಗ್ಸ್ ಕಟ್ಟಿದ್ದೇವು. ಸಚಿನ್ ನನಗೆ ಮಾರ್ಗದರ್ಶನ ನೀಡುತ್ತಿದ್ದರು. ನಾನು ಆಕರ್ಷಕ 120 ರನ್ ಸಿಡಿಸಿದ್ದೆ. ಅಲ್ಲದೆ ಸಚಿನ್ ಜೊತೆ ಸೇರಿಕೊಂಡು 256 ರನ್‍ಗಳ ಜೊತೆಯಾಟವನ್ನು ಆಡಿದ್ದೆ. ಈ ಮೂಲಕ ಭಾರತ ಫಾಲೋ ಆನ್ ಭೀತಿಯಿಂದ ತಪ್ಪಿಸಿಕೊಂಡು ಲಂಕಾ ವಿರುದ್ಧ ಇನಿಂಗ್ಸ್ ಮುನ್ನಡೆ ಗಳಿಸಲು ಕೂಡ ಯಶಸ್ವಿಯಾಯ್ತು. ತೆಂಡುಲ್ಕರ್ ಮನಮೋಹಕ 203 ರನ್ ದಾಖಲಿಸಿದ್ದರು. ಭಾರತ 707 ರನ್ ದಾಖಲಿಸಿತ್ತು. ಪಂದ್ಯ ಡ್ರಾನಲ್ಲಿ ಅಂತ್ಯಗೊಂಡಿತ್ತು ಎಂಬುದನ್ನು ಸುರೇಶ್ ರೈನಾ ಈ ವೇಳೆ ಸ್ಮರಿಸಿಕೊಂಡ್ರು.

ಇದೇ ವೇಳೆ ಸುರೇಶ್ ರೈನಾ ಇನ್ನೊಂದು ವಿಚಾರವನ್ನು ಹೇಳಿಕೊಂಡ್ರು. ಟಿ-ಟ್ವೆಂಟಿಯಲ್ಲಿ ನಾವು ಸ್ವಲ್ಪ ರಿಸ್ಕ್ ತೆಗೆದುಕೊಳ್ಳಬಹುದು. ಆದ್ರೆ ಏಕದಿನ ಮತ್ತು ಟೆಸ್ಟ್ ಪಂದ್ಯಗಳಿಗೆ ನಾವು ಸಾಕಷ್ಟು ತಯಾರಿಗಳನ್ನು ನಡೆಸಬೇಕಾಗುತ್ತದೆ. ಹಾಗೇ ನಾನು ಆಫ್ ಸ್ಪಿನ್ನರ್ ಮತ್ತು ಬೌನ್ಸರ್ ಎಸೆತಗಳಿಗೆ ಕೆಲವೊಂದು ಬಾರಿ ಎಡವಿಬಿದ್ದಿದ್ದೇನೆ ಎಂಬುದನ್ನು ಸಹ ಒಪ್ಪಿಕೊಂಡ್ರು. ಹಾಗೇ ನನಗೆ ಏಕದಿನ ಪಂದ್ಯದಂತೆ ಟೆಸ್ಟ್ ತಂಡದಲ್ಲಿ ಹೆಚ್ಚು ಅವಕಾಶಗಳು ಸಿಗಲಿಲ್ಲ ಅಂತ ಸ್ವಲ್ಪ ಬೇಜಾರು ಕೂಡ ಮಾಡಿಕೊಂಡ್ರು.

Tags: Suresh Raina
ShareTweetSendShare
Join us on:

Related Posts

ಬರ್ತೀನಿ ಬಿಡಿ ಅಂತ ಟೇಬಲ್ ಹೊಡೆದ್ರೆ ಈ ರಾಜ್ಯ ನಿಮ್ಮ ತಾತನ ಆಸ್ತಿನಾ?ಕಲ್ಯಾಣ ಕರ್ನಾಟಕದ ಮಣ್ಣಿನ ಜನ ಯಾವುದಕ್ಕೂ ಹೆದರುವುದಿಲ್ಲ ಬಗ್ಗುವುದೂ ಇಲ್ಲ. ಇಂತಹ ಹತ್ತಾರು ಜನರನ್ನು ನಾವು ನೋಡಿದ್ದೇವೆ: ಕುಮಾರಸ್ವಾಮಿ ವಿರುದ್ಧ ಶರಣಪ್ರಕಾಶ್ ಪಾಟೀಲ್ ಆಕ್ರೋಶ

ಬರ್ತೀನಿ ಬಿಡಿ ಅಂತ ಟೇಬಲ್ ಹೊಡೆದ್ರೆ ಈ ರಾಜ್ಯ ನಿಮ್ಮ ತಾತನ ಆಸ್ತಿನಾ?ಕಲ್ಯಾಣ ಕರ್ನಾಟಕದ ಮಣ್ಣಿನ ಜನ ಯಾವುದಕ್ಕೂ ಹೆದರುವುದಿಲ್ಲ ಬಗ್ಗುವುದೂ ಇಲ್ಲ. ಇಂತಹ ಹತ್ತಾರು ಜನರನ್ನು ನಾವು ನೋಡಿದ್ದೇವೆ: ಕುಮಾರಸ್ವಾಮಿ ವಿರುದ್ಧ ಶರಣಪ್ರಕಾಶ್ ಪಾಟೀಲ್ ಆಕ್ರೋಶ

by Shwetha
October 18, 2026
0

ರಾಜ್ಯ ರಾಜಕಾರಣದ ವಾಕ್ಸಮರ ಈಗ ಅತಿರೇಕಕ್ಕೆ ತಲುಪಿದ್ದು ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಅವರ ಅಬ್ಬರಕ್ಕೆ ಸಚಿವ ಶರಣಪ್ರಕಾಶ್ ಪಾಟೀಲ್ ಅವರು ಕಲ್ಬುರ್ಗಿಯಲ್ಲಿ ಅತ್ಯಂತ ಕಟು...

ಮಹಾರಾಷ್ಟ್ರದಲ್ಲಿ ಅವಧಿ ಮೀರಿದ ಆಹಾರ ಉತ್ಪನ್ನಗಳ ಅಕ್ರಮ ಮಾರಾಟ ಜಾಲ ಪತ್ತೆ: ₹48 ಲಕ್ಷದ ಸರಕು ಜಪ್ತಿ, ರಿಲಯನ್ಸ್‌ ನಿರ್ದೇಶಕ ಸೇರಿ 10 ಜನರ ವಿರುದ್ಧ FIR

ಮಹಾರಾಷ್ಟ್ರದಲ್ಲಿ ಅವಧಿ ಮೀರಿದ ಆಹಾರ ಉತ್ಪನ್ನಗಳ ಅಕ್ರಮ ಮಾರಾಟ ಜಾಲ ಪತ್ತೆ: ₹48 ಲಕ್ಷದ ಸರಕು ಜಪ್ತಿ, ರಿಲಯನ್ಸ್‌ ನಿರ್ದೇಶಕ ಸೇರಿ 10 ಜನರ ವಿರುದ್ಧ FIR

by Shwetha
October 18, 2026
0

ಅವಧಿ ಮುಗಿದ, ಹಾನಿಗೊಳಗಾದ ಹಾಗೂ ಗ್ರಾಹಕರಿಂದ ತಿರಸ್ಕರಿಸಲ್ಪಟ್ಟ ಆಹಾರ ಉತ್ಪನ್ನಗಳನ್ನು ನಾಶಪಡಿಸುವ ಬದಲು ಮತ್ತೆ ಮಾರುಕಟ್ಟೆಗೆ ತಂದು ಮಾರಾಟ ಮಾಡಲಾಗುತ್ತಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಮಹಾರಾಷ್ಟ್ರದ ಆಹಾರ...

ಪ್ರಧಾನಿಯ ತಂಬೂರಿ ಸದ್ದಿಗೆ ಕಾಂಗ್ರೆಸ್ ಕಿಡಿ: ಸನಾತನ ಸಂಸ್ಕೃತಿಯ ವಿರೋಧಿ ಕಾಂಗ್ರೆಸ್ ಎಂದ ಕೇಸರಿ ಪಡೆ

ಮೋದಿಯಾಟ ಕೊನೆಗಾಣಿಸಲು ಸಿಜೆಪಿ ಪ್ರತಿಭಟನೆಗೆ ಕಾಂಗ್ರೆಸ್ ಫಂಡಿಂಗ್: ಪ್ರಜಾಪ್ರಭುತ್ವ ಉಳಿಸಲು ಹಣ ಕೊಟ್ಟರೆ ತಪ್ಪೇ?- ಬಿ ಕೆ ಹರಿಪ್ರಸಾದ್

by Shwetha
October 18, 2026
0

ದೇಶದ ಸಂವಿಧಾನ ಮತ್ತು ಪ್ರಜಾಪ್ರಭುತ್ವವನ್ನು ರಕ್ಷಿಸಲು ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ನಡೆಯುತ್ತಿರುವ ಪ್ರತಿಯೊಂದು ಹೋರಾಟಕ್ಕೂ ಕಾಂಗ್ರೆಸ್ ಪಕ್ಷದ ಬೆಂಬಲವಿದೆ. ಕಾಕ್ರೋಚ್ ಜನತಾ ಪಾರ್ಟಿ ಅಂದರೆ...

ಕಬ್ಬು ಬೆಲೆ ನಿಗದಿಗೆ ಆಗ್ರಹಿಸಿ ರೈತರ ಪ್ರತಿಭಟನೆ: ರೈತರೊಂದಿಗೆ ಸಭೆ ನಡೆಸಲು ಬೆಳಗಾವಿಗೆ ಸಿಎಂ ಡಿ.ಕೆ. ಶಿವಕುಮಾರ್

ಕಬ್ಬು ಬೆಲೆ ನಿಗದಿಗೆ ಆಗ್ರಹಿಸಿ ರೈತರ ಪ್ರತಿಭಟನೆ: ರೈತರೊಂದಿಗೆ ಸಭೆ ನಡೆಸಲು ಬೆಳಗಾವಿಗೆ ಸಿಎಂ ಡಿ.ಕೆ. ಶಿವಕುಮಾರ್

by Shwetha
October 18, 2026
0

ಕಬ್ಬಿನ ಬೆಲೆ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಬೆಳಗಾವಿ, ಧಾರವಾಡ, ಕಲಬುರಗಿ ಸೇರಿದಂತೆ ರಾಜ್ಯದ ಹಲವು ಭಾಗಗಳಲ್ಲಿ ರೈತರು ಪ್ರತಿಭಟನೆ ನಡೆಸುತ್ತಿರುವ ಹಿನ್ನೆಲೆಯಲ್ಲಿ, ಮುಖ್ಯಮಂತ್ರಿ...

ಬಾಂಬೆ ಬಾಯ್ಸ್ ಪುಸ್ತಕ ಹೊರಬಂದರೆ ನಾಯಕರು ಬೆತ್ತಲಾಗುತ್ತಾರೆ,ಸಿದ್ದರಾಮಯ್ಯ ಮುಗಿಸಿದರೆ ನಮ್ಮ ಹಾದಿ ಸುಲಭ ಎಂಬ ಲೆಕ್ಕಾಚಾರ: ಸ್ಟಿಂಗ್ ಆಪರೇಷನ್ ಹಿಂದಿನ ಕರಾಳ ಸತ್ಯ ಬಿಚ್ಚಿಟ್ಟ ಎಚ್ ವಿಶ್ವನಾಥ್

ಬಾಂಬೆ ಬಾಯ್ಸ್ ಪುಸ್ತಕ ಹೊರಬಂದರೆ ನಾಯಕರು ಬೆತ್ತಲಾಗುತ್ತಾರೆ,ಸಿದ್ದರಾಮಯ್ಯ ಮುಗಿಸಿದರೆ ನಮ್ಮ ಹಾದಿ ಸುಲಭ ಎಂಬ ಲೆಕ್ಕಾಚಾರ: ಸ್ಟಿಂಗ್ ಆಪರೇಷನ್ ಹಿಂದಿನ ಕರಾಳ ಸತ್ಯ ಬಿಚ್ಚಿಟ್ಟ ಎಚ್ ವಿಶ್ವನಾಥ್

by Shwetha
October 18, 2026
0

ರಾಜ್ಯ ರಾಜಕಾರಣದಲ್ಲಿ ಬಿರುಗಾಳಿ ಎಬ್ಬಿಸಿರುವ ಸ್ಟಿಂಗ್ ಆಪರೇಷನ್ ಮತ್ತು ಚಾರಿತ್ರ್ಯಹನನದ ಸಂಸ್ಕೃತಿಯ ಬಗ್ಗೆ ಹಿರಿಯ ರಾಜಕಾರಣಿ ಎಚ್ ವಿಶ್ವನಾಥ್ ಈ ರೀತಿ ಹೇಳಿದ್ದಾರೆ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram