ಹಿಮಾಚಲ ಪ್ರದೇಶದಲ್ಲಿ ಕಣಿವೆಗೆ ಬಿದ್ದ ಬಸ್ – 16 ಮಂದಿ ಸಾವು…
ಭೀಕರ ಅಪಘಾತವೊಂದು ಸಂಭವಿಸಿದ್ದು ಶಾಲಾ ಮಕ್ಕಳು ಸೇರಿದಂತೆ 16 ಮಂದಿ ಸಾವನ್ನಪ್ಪಿರುವ ಘಟನೆ ಹಿಮಾಚಲದ ಪ್ರದೇಶದಲ್ಲಿ ನಡೆದಿದೆ.
ಹಿಮಾಚಲ ಪ್ರದೇಶದ ಕುಲುವಿನ ಸೈನ್ಜ್ ಕಣಿವೆಯಲ್ಲಿ ಸೋಮವಾರ ಮುಂಜಾನೆ ಖಾಸಗಿ ಬಸ್ ಒಂದು ಆಳವಾದ ಕಂದಕಕ್ಕೆ ಬಿದ್ದ ಪರಿಣಾಮ ಶಾಲಾ ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದಾರೆ. ಬೆಳಗ್ಗೆ 8 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ. ಬಸ್‌ನಲ್ಲಿ ಸುಮಾರು 45 ಮಂದಿ ಪ್ರಯಾಣಿಕರಿದ್ದರು ಎನ್ನಲಾಗಿದ್ದು ಘಟನೆಯಲ್ಲಿ ಹಲವರು ಗಾಯಗೊಂಡಿರುವ ಶಂಕೆ ವ್ಯಕ್ತವಾಗಿದೆ.
https://twitter.com/i/status/1543832900847964161
ಅಪಘಾತದ ಸ್ಥಳವು ಜಿಲ್ಲಾ ಕೇಂದ್ರದಿಂದ ಸುಮಾರು 60 ಕಿ.ಮೀ ದೂರದಲ್ಲಿದೆ. ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದ್ದು, ಇದುವರೆಗೆ ಮೂವರು ಗಾಯಗೊಂಡವರನ್ನು ರಕ್ಷಿಸಲಾಗಿದೆ ಎಂದು ಮೂಲಗಳು ವರದಿ ಮಾಡಿವೆ.
ಘಟನೆ ಕುರಿತು ಪ್ರಧಾನಿ ಮೋದಿ ಸಂತಾಪ ವ್ಯಕ್ತಪಡಿಸಿದ್ದಾರೆ. ಹಿಮಾಚಲ ಪ್ರದೇಶದ ಕುಲುವಿನಲ್ಲಿ ಸಂಭವಿಸಿದ ಬಸ್ ಅಪಘಾತ ಹೃದಯ ವಿದ್ರಾವಕವಾಗಿದೆ. ಈ ದುಃಖದ ಸಮಯದಲ್ಲಿ ಮೃತರ ಕುಟುಂಬಗಳಿಗೆ ನನ್ನ ಸಂತಾಪವಿದೆ. ಗಾಯಗೊಂಡವರು ಬೇಗ ಗುಣಮುಖರಾಗಲಿ ಎಂದ ಮೋದಿ ಟ್ವೀಟ್ ಮಾಡಿದ್ದಾರೆ.








