Vijayapura | ಗಾಳಿ ಮಳೆಗೆ ಮನೆಯ ಮೇಲ್ಛಾವಣಿ ಕುಸಿತ
ವಿಜಯಪುರ : ಜಿಲ್ಲೆಯ ದೇವರ ಹಿಪ್ಪರಗಿ ಪಟ್ಟಣದ ಚಿಕ್ಕರೂಗಿ ಗ್ರಾಮದಲ್ಲಿ ಕಳೆದ ರಾತ್ರಿ ಸುರಿದ ಭಾರಿ ಮಳೆ ಗಾಳಿಗೆ ಮನೆಯ ಮೇಲ್ಛಾವಣಿ ಕುಸಿತವಾಗಿದೆ.
ಬಸವರಾಜ್ ಸಿಂದಗಿ ಎಂಬುವವರ ಮನೆ ಕುಸಿತವಾಗಿದ್ದು, ಯಾವುದೇ ಸಾವು ನೋವು ಸಂಭವಿಸಿಲ್ಲ.
ಮನೆ ಮೇಲ್ಛಾವಣಿಯ ಕುಸಿಯುವ ವೇಳೆಯಲ್ಲಿ ಕುಟುಂಬಸ್ಥರು ಮನೆಯಿಂದ ಹೊರಗಡೆ ಓಡಿ ಬಂದಿದ್ದಾರೆ.
ಹೀಗಾಗಿ ಭಾರಿ ಅನಾಹುತ ತಪ್ಪಿದಂತಾಗಿದೆ.
ಮೇಲ್ಛಾವಣಿ ಕುಸಿತದಿಂದ ಮನೆಯಲ್ಲಿದ್ದ ವಸ್ತುಗಳು ಜಖಂಗೊಂಡಿವೆ.
ದೇವರಹಿಪ್ಪರಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
ಇನ್ನು ಜಿಲ್ಲೆಯಲ್ಲಿ ಕಳೆದ ಕೆಲವು ದಿನಗಳಿಂದ ಮಳೆ ಸುರಿಯುತ್ತಲೇ ಇದೆ.
ಹೀಗಾಗಿ ಜಿಲ್ಲೆಯಾದ್ಯಂತ ನಾನಾ ಅವಾಂತರಗಳು ಸೃಷ್ಠಿಯಾಗುತ್ತಿವೆ.